ಮಂಗಳೂರು : ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕುಟುಂಬ ಸಮೇತ ಉಳ್ಳಾಲದ ಸೋಮೇಶ್ವರದಲ್ಲಿ ನಡೆದ ಎಂಎಲ್ಸಿ ಬಿ.ಎಂ.ಫಾರೂಕ್ ಅವರ ಮಗಳ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಸಂಜೆ ಬೆಂಗಳೂರಿನಿಂದ ಮಂಗಳೂರು ಏರ್ ಪೋರ್ಟ್ ಗೆ ಬಂದಿಳಿದ ಮುಖ್ಯಮಂತ್ರಿ ಕುಮಾರಸ್ವಾಮಿ, ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ, ಅವರ ಪತ್ನಿ ಚೆನ್ನಮ್ಮ, ಕುಮಾರ ಸ್ವಾಮಿ ಪತ್ನಿ ಶಾಸಕಿ ಅನಿತಾ ಕುಮಾರ ಸ್ವಾಮಿ, ಸಚಿವ ಎಚ್.ಡಿ. ರೇವಣ್ಣ, ಪತ್ನಿ ಭವಾನಿ ರೇವಣ್ಣ, ಕುಮಾರಸ್ವಾಮಿ ಪುತ್ರ ಚಿತ್ರನಟ ನಿಖಿಲ್ ಗೌಡ, ಯುವ ನಾಯಕ ಪ್ರಜ್ವಲ್, ಸಚಿವ ಜಮೀರ್ ಅಹ್ಮದ್, ಸಂಸದ ಎಲ್. ಶಿವರಾಮೇಗೌಡ, ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್, ವಿಧಾನ ಪರಿಷತ್ ಸದಸ್ಯ ಭೋಜೇಗೌಡ, ಶಾಸಕ ಬಸವರಾಜ್ ಹೊರಟ್ಟಿ, ಫಾರೂಕ್ ಅವರ ಸಹೋದರ ಮಂಗಳೂರು ಉತ್ತರ ಕ್ಷೇತ್ರದ ಮಾಜಿ ಶಾಸಕ ಮೊಯ್ದಿನ್ ಬಾವ, ಮಾಜಿ ಸಚಿವರಾದ ಅಮರನಾಥ ಶೆಟ್ಟಿ, ಬಿ. ರಮನಾಥ ರೈ ಮೊದಲಾದವರು ಭಾಗವಹಿಸಿ ವಧುವರರನ್ನು ಹಾರೈಸಿ ಬಳಿಕ ಸಮುದ್ರ ತಟದಲ್ಲಿ ನಡೆದ ಔತಣ ಕೂಟದಲ್ಲಿ ಪಾಲ್ಗೊಂಡರು.
ನಂತರ ಮುಖ್ಯಮಂತ್ರಿ ಕುಮಾರಸ್ವಾಮಿ ಕುಟುಂಬ ರಾತ್ರಿ ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣ ಮೂಲಕ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ತೆರಳಿದರು.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…