Featured

ಬಿ.ಎಸ್. ಯಡಿಯೂರಪ್ಪ ರಿಂದ ‘ಕಮಲ ಜ್ಯೋತಿ’ ಅಭಿಯಾನಕ್ಕೆ ಚಾಲನೆ – Vishwanews24

ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಸಿದ್ದತೆ ಆರಂಭಿಸಿರುವ ಬಿಜೆಪಿ  ರಾಜ್ಯದಲ್ಲಿ ಕಮಲಜ್ಯೋತಿ ಅಭಿಯಾನಕ್ಕೆ ಚಾಲನೆ ನೀಡಿತು. ನಗರದ ಡಾಲರ್ಸ್ ಕಾಲೋನಿಯಲ್ಲಿರುವ ಬಿಎಸ್​ವೈ ನಿವಾಸ ಮುಂಭಾಗದಲ್ಲಿ ರಂಗೋಲಿಯಿಂದ ಬಿಡಿಸಿದ ಕಮಲ ಚಿತ್ರದಲ್ಲಿ ದೀಪ ಬೆಳಗಿಸೋ ಮೂಲಕ ಕಮಲಜ್ಯೋತಿ ಸಂಕಲ್ಪ ಅಭಿಯಾನಕ್ಕೆ ಚಾಲನೆ ನೀಡಲಾಯಿತು..

ಬೆಂಗಳೂರಿನಲ್ಲಿ ಕೇಂದ್ರ ಸರಕಾರದ ಯೋಜನೆಗಳ ಫಲಾನುಗಳ ಮನೆಗಳಿಗೆ ಪಕ್ಷದ ಮುಖಂಡರೊಂದಿಗೆ ಭೇಟಿ ನೀಡಿ ದೀಪ ಹಚ್ಚಿದರು. ಪ್ರಧಾನಿ ಮೋದಿ ಅವರ ನೇತೃತ್ವದ ಕೇಂದ್ರ ಸರಕಾರದ ಸಾಧನೆಗಳ ಬಗ್ಗೆ ಜನರಲ್ಲಿ ತಿಳಿವಳಿಕೆ ಮೂಡಿಸುವ ಮೂಲಕ ಕಮಲ ದೀಪ ಹಚ್ಚೋಣ, ಮತ್ತೊಮ್ಮೆ ಮೋದಿ ಸರಕಾರ ಅಧಿಕಾರಕ್ಕೆ ತರುವ ಸಂಕಲ್ಪ ಮಾಡೋಣ ಎಂದು ಬಿಎಸ್ ವೈ ಇದೇ ವೇಳೆ ತಿಳಿಸಿದರು.

ಬಳಿಕ ಯಡಿಯೂರಪ್ಪ ಅವರು ಮನೆ ಮನೆಗೆ ತೆರಳಿ ದೀಪ ಹಚ್ಚಿದರು. ಈ ವೇಳೆ ಬಿಎಸ್​ವೈ ಅವರನ್ನು ಮಹಿಳೆಯರು ಮತ್ತು ಮಕ್ಕಳು ಆರತಿ ಎತ್ತಿ‌ ಸ್ವಾಗತಿಸಿದರು. ಮಕ್ಕಳು ಕಮಲ ನೀಡಿ ಸ್ವಾಗತಿಸಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮಾಡಿರುವ ಜನಪರ ಕಾರ್ಯಕರ್ಮಗಳ ಬಗ್ಗೆ ಜನರಿಗೆ ತಿಳಿಸಿಕೊಡುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ. ದೇಶದಲ್ಲಿ ಮತ್ತೊಮ್ಮೆ ಕಮಲ ಜ್ಯೋತಿ ಬೆಳಗಲಿದೆ ಎಂದು ಹೇಳಿದರು..

ಬೆಂಗಳೂರಿನ ರಾಧಾಕೃಷ್ಣ ದೇವಸ್ಥಾನ ಸಂಜಯ್ ನಗರ, ಹೆಬ್ಬಾಳ ಬಳಿ ಮಹಿಳಾ ಕಾರ್ಯಕರ್ತರಿಂದ ‘ಕಮಲ ಜ್ಯೋತಿ’ ರಂಗೋಲಿ ಚಿತ್ತಾರದಲ್ಲಿ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಭಾಗಿಯಾದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago