ಬೆಂಗಳೂರು : ಅನರ್ಹ ಶಾಸಕರ ಕುರಿತ ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಅನರ್ಹ ಶಾಸಕರು ಇಂದು ಅಧಿಕೃತವಾಗಿ ಸಿಎಂ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಮ್ಮುಖದಲ್ಲಿ ಎಲ್ಲಾ ಅನರ್ಹರು ಕಮಲ ಪಾಳೆಯ ಸೇರಿದರು. ಅವರಿಗೆ ಪಕ್ಷದ ಧ್ವಜ ನೀಡಿ ಶಾಲು ಹೊದಿಸಿ ಅಧಿಕೃತವಾಗಿ ಪಕ್ಷಕ್ಕೆ ನಾಯಕರು ಸ್ವಾಗತಿಸಿದರು. ಈ ಸಂದರ್ಭಕ್ಕೆ ಬಿಜೆಪಿ ರಾಜ್ಯ ಉಸ್ತುವಾರಿ ಮುರುಳೀಧರ್ ಕೂಡ ಸಾಕ್ಷಿಯಾದರು.
ಐಎಂಎ ಪ್ರಕರಣದ ಪ್ರಮುಖ ಆರೋಪಿಯಾಗಿರುವ ರೋಷನ್ ಬೇಗ್ ಸೇರ್ಪಡೆಗೆ ಬಿಜೆಪಿಯಲ್ಲಿ ಭಾರೀ ವಿರೋಧ ವ್ಯಕ್ತವಾದ ಹಿನ್ನೆಲೆ ಅವರು ಪಕ್ಷಕ್ಕೆ ಸೇರ್ಪಡನೆಯಾಗಿಲ್ಲ
ಭೈರತಿ ಬಸವರಾಜು, ಬಿ.ಸಿ.ಪಾಟೀಲ್, ಎಸ್.ಟಿ.ಸೋಮಶೇಖರ್, ರಮೇಶ್ ಜಾರಕಿಹೊಳಿ, ಮುನಿರತ್ನ, ಆನಂದ್ ಸಿಂಗ್, ಹೆಚ್.ವಿಶ್ವನಾಥ್, ಮಹೇಶ್ ಕಮಟಳ್ಳಿ, ಪ್ರತಾಪ್ ಗೌಡ ಪಾಟೀಲ್, ಹೆಚ್.ಸುಧಾಕರ್, ಶಿವರಾಜ್ ಹೆಬ್ಬಾರ್, ಶ್ರೀಮಂತ್ ಪಾಟೀಲ್, ಎಂಟಿಬಿ ನಾಗರಾಜ್, ಕೆ.ಗೋಪಾಲಯ್ಯ, ಕೆ.ಸಿ. ನಾರಾಯಣಗೌಡ ಮತ್ತು ಆರ್. ಶಂಕರ್ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…