ಬಿ.ಎಸ್. ವೈ ಯವರು ಕರ್ನಾಟಕ ರಾಜ್ಯ ಕಂಡ ಅತ್ಯಂತ ‘ದುರ್ಬಲ’ ಮುಖ್ಯಮಂತ್ರಿ : ಸಿದ್ದರಾಮಯ್ಯ -Vishwanews24

ಕಲಬುರಗಿ: ಮುಖ್ಯಮಂತ್ರಿ  ಬಿ.ಎಸ್. ಯಡಿಯೂರಪ್ಪ ಅವರು ಕರ್ನಾಟಕ ರಾಜ್ಯ ಕಂಡ ಅತ್ಯಂತ ‘ದುರ್ಬಲ’ ಮುಖ್ಯಮಂತ್ರಿಯಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರಿಂದ ಕೇಂದ್ರದ ನೆರವು ಪಡೆಯಲು ಅವರಿಗೆ ಯಾವುದೇ ಧೈರ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಟೀಕಿಸಿದ್ದಾರೆ

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರದ ಅನುದಾನ ಕೇಳಲು ಯಡಿಯೂರಪ್ಪ ಹೆದರುತ್ತಿದ್ದಾರೆ. ಅವರು ಯಾಕಾಗಿ ಹೆದರುತ್ತಿದ್ದಾರೆ ಎಂಬುದೇ ಅರ್ಥವಾಗುತ್ತಿಲ್ಲ ಎಂದು ವ್ಯಂಗ್ಯವಾಡಿದರು.

ನಿನ್ನೆ ಯಡಿಯೂರಪ್ಪ ಅವರ ನೇತೃತ್ವದ ಸಚಿವ ಸಂಪುಟಕ್ಕೆ ಸೇರಿದವರು ನಮ್ಮ ಆಪ್ತರು ಅಥವಾ ಸ್ನೇಹಿತರು ಅಲ್ಲ. ನೈಜ ಗೆಳೆಯರು ಪಕ್ಷ ತೊರೆದು ಬೇರೆ ಪಕ್ಷಕ್ಕೆ ಹೋಗುವುದಿಲ್ಲ. ಅವರು ತಮ್ಮೊಂದಿಗೆ ಆಪ್ತರಂತೆ ನಟಿಸಿದ್ದರು ಅಷ್ಟೇ. ಆದರೆ ನಿಜವಾಗಿ ಅವರು ಆಪ್ತರಾಗಿರಲಿಲ್ಲ ಎಂದು ಹೇಳಿದರು

ಇದಕ್ಕೂ ಮುನ್ನ 85  ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಶ್ರೀ ವಿಜಯ ಪ್ರಧಾನ ವೇದಿಕೆಯಲ್ಲಿ ಸಮಾರೋಪ  ಸಭೆಯಲ್ಲಿ ಮಾತನಾಡಿದ ಅವರು,  ಅಭಿವ್ಯಕ್ತಿ ಸ್ವಾತಂತ್ರ್ಯ ಸಾಹಿತ್ಯದ ಉಸಿರು, ಸ್ವಾತಂತ್ರ್ಯದ  ಜೀವವಾಗಿದೆ. ಆದ್ದರಿಂದ ಅದನ್ನು ಮೊಟಕುಗೊಳಿಸುವ ಹಕ್ಕು ಯಾರಿಗೂ ಇಲ್ಲ ಎಂದರು.

ಅಭಿವ್ಯಕ್ತಿ ಸಾಹಿತ್ಯದ ಉಸಿರು, ಜೀವ ಹೀಗಾಗಿ ಅದನ್ನು  ಹತ್ತಿಕ್ಕುವ ಪ್ರಯತ್ನವನ್ನು ಯಾವುದೇ ಸರ್ಕಾರ, ಪಕ್ಷ ಮಾಡಬಾರದು ಎಂದು ಅವರು  ಎಚ್ಚರಿಸಿದರು.

ಕಲಬುರಗಿಯಲ್ಲಿ  ಮೂರು ದಿನಗಳ ಕಾಲ‌ ನಡೆದ ಸಮ್ಮೇಳನದಲ್ಲಿ 4-5 ಲಕ್ಷ ಜನ ಭಾಗವಹಿಸಿದ್ದು, ನಿಜಕ್ಕೂ  ಕನ್ನಡದ ಅಸ್ಮೀತೆಯ ದೃಷ್ಟಿಯಿಂದ ಇದೊಂದು ಸ್ವಾಗತಾರ್ಹ ವಿಚಾರ ಎಂದರು.

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

7 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

7 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

1 day ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

1 day ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

1 day ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

1 day ago