Featured

ಬಿ.ಪಿ.ಎಲ್ ಕಾರ್ಡ್ ಆದಾಯ ಮಿತಿ ಪರಿಷ್ಕರಣೆಗೆ ಸರ್ಕಾರ ಚಿಂತನೆ – vishwanews24

ಬಿ.ಪಿ.ಎಲ್ ಕಾರ್ಡ್ ಆದಾಯ ಮಿತಿ ಪರಿಷ್ಕರಣೆಗೆ ಸರ್ಕಾರ ಚಿಂತನೆ

ಬೆಳಗಾವಿ : ಬಿ.ಪಿ.ಎಲ್.ಕಾರ್ಡ್ ಆದಾಯ ಮಿತಿ ಪರಿಷ್ಕರಣೆಗೆ ಸರ್ಕಾರ ಚಿಂತನೆ ನಡೆಸಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ.

ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿಂದು ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಹಾಗೂ ಶ್ರವಣಬೆಳಗೊಳ ಶಾಸಕ ಬಾಲಕೃಷ್ಣ.ಸಿ.ಎನ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಬಿ.ಪಿ.ಎಲ್ ಕಾರ್ಡ್‌ದಾರರ ಆದಾಯ ಮಿತಿಯನ್ನು 1 ಲಕ್ಷ 20 ಸಾವಿರ ರೂಪಾಯಿಗೆ ಮಿತಿಗೊಳಿಸಿದೆ. ಆದರೆ ಕೂಲಿ ಕೆಲಸಗಾರರಿಗೂ ಪ್ರತಿದಿನ 500 ರೂಪಾಯಿ ಕೂಲಿ ದೊರೆಯುತ್ತದೆ. ಇದರ ಆಧಾರದಲ್ಲಿ ಕೂಲಿ ಮಾಡುವವರ ಆದಾಯವೂ ವರ್ಷಕ್ಕೆ 1 ಲಕ್ಷ 80 ಸಾವಿರ ರೂಪಾಯಿಗೂ ಅಧಿಕವಾಗುತ್ತಿದೆ. ಈ ಹಿನ್ನಲೆಯಲ್ಲಿ ಪರಿಷ್ಕರಿಸಲು ಚಿಂತನೆ ನಡೆದಿದೆ ಎಂದು ಹೇಳಿದ್ದಾರೆ.

ತಾತ್ಕಾಲಿಕವಾಗಿ ಯಾವುದೇ ಬಿ.ಪಿ.ಎಲ್.ಕಾರ್ಡುಗಳನ್ನು ರದ್ದು ಮಾಡದಂತೆ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ. ಸದ್ಯ ವೈದ್ಯಕೀಯ ಆಧಾರದಲ್ಲಿ ಮಾತ್ರ ಬಿ.ಪಿ.ಎಲ್ ಕಾರ್ಡ್ ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದಿದ್ದಾರೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago