ಬೆಳಗಾವಿ : ಬಿ.ಪಿ.ಎಲ್.ಕಾರ್ಡ್ ಆದಾಯ ಮಿತಿ ಪರಿಷ್ಕರಣೆಗೆ ಸರ್ಕಾರ ಚಿಂತನೆ ನಡೆಸಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ.
ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿಂದು ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಹಾಗೂ ಶ್ರವಣಬೆಳಗೊಳ ಶಾಸಕ ಬಾಲಕೃಷ್ಣ.ಸಿ.ಎನ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಬಿ.ಪಿ.ಎಲ್ ಕಾರ್ಡ್‌ದಾರರ ಆದಾಯ ಮಿತಿಯನ್ನು 1 ಲಕ್ಷ 20 ಸಾವಿರ ರೂಪಾಯಿಗೆ ಮಿತಿಗೊಳಿಸಿದೆ. ಆದರೆ ಕೂಲಿ ಕೆಲಸಗಾರರಿಗೂ ಪ್ರತಿದಿನ 500 ರೂಪಾಯಿ ಕೂಲಿ ದೊರೆಯುತ್ತದೆ. ಇದರ ಆಧಾರದಲ್ಲಿ ಕೂಲಿ ಮಾಡುವವರ ಆದಾಯವೂ ವರ್ಷಕ್ಕೆ 1 ಲಕ್ಷ 80 ಸಾವಿರ ರೂಪಾಯಿಗೂ ಅಧಿಕವಾಗುತ್ತಿದೆ. ಈ ಹಿನ್ನಲೆಯಲ್ಲಿ ಪರಿಷ್ಕರಿಸಲು ಚಿಂತನೆ ನಡೆದಿದೆ ಎಂದು ಹೇಳಿದ್ದಾರೆ.
ತಾತ್ಕಾಲಿಕವಾಗಿ ಯಾವುದೇ ಬಿ.ಪಿ.ಎಲ್.ಕಾರ್ಡುಗಳನ್ನು ರದ್ದು ಮಾಡದಂತೆ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ. ಸದ್ಯ ವೈದ್ಯಕೀಯ ಆಧಾರದಲ್ಲಿ ಮಾತ್ರ ಬಿ.ಪಿ.ಎಲ್ ಕಾರ್ಡ್ ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದಿದ್ದಾರೆ.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…