ಬಿ.ಸಿ.ರೋಡ್ : ಭೀಕರ ಅಪಘಾತ – ಮೂವರು ಸಾವು, 6 ಮಂದಿಗೆ ಗಂಭೀರ ಗಾಯ – vishwanews24

Featured, ದಕ್ಷಿಣ ಕನ್ನಡ

ಬಿ.ಸಿ.ರೋಡ್ : ಭೀಕರ ಅಪಘಾತ – ಮೂವರು ಸಾವು, 6 ಮಂದಿಗೆ ಗಂಭೀರ ಗಾಯ

ಬಂಟ್ವಾಳ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಿ.ಸಿ.ರೋಡ್ ಬ್ರಹ್ಮಶ್ರೀ ನಾರಾಯಣ ಗುರು ವೃತ್ತದಲ್ಲಿ ಶನಿವಾರ ಮುಂಜಾನೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದು, 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಬೆಂಗಳೂರು ನಿವಾಸಿಗಳಾದ ರವಿ (64), ನಂಜಮ್ಮ (75) ಹಾಗೂ ರಮ್ಯಾ (23) ದಾರುಣವಾಗಿ ಮೃತಪಟ್ಟವರು.

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖಾ ವತಿಯಿಂದ ಮಕ್ಕಳ ದಿನಾಚರಣೆ ಕಾರ್ಯಕ್ರಮ – vishwanews24

ಗಾಯಾಳುಗಳನ್ನು ಸುಶೀಲ, ಕೀರ್ತಿ ಕುಮಾರ್, ಕಿರಣ್, ಬಿಂದು, ಪ್ರಶಾಂತ್ ಹಾಗೂ ಚಾಲಕ ಸುಬ್ರಹ್ಮಣ್ಯ ಎಂದು ಗುರುತಿಸಲಾಗಿದ್ದು, ಚಿಂತಾಜಕನಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದಾರೆ.

ಶನಿವಾರ ಮುಂಜಾನೆ ಸುಮಾರು 5 ಗಂಟೆ ವೇಳೆಗೆ, ಬೆಂಗಳೂರು ಕಡೆಯಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಇನೋವಾ ಕಾರು ಚಾಲಕರ ನಿಯಂತ್ರಣ ತಪ್ಪಿ ನಾರಾಯಣ ಗುರು ವೃತ್ತಕ್ಕೆ ಢಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ. ಅಪಘಾತದ ಹೊಡೆತಕ್ಕೆ ಕಾರು ಸಂಪೂರ್ಣ ಜಖಂಗೊಂಡಿದೆ.

ಕಾರಿನಲ್ಲಿ ಒಟ್ಟು 9 ಮಂದಿ ಸಂಬಂಧಿಕರು ಪ್ರಯಾಣಿಸುತ್ತಿದ್ದರು. ಘಟನೆಯ ಕುರಿತು ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಮುಂದಿನ ತನಿಖೆ ಪ್ರಾರಂಭವಾಗಿದೆ.

ಬಿಹಾರ ಫಲಿತಾಂಶ : ಕರ್ನಾಟಕದಲ್ಲಿ ನಾವು ಮತ್ತಷ್ಟು ಸ್ಫೂರ್ತಿಯಿಂದ ಚುನಾವಣೆ ಗೆಲ್ಲುತ್ತೇವೆ : ಶೋಭಾ ಕರಂದ್ಲಾಜೆ – vishwanews24

Leave a Reply