ಬೀಚ್‌ನಲ್ಲಿ ಫೋಟೊ ಶೂಟ್ ವಿವಾದ : ಉಡುಪಿ ಎಸ್ಪಿ ಸ್ಪಷ್ಟನೆ – vishwanews24
ಉಡುಪಿ: ಬೀಚ್‌ನಲ್ಲಿ ಫೋಟೊ ಶೂಟ್ ವಿವಾದ : ಯುವತಿಯ ದೂರು ಬಂದಲ್ಲಿ ಸೂಕ್ತ ಕಾನೂನು ಕ್ರಮ : ಎಸ್ಪಿ ಸ್ಪಷ್ಟನೆ
ಉಡುಪಿ: ಒಬ್ಬ ಯುವತಿ ಹಾಗೂ ಯುವಕ ಪಡುಬಿದ್ರೆ ಬ್ಲೂಫ್ಲ್ಯಾಗ್ ಬೀಚ್‌ನಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದಾರೆ ಎಂದು ಪೊಲೀಸರಿಗೆ ಸಾರ್ವಜನಿಕರು ದೂರು ನೀಡಿದ್ದು, ಅದರಂತೆ ಬೀಟ್ ಕರ್ತವ್ಯದಲ್ಲಿದ್ದ ಎಎಸ್‌ಐ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ ಎಂದು ಪಡುಬಿದ್ರೆ ಫೋಟೊ ಶೂಟ್ ವಿವಾದಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ಸ್ಪಷ್ಟನೆ ನೀಡಿದೆ.
ಭೇಟಿ ನೀಡಿದ ಸಂದರ್ಭದಲ್ಲಿ ಅಲ್ಲಿದ್ದ ಯುವಕ ಹಾಗೂ ಯುವತಿಯನ್ನು ಕರೆದು ಬ್ಲೂಫ್ಲ್ಯಾಗ್ ಬೀಚ್ ವಸತಿ ಪ್ರದೇಶವಾಗಿರುವ ಬಗ್ಗೆ ಮನವರಿಕೆ ಮಾಡಿದ್ದು, ಅವರು ಅಲ್ಲಿಂದ ತೆರಳಿದ್ದರು. ಅಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ ಎಂದು ಪೊಲೀಸ್ ಸ್ಪಷ್ಟನೆಯಲ್ಲಿ ತಿಳಿಸಲಾಗಿದೆ.
ಈ ಬಗ್ಗೆ ಯುವತಿಯನ್ನು ಸಂಪರ್ಕಿಸಿ, ಅವರಿಗೆ ಯಾವುದೇ ದೂರುಗಳಿದ್ದಲ್ಲಿ ಮುಕ್ತವಾಗಿ ನೀಡುವಂತೆ ತಿಳಿಸಲಾಗಿದೆ. ಈ ಬಗ್ಗೆ ಅವರಿಂದ ಯಾವುದೇ ದೂರು ಬಂದಲ್ಲಿ ಕಾನೂನಿನಂತೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟನೆ ತಿಳಿಸಿದೆ.
