Featured

ಬೀಚ್‌ನಲ್ಲಿ ಫೋಟೊ ಶೂಟ್ ವಿವಾದ : ಉಡುಪಿ ಎಸ್ಪಿ ಸ್ಪಷ್ಟನೆ – vishwanews24

ಉಡುಪಿ: ಬೀಚ್‌ನಲ್ಲಿ ಫೋಟೊ ಶೂಟ್ ವಿವಾದ : ಯುವತಿಯ ದೂರು ಬಂದಲ್ಲಿ ಸೂಕ್ತ ಕಾನೂನು  ಕ್ರಮ :  ಎಸ್ಪಿ ಸ್ಪಷ್ಟನೆ

ಉಡುಪಿ: ಒಬ್ಬ ಯುವತಿ ಹಾಗೂ ಯುವಕ ಪಡುಬಿದ್ರೆ ಬ್ಲೂಫ್ಲ್ಯಾಗ್ ಬೀಚ್‌ನಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದಾರೆ ಎಂದು ಪೊಲೀಸರಿಗೆ ಸಾರ್ವಜನಿಕರು ದೂರು ನೀಡಿದ್ದು, ಅದರಂತೆ ಬೀಟ್ ಕರ್ತವ್ಯದಲ್ಲಿದ್ದ ಎಎಸ್‌ಐ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ ಎಂದು ಪಡುಬಿದ್ರೆ ಫೋಟೊ ಶೂಟ್ ವಿವಾದಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ಸ್ಪಷ್ಟನೆ ನೀಡಿದೆ.

ಭೇಟಿ ನೀಡಿದ ಸಂದರ್ಭದಲ್ಲಿ ಅಲ್ಲಿದ್ದ ಯುವಕ ಹಾಗೂ ಯುವತಿಯನ್ನು ಕರೆದು ಬ್ಲೂಫ್ಲ್ಯಾಗ್ ಬೀಚ್ ವಸತಿ ಪ್ರದೇಶವಾಗಿರುವ ಬಗ್ಗೆ ಮನವರಿಕೆ ಮಾಡಿದ್ದು, ಅವರು ಅಲ್ಲಿಂದ ತೆರಳಿದ್ದರು. ಅಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ ಎಂದು ಪೊಲೀಸ್ ಸ್ಪಷ್ಟನೆಯಲ್ಲಿ ತಿಳಿಸಲಾಗಿದೆ.

ಈ ಬಗ್ಗೆ ಯುವತಿಯನ್ನು ಸಂಪರ್ಕಿಸಿ, ಅವರಿಗೆ ಯಾವುದೇ ದೂರುಗಳಿದ್ದಲ್ಲಿ ಮುಕ್ತವಾಗಿ ನೀಡುವಂತೆ ತಿಳಿಸಲಾಗಿದೆ. ಈ ಬಗ್ಗೆ ಅವರಿಂದ ಯಾವುದೇ ದೂರು ಬಂದಲ್ಲಿ ಕಾನೂನಿನಂತೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟನೆ ತಿಳಿಸಿದೆ.

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

15 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

15 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

16 hours ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

16 hours ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

16 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

17 hours ago