Featured

ಬೀಟ್ ರೂಟ್ ನಲ್ಲಿದೆ ಔಷಧೀಯ ಗುಣ ;ಇದನ್ನು ತಿನ್ನುವುದರಿಂದ ಈ ಕೆಳಗಿನ ಪ್ರಮುಖ ಆರೋಗ್ಯಕರ ಗುಣಗಳನ್ನು ಪಡೆಯಬಹುದು – Vishwanews24

ದೇಹಕ್ಕೆ ಎಲ್ಲಾ ರೀತಿಯ ಪೋಷಕಾಂಸಗಳು ದೊರೆಯಲು ಎಲ್ಲಾ ರೀತಿಯ ತರಕಾರಿಗಳನನ್ಉ ತಿನ್ನಬೇಕು. ಏಕೆಂದರೆ ಎಲ್ಲಾ ಬಗೆಯ ಪೋಷಕಾಂಶಗಳು ಮತ್ತು ವಿಟಮಿನ್ ಗಳು ಒಂದೇ ಬಗೆಯ ಆಹಾರದಲ್ಲಿ ಇರುವುದಿಲ್ಲ. ಅದರಲ್ಲೂ ಕೆಲವು ತರಕಾರಿಗಳು ಔಷಧೀಯ ಗುಣವನ್ನು ಹೊಂದಿದೆ. ಉದಾಹರಣೆಗೆ ಬೀಟ್ ರೂಟ್.

ಬೀಟ್​ರೂಟ್​ ರಸವು ಹಸಿವನ್ನ ಹೆಚ್ಚು ಮಾಡುತ್ತದೆ. ಇದರಲ್ಲಿರುವ ವಿಟಮಿನ್ ಬಿ ಮತ್ತು ವಿಟಮಿನ್ ಸಿ ಜೀರ್ಣಕ್ರಿಯೆ ಉತ್ತಮಗೊಳಿಸುವುದರ ಜೊತೆಗೆ ಲಿವರ್​​​​ ಮತ್ತು ಹೊಟ್ಟೆಯ ಆರೋಗ್ಯಕ್ಕೂ ಬಹಳ ಪ್ರಯೋಜನಕಾರಿಯಾಗಿದೆ. ಇದು ಜೀರ್ಣಕ್ರಿಯೆಯನ್ನ ಸರಾಗಗೊಳಿಸುವುದರೊಂದಿಗೆ ಹೊಟ್ಟೆಯಲ್ಲಿ ಗ್ಯಾಸ್​ ಉಂಟಾಗದಂತೆ  ಮಾಡುತ್ತದೆ.

ಬೀಟ್ ರೂಟ್ ತಿಂದರೆ ಈ ಕೆಳಗಿನ ಪ್ರಮುಖ ಆರೋಗ್ಯಕರ ಗುಣಗಳನ್ನು ಪಡೆಯಬಹುದು.

ದೇಹಕ್ಕೆ ಶಕ್ತಿ ನೀಡುತ್ತದೆ: ಬೀಟ್ ರೂಟ್ ನಲ್ಲಿ ಕಾರ್ಬೋಹೈಡ್ರೇಟ್ ಅಧಿಕವಿರುವುರುವುದರಿಂದ ಇದನ್ನು ತಿಂದರೆ ದೇಹಕ್ಕೆ ಶಕ್ತಿ ದೊರೆಯುತ್ತದೆ. ಸುಸ್ತು, ತಲೆಸುತ್ತು ಈ ರೀತಿಯ ಸಮಸ್ಯೆ ಕಂಡು ಬಂದರೆ ಬೀಟ್ ರೂಟ್ ಜ್ಯೂಸ್ ಕುಡಿದರೆ ಸಾಕು ಕಡಿಮೆಯಾಗುವುದು.

ಪೋಷಕಾಂಶಗಳು: ಬೀಟ್ ರೂಟ್ ನಲ್ಲಿ ವಿಟಮಿನ್ ಎ, ಸಿ, ಬೇಟೈನ್, ಕ್ಯಾಲ್ಸಿಯಂ, ಮ್ಯಾಗ್ನಿಷಿಯಂ, ರಂಜಕ, ನೈಸಿನ್ ಮತ್ತು ಕಬ್ಬಿಣದಂಶ ಅಧಿಕವಿರುತ್ತದೆ.

ಅಧಿಕ ಫಾಲಿಕ್ ಆಸಿಡ್: ಫಾಲಿಕ್ ಆಸಿಡ್ ಆರೋಗ್ಯಕ್ಕೆ ತುಂಬಾ ಅಗತ್ಯ. ಇದು ಜೀವಕಣಗಳ ಉತ್ಪತ್ತಿ ಹೆಚ್ಚಾಗಲು ಸಹಾಯ ಮಾಡುತ್ತದೆ. ಫಾಲಿಕ್ ಆಸಿಡ್ ಕೊರತೆ ಇರುವವರು ಮಾತ್ರೆ ತೆಗೆದುಕೊಳ್ಳುವ ಬದಲು ಪ್ರತಿನಿತ್ಯ ಬೀಟ್ ರೂಟ್ ಅನ್ನು ಜ್ಯೂಸ್ ಮಾಡಿ ಕುಡಿದರೆ ಸಾಕು.

ಹೃದಯ ಸ್ವಾಸ್ಥ್ಯಒಳ್ಳೆಯದು: ಬೀಟ್ ರೂಟ್ ಅಧಿಕ ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ. ಅಲ್ಲದೆ ಬೀಟ್ ರೂಟ್ ದೇಹದಲ್ಲಿ ರಕ್ತಸಂಚಾರ ಸರಿಯಾಗಿ ನಡೆಯುವಂತೆ ನೋಡಿಕೊಳ್ಳುತ್ತದೆ. ಬೀಟ್ ರೂಟ್ ನಲ್ಲಿರುವ ಬೇಟೈನ್ ಅಂಶ ದೇಹದಲ್ಲಿರುವ ಕೊಬ್ಬಿನಂಶವನ್ನು ಕಡಿಮೆ ಮಾಡುತ್ತದೆ.

ರಕ್ತ ಹೀನತೆ ನಿವಾರಿಸುತ್ತದೆ: ರಕ್ತ ಹೀನತೆ ಸಮಸ್ಯೆ ಇರವವರು ಪ್ರತಿನಿತ್ಯ ಬೀಟ್ ರೂಟ್ ಜ್ಯೂಸ್ ಕುಡಿಯುವುದು, ಬೀಟ್ ರೂಟ್ ನಿಂದ ಪದಾರ್ಥಗಳನ್ನು ತಯಾರಿಸಿ ತಿನ್ನಬೇಕು. ಈ ರೀತಿ ಮಾಡಿದರೆ ದೇಹದಲ್ಲಿ ರಕ್ತಕಣಗಳು ಹೆಚ್ಚಾಗಿ ರಕ್ತಹೀನತೆ ಸಮಸ್ಯೆ ಕಡಿಮೆಯಾಗುವುದು. ಆದ್ದರಿಂದ ಬೀಟ್ ರೂಟ್ ತಿನ್ನಲು ಇಷ್ಟವಿರಲಿ ಅಥವಾ ಇಲ್ಲದಿರಲಿ, ಆದರೆ ಇದನ್ನು ಕಡ್ಡಾಯವಾಗಿ ನಿಮ್ಮ ಆಹಾರಕ್ರಮದಲ್ಲಿ ಸೇರಿಸಿದರೆ ಆರೋಗ್ಯಕ್ಕೆ ಒಳ್ಳೆಯದು.

ಬೀಟ್​ರೂಟ್​ನಲ್ಲಿರೋ ಆಂಥೋಕ್ಯಾನಿನ್ಸ್​ ಕೆಟ್ಟ ಕೊಲೆಸ್ಟ್ರಾಲ್​ ಕಡಿಮೆ ಮಾಡಲು ಸಹಾಯ ಮಾಡುತ್ತದೆ ಮತ್ತು ಆಕ್ಸಿಡೇಶನ್​ ವಿರುದ್ಧ ಹೋರಾಡುತ್ತದೆ. ಅಂಥೋಕ್ಯಾನಿನ್ಸ್​ ವಿವಿಧ ಬಗೆಯ ಕ್ಯಾನ್ಸರ್​ ತಡೆಗಟ್ಟಲು ನೆರವಾಗುತ್ತದೆ. ಇದಲ್ಲದೆ, ಬೀಟ್​ರೂಟ್​ ಲಿವರ್​​ ಮತ್ತು ಹೊಟ್ಟೆಯ ಆರೋಗ್ಯಕ್ಕೆ ಒಳ್ಳೆಯದು. ಇದು ಕ್ಯಾಲ್ಸಿಯಂ, ಪೊಟ್ಯಾಸಿಯಂ ಮತ್ತು ಕಬ್ಬಿಣ ಹಾಗೂ ಇತರ ಪೋಷಕಾಂಶಗಳನ್ನು ಒಳಗೊಂಡಿದೆ. ಮೂಳೆಗಳು ಮತ್ತು ಹಲ್ಲುಗಳನ್ನ ಬಲಗೊಳಿಸುತ್ತದೆ. ಇನ್ನು ಬೀಟ್​ರೂಟ್​ ಜ್ಯೂಸ್​ ಅತ್ಯುತ್ತಮ ರಕ್ತ ಶುದ್ಧೀಕಾರಕವಾಗಿದೆ. ಇದು ಕಣ್ಣಿನ ಆರೋಗ್ಯ ಕಾಪಾಡುತ್ತದೆ. ಮತ್ತು ರಕ್ತ ಸಂಚಾರವನ್ನ ಉತ್ತಮವಾಗಿರಿಸುತ್ತದೆ.

Vishwa News 24

Recent Posts

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

2 hours ago

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

1 day ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

1 day ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

1 day ago