ಬೀದರ್ : ಉದ್ಯೋಗಕ್ಕಾಗಿ ಆನ್‍ಲೈನ್‍ನಲ್ಲಿ ಹಣ ಹೂಡಿಕೆ – ವಂಚನೆಗೆ ಒಳಗಾದ ಉಪನ್ಯಾಸಕಿ  ಮನನೊಂದು ಆತ್ಮಹತ್ಯೆ – Vishwanews24

Featured, ರಾಜ್ಯ ನ್ಯೂಸ್

ಉದ್ಯೋಗಕ್ಕಾಗಿ ಆನ್‍ಲೈನ್‍ನಲ್ಲಿ ಹಣ ಹೂಡಿಕೆ – ವಂಚನೆಗೆ ಒಳಗಾದ ಉಪನ್ಯಾಸಕಿ  ಮನನೊಂದು ಆತ್ಮಹತ್ಯೆ

ಬೀದರ್: ಉದ್ಯೋಗಕ್ಕಾಗಿ ಆನ್‍ಲೈನ್‍ನಲ್ಲಿ ಹಣ ಹೂಡಿಕೆ ಮಾಡಿ ವಂಚನೆಗೆ ಒಳಗಾದ ಉಪನ್ಯಾಸಕಿ  ಮನನೊಂದು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೀದರ್  ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಇಸ್ಲಾಂಪುರ ಗ್ರಾಮದಲ್ಲಿ ನಡೆದಿದೆ.

ಆರತಿ ಕನಾಟೆ (28) ಆತ್ಮಹತ್ಯೆ ಮಾಡಿಕೊಂಡ ಟೀಚರ್. ಆನ್‍ಲೈನ್‍ನಲ್ಲಿ ಪರಿಚಯವಾದ ವ್ಯಕ್ತಿಯೊಂದಿಗೆ ಹಣದ ವ್ಯವಹಾರ ನಡೆಸಿ ವಂಚನೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆನ್‍ಲೈನ್‍ನಲ್ಲಿ ಮನೆಯಲ್ಲೇ ಕುಳಿತು ಉದ್ಯಮ ಮಾಡಲು ಹಣ ಹೂಡಿಕೆ ಮಾಡಿ ಎಂದ ವ್ಯಕ್ತಿಯನ್ನು ನಂಬಿದ ಉಪನ್ಯಾಸಕಿ ಬರೋಬ್ಬರಿ 2.50 ಲಕ್ಷ ವರೆಗೆ ಹಣ ಕಳುಹಿಸಿದ್ದಾರೆ. ಬಳಿಕ ಇನ್ನೂ 82 ಸಾವಿರ ಹಣ ಕಳಿಸಿದ್ರೆ ಉದ್ಯೋಗದ ಜೊತೆಗೆ ಹೂಡಿಕೆ ಮಾಡಿದ ಎಲ್ಲಾ ಹಣವನ್ನು ವಾಪಸ್ ಕೊಡುವುದಾಗಿ ತಿಳಿಸಿದ್ದಾನೆ. ಇದನ್ನೂ ಓದಿಬಂಟ್ವಾಳ: ಮಗುವಿನ ಅನಾರೋಗ್ಯ ಹಿನ್ನೆಲೆ.. ಉಕ್ರೇನ್‌ ಕುಟುಂಬದಿಂದ ತುಳುನಾಡಿನ ಆರಾಧ್ಯ ದೈವ ಕೊರಗಜ್ಜನಿಗೆ ಅಗೇಲು ಸೇವೆ – Vishwanews24

ಮನೆಯವರ ಗಮನಕ್ಕೆ ತಾರದೆ ಲಕ್ಷಾಂತರ ರೂಪಾಯಿ ಕಳೆದುಕೊಂಡ ಭೀತಿಯಿಂದ ಉಪನ್ಯಾಸಕಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೂ ಮುನ್ನ ಹಣ ಹೂಡಿಕೆ ಮಾಡಿದ್ದ ಏಜೆನ್ಸಿ ಬಗ್ಗೆ ಡೆತ್‍ನೋಟ್‍ನಲ್ಲಿ ಉಲ್ಲೇಖ ಮಾಡಿ ಉಪನ್ಯಾಸಕಿ ಆತ್ಮಹತ್ಯೆ ಮಾಡಿಕೊಂಡಿದ್ದು, ಉಪನ್ಯಾಸಕಿ ಬಸವಕಲ್ಯಾಣ ನಗರದ ಖಾಸಗಿ ಕಾಲೇಜಿನಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಈ ಕುರಿತು ಬಸವಕಲ್ಯಾಣ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಬೆಂಗಳೂರು : ಓವರ್ ಟೇಕ್ ಮಾಡುವ ಭರದಲ್ಲಿ ಬಸ್​ಗೆ ಬೈಕ್​​ ಡಿಕ್ಕಿ.. ಇಬ್ಬರು ಸವಾರರು ಸ್ಥಳದಲ್ಲೇ ಸಾವು – Vishwanews24

Leave a Reply