ಬೀದರ್: ಉದ್ಯೋಗಕ್ಕಾಗಿ ಆನ್‍ಲೈನ್‍ನಲ್ಲಿ ಹಣ ಹೂಡಿಕೆ ಮಾಡಿ ವಂಚನೆಗೆ ಒಳಗಾದ ಉಪನ್ಯಾಸಕಿ ಮನನೊಂದು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಇಸ್ಲಾಂಪುರ ಗ್ರಾಮದಲ್ಲಿ ನಡೆದಿದೆ.
ಆರತಿ ಕನಾಟೆ (28) ಆತ್ಮಹತ್ಯೆ ಮಾಡಿಕೊಂಡ ಟೀಚರ್. ಆನ್‍ಲೈನ್‍ನಲ್ಲಿ ಪರಿಚಯವಾದ ವ್ಯಕ್ತಿಯೊಂದಿಗೆ ಹಣದ ವ್ಯವಹಾರ ನಡೆಸಿ ವಂಚನೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆನ್‍ಲೈನ್‍ನಲ್ಲಿ ಮನೆಯಲ್ಲೇ ಕುಳಿತು ಉದ್ಯಮ ಮಾಡಲು ಹಣ ಹೂಡಿಕೆ ಮಾಡಿ ಎಂದ ವ್ಯಕ್ತಿಯನ್ನು ನಂಬಿದ ಉಪನ್ಯಾಸಕಿ ಬರೋಬ್ಬರಿ 2.50 ಲಕ್ಷ ವರೆಗೆ ಹಣ ಕಳುಹಿಸಿದ್ದಾರೆ. ಬಳಿಕ ಇನ್ನೂ 82 ಸಾವಿರ ಹಣ ಕಳಿಸಿದ್ರೆ ಉದ್ಯೋಗದ ಜೊತೆಗೆ ಹೂಡಿಕೆ ಮಾಡಿದ ಎಲ್ಲಾ ಹಣವನ್ನು ವಾಪಸ್ ಕೊಡುವುದಾಗಿ ತಿಳಿಸಿದ್ದಾನೆ. ಇದನ್ನೂ ಓದಿ: ಬಂಟ್ವಾಳ: ಮಗುವಿನ ಅನಾರೋಗ್ಯ ಹಿನ್ನೆಲೆ.. ಉಕ್ರೇನ್ ಕುಟುಂಬದಿಂದ ತುಳುನಾಡಿನ ಆರಾಧ್ಯ ದೈವ ಕೊರಗಜ್ಜನಿಗೆ ಅಗೇಲು ಸೇವೆ – Vishwanews24
ಮನೆಯವರ ಗಮನಕ್ಕೆ ತಾರದೆ ಲಕ್ಷಾಂತರ ರೂಪಾಯಿ ಕಳೆದುಕೊಂಡ ಭೀತಿಯಿಂದ ಉಪನ್ಯಾಸಕಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೂ ಮುನ್ನ ಹಣ ಹೂಡಿಕೆ ಮಾಡಿದ್ದ ಏಜೆನ್ಸಿ ಬಗ್ಗೆ ಡೆತ್‍ನೋಟ್‍ನಲ್ಲಿ ಉಲ್ಲೇಖ ಮಾಡಿ ಉಪನ್ಯಾಸಕಿ ಆತ್ಮಹತ್ಯೆ ಮಾಡಿಕೊಂಡಿದ್ದು, ಉಪನ್ಯಾಸಕಿ ಬಸವಕಲ್ಯಾಣ ನಗರದ ಖಾಸಗಿ ಕಾಲೇಜಿನಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಈ ಕುರಿತು ಬಸವಕಲ್ಯಾಣ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಬೆಂಗಳೂರು : ಓವರ್ ಟೇಕ್ ಮಾಡುವ ಭರದಲ್ಲಿ ಬಸ್ಗೆ ಬೈಕ್ ಡಿಕ್ಕಿ.. ಇಬ್ಬರು ಸವಾರರು ಸ್ಥಳದಲ್ಲೇ ಸಾವು – Vishwanews24
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…