Featured

ಬೀದಿ ನಾಯಿ ದಾಳಿಯಿಂದ ಮೃತಪಟ್ಟವರಿಗೆ 5 ಲಕ್ಷ ರೂ. ಪರಿಹಾರ ಘೋಷಣೆ – vishwanews24

ಬೀದಿ ನಾಯಿ ದಾಳಿಯಿಂದ ಮೃತಪಟ್ಟವರಿಗೆ 5 ಲಕ್ಷ ರೂ. ಪರಿಹಾರ ಘೋಷಣೆ

ಬೆಂಗಳೂರು: ಬೆಂಗಳೂರಿನಲ್ಲಿ ಬೀದಿ ನಾಯಿ ದಾಳಿಯಿಂದ ಗಾಯಗೊಂಡ ಅಥವಾ ಸಾವನ್ನಪ್ಪಿದವರಿಗೆ ಕರ್ನಾಟಕ ಸರ್ಕಾರ ಪರಿಷ್ಕೃತ ಪರಿಹಾರ ಮಾರ್ಗಸೂಚಿ ಪ್ರಕಟಿಸಿದೆ. ಸಣ್ಣ ಗಾಯಗಳಿಗೆ 5,000 ರೂ., ಸಾವು ಸಂಭವಿಸಿದರೆ 5 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಕರ್ನಾಟಕ ಸರ್ಕಾರ ನವೀಕರಿಸಿದ ಆದೇಶವನ್ನು ಬಿಡುಗಡೆಗೊಳಿಸಿದೆ.

ಬೆಂಗಳೂರು ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ದಾಳಿಯಿಂದ ಗಾಯಗೊಂಡ ಅಥವಾ ಸಾವನ್ನಪ್ಪಿದ ಜನರಿಗೆ ಪರಿಹಾರ ಮಾರ್ಗಸೂಚಿಗಳನ್ನು ಪರಿಷ್ಕರಿಸಿ ಕರ್ನಾಟಕ ಸರ್ಕಾರ ನವೀಕರಿಸಿದ ಆದೇಶವನ್ನು ಬಿಡುಗಡೆ ಮಾಡಿದ್ದು, ನಾಯಿ ಕಚ್ಚಿದ ಗಾಯ, ಮೂಗೇಟುಗಳು ಮತ್ತು ರಕ್ತಸ್ರಾವದ ಸಮಸ್ಯೆ, ಸೀಳುವಿಕೆ, ಇಂತಹ ಗಾಯಗಳು ಕಂಡು ಬಂದರೆ 5,000 ರೂ. ವರೆಗೆ ಪರಿಹಾರವನ್ನು ನೀಡಲಾಗುವುದು. ಇನ್ನು ಬೀದಿ ನಾಯಿ ದಾಳಿಯಿಂದ ಅಥವಾ ರೇಬೀಸ್‌ನಿಂದ ವ್ಯಕ್ತಿ ಸಾವನ್ನಪ್ಪಿದರೆ, ಅವರ ಕುಟುಂಬಕ್ಕೆ 5 ಲಕ್ಷ ರೂ.ಗಳ ಪರಿಹಾರ ನೀಡಲಾಗುವುದು.

ನಾಯಿಗಳ ದಾಳಿಯಿಂದ ಗಾಯಗೊಂಡವರಿಗೆ ಉತ್ತಮ ಚಿಕಿತ್ಸೆಯನ್ನು ನೀಡಲು ಹಾಗೂ ಸಾವನ್ನಪ್ಪಿದವರ ಮನೆಯ ಆರ್ಥಿಕ ಸಹಾಯಕ್ಕಾಗಿ ಈ ಪರಿಷ್ಕರಣೆ ಮಾಡಲಾಗಿದೆ ಎಂದು ಸರ್ಕಾರದ ಮೂಲಗಳು ತಿಳಿಸಿದೆ. 2023ರಲ್ಲಿ ನಾಯಿಗಳ ದಾಳಿಯಿಂದ ಗಾಯಗೊಂಡ ಅಥವಾ ಸಾವನ್ನಪ್ಪಿದವರಿಗೆ ವಿಶೇಷ ಯೋಜನೆಯನ್ನು ಮಾಡಲಾಗಿತ್ತು. ಇದೀಗ ಆ ಯೋಜನೆಯನ್ನೇ ಮುಂದುವರಿಸಲಾಗುತ್ತಿದ್ದು, ಅದರಲ್ಲಿ ಕೆಲವೊಂದನ್ನು ಬದಲಾವಣೆ ಮಾಡಲಾಗಿದೆ.

ಈ 5,000 ರೂ.ಗಳಲ್ಲಿ 3,500 ರೂ.ಗಳನ್ನು ನಗರಾಭಿವೃದ್ಧಿ ಇಲಾಖೆ ನೀಡುತ್ತದೆ. ಉಳಿದ 1,500 ರೂ. ಅನ್ನು ಆರೋಗ್ಯ ಇಲಾಖೆಯ ಅಡಿಯಲ್ಲಿ ಬರುವ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ಗೆ ವರ್ಗಾಯಿಸಲಾಗುತ್ತದೆ ಎಂದು ಸರ್ಕಾರದ ಆದೇಶದಲ್ಲಿ ತಿಳಿಸಲಾಗಿದೆ. ಈ ಮೂಲಕ ನಾಯಿಗಳ ದಾಳಿಯಿಂದ ಆಗಿರುವ ಗಾಯಗಳಿಗೆ ಸರಿಯಾದ ಚಿಕಿತ್ಸೆ ನೀಡಿ, ಗುಣಮುಖ ಮಾಡುವುದು ಸರ್ಕಾರ ಉದ್ದೇಶವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Vishwa News 24

Recent Posts

ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ ದುರುಪಯೋಗ : ದಿನೇಶ್ ಗುಂಡೂರಾವ್ -vishwanews24

ಇ.ಡಿ, ಐಟಿಯವರು ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ : ದಿನೇಶ್ ಗುಂಡೂರಾವ್ ಆರೋಪ  ಮಂಗಳೂರು: ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ…

3 days ago

ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ -vishwanews24

ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ ತಿರುವನಂತಪುರಂ : ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಎಂಟು…

3 days ago

ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ – 2026 -vishwanews24

ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ - 2026 ಕಟಪಾಡಿಯ SVS ಕ್ರೀಡಾಂಗಣದಲ್ಲಿ ಮೇ 22 ರಿಂದ…

3 days ago

ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ -vishwanews24

ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ ಕೊಳ್ನಾಡು: ಪಂಜರಕೋಡಿ ಎಂಬಲ್ಲಿ ಪಿಕಪ್…

3 days ago

ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಸುವರ್ಣ -vishwanews24

ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಎ ಸುವರ್ಣ ಉಡುಪಿ:…

3 days ago

ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ -vishwanews24

ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ ಉಡುಪಿ : ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯು ಉಡುಪಿ ಸ್ವಾಗತ…

3 days ago