Featured

ಬುರ್ಖಾ ಧರಿಸಿ ತಲೆಯ ಮೇಲೆ ನೀರಿನ ಕೊಡ ಹಿಡಿದು ಪ್ರತಿಭಟನೆ ನಡೆಸಿದ ವಾಟಾಳ್‌ ನಾಗರಾಜ್‌  – Vishwanews24

ಕಾವೇರಿಗಾಗಿ ನಾವು ಕರ್ನಾಟಕ ಬಂದ್‌ಗೆ  ಕರೆ ಕೊಟ್ಟರೆ ಸರ್ಕಾರ ನಮ್ಮನ್ನು ಬಂದ್‌ ಮಾಡಲು ಹೊರಟಿದೆ : ವಾಟಾಳ್‌ ನಾಗರಾಜ್‌  ಆಕ್ರೋಶ

ಬೆಂಗಳೂರು: ಕಾವೇರಿಗಾಗಿ ನಾವು ಕರ್ನಾಟಕ ಬಂದ್‌ಗೆ  ಕರೆ ಕೊಟ್ಟರೆ ಸರ್ಕಾರ ನಮ್ಮನ್ನು ಬಂದ್‌ ಮಾಡಲು ಹೊರಟಿದೆ ಎಂದು ಕನ್ನಡ ಹೋರಾಟಗಾರ ವಾಟಾಳ್‌ ನಾಗರಾಜ್‌  ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಡಾಲರ್ಸ್‌ ಕಾಲನಿ ನಿವಾಸದ ಬಳಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಇವತ್ತು ಎರಡು ಬಂದ್‌ ನಡೆಯುತ್ತಿದೆ. ನಾವು ಕಾವೇರಿಗಾಗಿ  ಬಂದ್‌ಗೆ ಕರೆ ನೀಡಿದರೆ ಸರ್ಕಾರ ನಮ್ಮ ಪ್ರತಿಭಟನೆಯನ್ನು ಬಂದ್‌ ಮಾಡುತ್ತಿದೆ. ಸರ್ಕಾರ ಕಾವೇರಿ ಸಮಸ್ಯೆಯನ್ನು ಅರ್ಥಮಾಡಿಕೊಂಡಿಲ್ಲ ಎಂದು ಸಿಟ್ಟು ಹೊರಹಾಕಿದರು.

ಇದನ್ನೂ ಓದಿ: 

ಬಂದ್‌ಗೆ ಬೆಂಬಲ ನೀಡಿದ ಜನತೆಗೆ ಧನ್ಯವಾದ ಹೇಳಿದ ವಾಟಾಳ್‌, ಅಖಂಡ ಕರ್ನಾಟಕ ಹೆಸರನ್ನು ಕನ್ನಡಿಗರು ಉಳಿಸಿದ್ದಾರೆ. ದೇಶಕ್ಕೆ ಕನ್ನಡಿಗರ ಶಕ್ತಿ ಪ್ರದರ್ಶನವಾಗಿದೆ ಎಂದು ಹೇಳಿದರು.

ಹಿಳೆಯರ ಪರವಾಗಿ, ನ್ಯಾಯ, ಸತ್ಯದ ಪರವಾಗಿ ಒತ್ತಾಯಿಸಿ ಇಂದು ಬುರ್ಖಾ ಧರಿಸಿ ಖಾಲಿ ಕೊಡ ಕೈಯಲ್ಲಿ ಹಿಡಿದು ಕಾವೇರಿ ಜಲಕ್ಕಾಗಿ ಹೋರಾಟ ಮಾಡುತ್ತಿದ್ದೇನೆ ಎಂದು ಕನ್ನಡ ಒಕ್ಕೂಟ ನಾಯಕ ಮಾಜಿ ಶಾಸಕ ಕನ್ನಡ ಚಳವಳಿಗಾರ ವಾಟಾಳ್ ನಾಗರಾಜ್ ಹೇಳಿದ್ದಾರೆ.

ಕರ್ನಾಟಕ ತಮಿಳು ನಾಡಿಗೆ ಕದ್ದು ನೀರು ಬಿಡುತ್ತಿದೆ ಎಂದು ಸಾಂಕೇತಿಸಲು ಈ ಕಪ್ಪು ಬಣ್ಣ ಧರಿಸಿದ್ದೇನೆ, ಇನ್ನು ಬುರ್ಖಾ ಮಹಿಳೆಯರ ನ್ಯಾಯದ,ಸಮಾನತೆಯ ಸಂಕೇತವಾಗಿದೆ. ನ್ಯಾಯದೇವತೆ ಧರಿಸುವ ಬಟ್ಟೆ ಅಥವಾ ಬುರ್ಖಾ ಎಂದಾದರೂ ಕರೆಯಲಿ. ನ್ಯಾಯದೇವತೆಯ ಸಂದೇಶ ಸಾರುವ ಬುರ್ಖಾ ಧರಿಸಿದ್ದೇನೆ. ಮಹಿಳೆಯರ ಗೌರವದ ಸಂಕೇತ ಸಾರುವ ಬುರ್ಖಾ ಧರಿಸಿದ್ದೇನೆ. ಕಾವೇರಿ ನದಿ ನೀರು ವಿಚಾರವಾಗಿ ನ್ಯಾಯ ಸಿಗುವವರೆಗೂ ಹೋರಾಟ ಮಾಡುತ್ತೇನೆ ಎಂದು ಹೇಳಿದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago