Featured

ಬುರ್ಖಾ ನಿಷೇಧಿಸಿದ ಕೇರಳದ ಮುಸ್ಲಿಂ ಶಿಕ್ಷಣ ಸಂಸ್ಥೆ; ಮುಖವನ್ನು ಬಟ್ಟೆಯಿಂದ ಮುಚ್ಚಿಕೊಳ್ಳಬಾರದೆಂಬ ಉದ್ದೇಶ :ಸಂಸ್ಥೆಯ ಅಧ್ಯಕ್ಷರು-Vishwanews24

ತಿರುವನಂತಪುರ: ಕೇರಳದ ಮುಸ್ಲಿಮ್ ಎಜುಕೇಶನ್ ಸೊಸೈಟಿ ತನ್ನ 150 ಶಾಲೆಗಳಲ್ಲಿ ಬುರ್ಖಾ ನಿಷೇಧಿಸಿಸುತ್ತೋಲೆ ಹೊರಡಿಸಿದೆ.

ಕೋಳಿಕೋಡ್ ಮೂಲದ ಈ ಶಿಕ್ಷಣ ಸಂಸ್ಥೆ ಪ್ರಸಕ್ತ ಸಾಲಿನಿಂದ ತನ್ನ ಶಾಲಾ ಆವರಣದಲ್ಲಿ ಯಾರೂ ಕೂಡಬುರ್ಖಾ ಧರಿಸಬಾರದೆಂಬ ನಿಯಮ ರೂಪಿಸಿ ಏ.17ರಂದು ಸುತ್ತೋಲೆ ಹೊರಡಿಸಿದೆ. ಈ ನಿಯಮವನ್ನುಬೋಧಕರು ಮತ್ತು ವಿದ್ಯಾರ್ಥಿಗಳೆಲ್ಲರೂ ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಎಂಇಎಸ್ ಅಧ್ಯಕ್ಷ ಫಜಲ್ ಗಫೂರ್ತಿಳಿಸಿದ್ದಾರೆ.

ಮುಸ್ಲಿಂ ಸಮುದಾಯದ ಒಳಿತಿಗಾಗಿಯೇ ಈ ಕ್ರಮ ಕೈಗೊಳ್ಳಲಾಗಿದೆ. ವಸ್ತ್ರಸಂಹಿತೆ ಪಾಲನೆ ಕಡ್ಡಾಯವಾಗಿದೆ. ಜತೆಗೆ ಅಧೀನ ಶಾಲೆ-ಕಾಲೇಜುಗಳ ಮಂಡಳಿಗೂ ಸೂಚನೆ ನೀಡಿ, ಈ ನಿಯಮ ಪಾಲಿಸಲು ನೋಟಿಸ್ ಜಾರಿಮಾಡಲಾಗಿದೆ. ಶಿಕ್ಷಣ ಮತ್ತು ಕೇರಳದ ಮುಸ್ಲಿಂ ಸಮಾಜದಲ್ಲಿ ಅರಿವು ಮೂಡಿಸಲು ಈ ಕ್ರಮ ಕೈಗೊಳ್ಳುತ್ತಿದ್ದೇವೆ. ಶ್ರೀಲಂಕಾ ದಾಳಿಗೂ ಮೊದಲೇ ಈ ಕ್ರಮ ಜಾರಿಗೆ ಸೂಚನೆ ನೀಡಲಾಗಿತ್ತು ಎಂದು ಸಂಸ್ಥೆಯ ಅಧ್ಯಕ್ಷರು ತಿಳಿಸಿದ್ದಾರೆ.

ನಾವು ಕೇರಳದಲ್ಲಿದ್ದೇವೆ. ಮಧ್ಯಪ್ರಾಚ್ಯದ (ಅರಬ್ ನಾಡಿನ) ಇಸ್ಲಾಮ್‌ನ್ನು ಅನುಸರಿಸಬೇಕಿಲ್ಲ. ಕಳೆದ 5ವರ್ಷದಲ್ಲಿ ಸಂಪ್ರದಾಯವಾದಿ ಮುಸ್ಲಿಂ ಸಂಘಟನೆಗಳು ಕೇರಳದ ಶಿಕ್ಷಣ ಸಂಸ್ಥೆಗಳಲ್ಲಿ ವಸ್ತ್ರ ಸಂಹಿತೆ ಹೇರಲುಪ್ರಯತ್ನಿಸುತ್ತಿದ್ದು, ಇದನ್ನು ತಡೆಗಟ್ಟಬೇಕಿದೆ ಎಂದು ವೈದ್ಯರೂ ಆಗಿರುವ ಫಜಲ್ ಗಫೂರ್ ಹೇಳಿದ್ದಾರೆ.

ನಾವು ಧರಿಸುವ ಬಟ್ಟೆ ಸಭ್ಯವಾಗಿರಬೇಕು. ಮುಖವನ್ನು ಬಟ್ಟೆಯಿಂದ ಮುಚ್ಚಿಕೊಳ್ಳಬಾರದೆಂಬ ಉದ್ದೇಶದಿಂದ ಈ ನಿಯಮ ಜಾರಿ ಮಾಡಲಾಗಿದೆ ಎಂದು ಮುಸ್ಲಿಮ್ ಎಜುಕೇಶನ್ ಸೊಸೈಟಿ ಅಧ್ಯಕ್ಷರು ಅಭಿಪ್ರಾಯಪಟ್ಟಿದ್ದಾರೆ.

 

Vishwa News 24

Recent Posts

ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ  ಐಟಿ ಉದ್ಯೋಗಿ – vishwanews24

ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ  ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ  ಸಮುದ್ರಪಾಲಾದ ಘಟನೆ ಉತ್ತರ…

12 hours ago

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ – vishwanews24

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…

12 hours ago

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ – vishwanews24

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…

13 hours ago

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ – vishwanews24

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…

13 hours ago

ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ – vishwanews24

ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…

13 hours ago

ಹಿಂದಿ ಕಿರುತೆರೆ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣು ಬಿಗಿದುಕೊಂಡು ಆತ್ಮಹತ್ಯೆ – vishwanews24

ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…

13 hours ago