Featured

‘ಬುಲ್ಡೋಜರ್ ಮಾದರಿ’ ಕಾರ್ಯಾಚರಣೆಯನ್ನು ಕರ್ನಾಟಕದಲ್ಲೂ ಜಾರಿಗೊಳಿಸಬೇಕು : ಎಂ.ಪಿ ರೇಣುಕಾಚಾರ್ಯ ಒತ್ತಾಯ – Vishwanews24

‘ಬುಲ್ಡೋಜರ್ ಮಾದರಿ’ ಕಾರ್ಯಾಚರಣೆಯನ್ನು ಕರ್ನಾಟಕದಲ್ಲೂ ಜಾರಿಗೊಳಿಸಬೇಕು

ಪುಂಡರಿಗೆ ಕಠಿಣ & ನಿರ್ದಾಕ್ಷಿಣ್ಯ ಪದಗಳ ಅರ್ಥ ಗೊತ್ತಾಗಬೇಕು ಎಂದರೆ “ಬುಲ್ಡೋಜರ್” ಅನ್ನು ಬಳಸಬೇಕು..

ಬೆಂಗಳೂರು: ಗಲಭೆಯಲ್ಲಿ ಭಾಗಿಯಾಗಿರುವ ಆರೋಪಿಗಳ ಆಸ್ತಿ ಪಾಸ್ತಿ ತೆರವುಗೊಳಿಸುವ ‘ಬುಲ್ಡೋಜರ್ ಮಾದರಿ’ ಕಾರ್ಯಾಚರಣೆಯನ್ನು ಕರ್ನಾಟಕದಲ್ಲೂ ಜಾರಿಗೊಳಿಸಬೇಕು ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂಪಿ ರೇಣುಕಾಚಾರ್ಯ ಒತ್ತಾಯಿಸಿದ್ದಾರೆ.

ಈ ಕುರಿತಾಗಿ ಟ್ವೀಟ್ ಮಾಡಿರುವ ಅವರು ‘ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ, ಸಾರ್ವಜನಿಕರ‌ ಆಸ್ತಿ- ಪಾಸ್ತಿಗಳನ್ನು ಹಾಳು ಮಾಡುವ ‘ದೇಶದ್ರೋಹಿಗಳಿಗೆ’ ಸೇರಿದ ಆಸ್ತಿಯನ್ನು ಮುಲಾಜಿಲ್ಲದೆ ಬುಲ್ಡೋಜರ್ ಮೂಲಕ ತೆರವುಗೊಳಿಸಿ ಸರ್ಕಾರ ತನ್ನ ವಶಕ್ಕೆ ಪಡೆಯಬೇಕು. ಇದು ಬಹಜನರ ಒತ್ತಾಸೆಯಾಗಿದೆ’ ಎಂದು ಹೇಳಿದ್ದಾರೆ. ಅಲ್ಲದೇ, ‘ರಾಜ್ಯದಲ್ಲಿ ಇತ್ತೀಚೆಗೆ ನಡೆಯುತ್ತಿರುವ ಕೆಲವು ‌ಅಹಿತಕರ‌ ಘಟನೆಗಳಿಂದ ಸಾರ್ವಜನಿಕರು ಭಯಭೀತರಾಗಿರುವುದು ಗುಟ್ಟಾಗಿ ಉಳಿದಿಲ್ಲ. ಇದಕ್ಕಿರುವ ಏಕೈಕ ‌ ಪರಿಹಾರವೆಂದರೆ ಉತ್ತರಪ್ರದೇಶದಂತೆ ರಾಜ್ಯದಲ್ಲೂ ‘ಬುಲ್ಡೋಜರ್ ಮಾದರಿ’ ಜಾರಿಯಾಗಬೇಕು ಎಂದು ಹೇಳಿದ್ದಾರೆ.

ಉತ್ತರ ಪ್ರದೇಶದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು, ಇಂತಹ ದೇಶದ್ರೋಹಿಗಳಿಗೆ ಬುಲ್ಡೋಜರ್ ಮೂಲಕವೇ ಉತ್ತರ ಕೊಟ್ಟಿದ್ದರಿಂದ ನಮ್ಮ ಶತ್ರು ರಾಷ್ಟ್ರದ ಪರ ಜೈ ಜೈ ಎನ್ನುತ್ತಿದ್ದ ‘ಪಾಕ್ ಪ್ರೇಮಿಗಳು’ ಈಗ ಬಿಲ ಸೇರಿಕೊಂಡಿವೆ ಎಂಬುದನ್ನು ನಾವು ಮರೆಯಬಾರದು. ಕೆಲವು ಸೈತನಾರಿಗೆ ಈ ದೇಶದ ಕಾನೂನು ನಮ್ಮನ್ನು ಏನು ಮಾಡಲಾರದು ಎಂದುಕೊಂಡಿದ್ದಾರೆ. ಏಕೆಂದರೆ, ನಮ್ಮಲ್ಲಿರುವ ನಕಲಿ ಜಾತ್ಯಾತೀತ ಮನಸ್ಸುಗಳು ಇವರಿಗೆ ಕುಮ್ಮಕ್ಕು ನೀಡುತ್ತಿರುವುದರಿಂದಲೇ ಇವರ ‌ಆಟಾಟೋಪಾಕ್ಕೆ ಕಡಿವಾಣ ಹಾಕುವವರು ಇಲ್ಲದಂತಾಗಿದೆ ಎಂದು ಎಂಪಿ ರೇಣುಕಾಚಾರ್ಯ ಟ್ವೀಟ್‌ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಕಾನೂನುಬಾಹಿರ ಚಟುವಟಿಕೆಗಳನ್ನು ನಡೆಸುವ ಯಾವುದೇ ವ್ಯಕ್ತಿ ಇಲ್ಲವೇ ‌ಸಂಘಟನೆಗಳಿಗೆ ಬುಲ್ಡೋಜರ್ ಮೂಲಕವೇ ತಕ್ಕ ಪಾಠ ಕಲಿಸಬೇಕು ‌ಎಂದು ರಾಜ್ಯದ ಜನತೆಯ ಪರವಾಗಿ ‌ವಿನಂತಿಸಿಕೊಳ್ಳುವೆ ಎಂದು ಹೇಳಿರುವ ಎಂಪಿ ರೇಣುಕಾಚಾರ್ಯ, ದೆಹಲಿ ಜಹಾಂಗೀರ್‌ ಪುರಿಯಲ್ಲಿ ನಡೆದ ಗಲಭೆಯ ಬೆನ್ನಲ್ಲೇ ಉತ್ತರ ದೆಹಲಿ ಮಹಾನಗರ ಪಾಲಿಕೆ (ಎನ್‌ಡಿಎಂಸಿ) ಬುಲ್ಡೋಜರ್ ಕಾರ್ಯಾಚರಣೆಯನ್ನು ನಡೆಸಿ ಮಸೀದಿಯ ಆವರಣ ಹಾಗೂ ಗೋಡೆ ಮತ್ತು ಸುತ್ತಲೂ ಇರುವ ಕಟ್ಟಡಗಳನ್ನು ನೆಲಸಮಗೊಳಿಸಿದೆ ಎಂದು ಹೇಳಿದ್ದಾರೆ.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

1 day ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

1 day ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

1 day ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

1 day ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

1 day ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

1 day ago