ಉಡುಪಿ: ಬುಲ್ ಟ್ರಲ್ ಮತ್ತು ಬೆಳಕು ಮೀನುಗಾರಿಗೆ ನಡೆಸುವ ಬೋಟ್ಗಳಿಗೆ ಡೀಸೆಲ್ ಸಬ್ಸಿಡಿ ಕಡಿತಗೊಳಿಸುವಂತೆ ಮೀನುಗಾರಿಕಾ ಇಲಾಖೆಯ ಅಧಿಕಾರಿಗಳಿಗೆ ಸರಕಾರದ ಕಾರ್ಯದರ್ಶಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಂ. ಮಹೇಶ್ವರ ರಾವ್ ಸೂಚಿಸಿದ್ದಾರೆ.
ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಅಧಿಕಾರಿಗಳ ಜಿಲ್ಲಾಭಿವೃದ್ಧಿ, ಮರಳು ಸಮಸ್ಯೆ ಹಾಗೂ ನೆರೆ ಪರಿಹಾರಗಳ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.
ಸರಕಾರವು ಬುಲ್ಟ್ರಾಲ್ ಹಾಗೂ ಬೆಳಕು ಮೀನುಗಾರಿಕೆಯನ್ನು ನಿಷೇಧಿಸಿದ್ದರೂ ಸಹ, ಇವುಗಳನ್ನು ಉಲ್ಲಂಘಿಸಿ ಮೀನುಗಾರಿಕೆ ನಡೆಸುತ್ತಿರುವ ಕುರಿತು ಮಾಹಿತಿ ಪಡೆದ ಮಹೇಶ್ವರ ರಾವ್, ನಿಷೇಧ ಉಲ್ಲಂಘಿಸುವ ಬೋಟ್ಗಳಿಗೆ ಡೀಸೆಲ್ ಸಬ್ಸಿಡಿ ಕಡಿತಗೊಳಿಸುವಂತೆ ಹಾಗೂ ಇಂತಹ ಬೋಟ್ ಮಾಲೀಕರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಹಾಗೂ ಅತೀ ಹೆಚ್ಚಿನ ದಂಡ ವಿಧಿಸುವ, ಲೈಸೆನ್ಸ್ ರದ್ದುಗೊಳಿಸುವ ಕುರಿತಂತೆ ಕರ್ನಾಟಕ ಮರೈನ್ ಫಿಷಿಂಗ್ ಕಾಯ್ದೆಯಲ್ಲಿ ಸೂಕ್ತ ತಿದ್ದುಪಡಿ ಮಾಡುವ ಬಗ್ಗೆ ಹಾಗೂ ಇವುಗಳನ್ನು ಪತ್ತೆ ಹಚ್ಚಲು ಪ್ರತ್ಯೇಕ ತಂಡ ರಚಿಸುವ ಕುರಿತಂತೆ ಸರ್ಕಾರದ ಮಟ್ಟದಲ್ಲಿ ಪ್ರಯತ್ನಿಸುವುದಾಗಿ ತಿಳಿಸಿದರು.
ಬೆಳಕು ಮೀನುಗಾರಿಕಾ ತಡೆಯುವ ನಿಟ್ಟಿನಲ್ಲಿ ಬಂದರು ದ್ವಾರದಲ್ಲೇ ಜನರೇಟರ್ ತೆಗೆದುಕೊಂಡು ಹೋಗುವುದನ್ನು ತಡೆಯುವಂತೆ ಹಾಗೂ ಈ ಬಗ್ಗೆ ಪೊಲೀಸ್ ಇಲಾಖೆಯ ನೆರವು ಪಡೆಯುವಂತೆ ಸೂಚಿಸಿದ ಅವರು, ಮೀನುಗಾರಿಕೆ ತೆರಳುವವರ ಸರಿಯಾದ ಮಾಹಿತಿ ಹೊಂದುವ ನಿಟ್ಟಿನಲ್ಲಿ ಡೀಸೆಲ್ ಬಂಕ್ನಲ್ಲಿಯೇ ಬೋಟ್ನಲ್ಲಿ ತೆರಳುವವರ ಸಂಪೂರ್ಣ ವಿವರ ಪಡೆಯುವಂತೆ ಹಾಗೂ ಸಮುದ್ರದಲ್ಲಿ ಬೋಟ್ಗಳನ್ನು ಸರಿಯಾದ ರೀತಿಯಲ್ಲಿ ಪತ್ತೆ ಹಚ್ಚುವ ಕುರಿತಂತೆ ಬೋಟ್ ಟ್ರಾಕಿಂಗ್ ಸಿಸ್ಟಂ ನನ್ನು ಎಲ್ಲಾ ಬೋಟ್ಗಳಲ್ಲಿ ಅಳವಡಿಸುವಂತೆ ಸೂಚಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಕುಂದಾಪುರ ಉಪ ವಿಭಾಗಾಧಿಕಾರಿ ರಾಜು, ಸಿಇಒ ಪ್ರೀತಿ ಗೆಹಲೋತ್, ಎಸ್.ಪಿ ನಿಶಾ ಜೇಮ್ಸ್ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…