Featured

ಬೃಹತ್ ಡ್ರಗ್ಸ್ ಜಾಲ ಮಟ್ಟ ಹಾಕಿದ ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆಗೆ ಸಂಸದ ಬ್ರಿಜೇಶ್ ಚೌಟ ಅಭಿನಂದನೆ – Vishwanews24

ಬೃಹತ್ ಡ್ರಗ್ಸ್ ಜಾಲ ಮಟ್ಟ ಹಾಕಿದ ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆಗೆ ಸಂಸದ ಬ್ರಿಜೇಶ್ ಚೌಟ ಅಭಿನಂದನೆ

ಮಂಗಳೂರು: ಮಂಗಳೂರು ನಗರ ಸೇರಿದಂತೆ ವಿವಿಧ ರಾಜ್ಯಗಳಿಗೆ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ನೈಜೀರಿಯಾ ಮೂಲದ ಪ್ರಜೆಯನ್ನು ಬಂಧಿಸಿ 6 ಕೋಟಿ ರೂ. ಮೌಲ್ಯದ ಎಂಡಿಎಂಎ ವಶಪಡಿಸಿಕೊಂಡಿರುವ ಮಂಗಳೂರಿನ ಸಿಸಿಬಿ ಪೊಲೀಸರ ಯಶಸ್ವಿ ಕಾರ್ಯಾಚರಣೆಗೆ ದ.ಕ. ಸಂಸದ ಬ್ರಿಜೇಶ್ ಚೌಟ ಅಭಿನಂದಿಸಿದ್ದಾರೆ.

ಜಿಲ್ಲೆಯ ಇತಿಹಾಸದಲ್ಲೇ ಮೊದಲ ಬಾರಿಗೆ ದೊಡ್ಡ ಪ್ರಮಾಣದಲ್ಲಿ ಮಾದಕ ವಸ್ತುಗಳನ್ನು ಪತ್ತೆ ಮಾಡಿ ನಟೋರಿಯಸ್ ಡ್ರಗ್ಸ್ ಪೆಡ್ಲರ್‌ನನ್ನು ಬಂಧಿಸಿರುವುದರ ಹಿನ್ನಲೆ ಪ್ರತಿಕ್ರಿಯಿಸಿರುವ ಚೌಟ ಅವರು, ಮಂಗಳೂರಿನ ಸಿಸಿಬಿ ಪೊಲೀಸರು ಈ ಬೃಹತ್ ಡ್ರಗ್ಸ್ ಜಾಲವನ್ನು ಬಯಲಿಗೆಳೆಯುವಲ್ಲಿ ಹಲವು ದಿನಗಳಿಂದ ಬೆನ್ನತ್ತಿ ಮಂಗಳೂರು, ಬೆಂಗಳೂರಿನಲ್ಲಿ ಮಾಹಿತಿ ಸಂಗ್ರಹಿಸಿದ್ದಾರೆ. ಆ ಮೂಲಕ ಕರಾವಳಿಗೆ ಪೂರೈಕೆಯಾಗುತ್ತಿದ್ದ ಈ ಡ್ರಗ್ಸ್ ದಂಧೆಯ ಮೂಲವನ್ನೇ ಪತ್ತೆ ಮಾಡಿ ಇಷ್ಟೊಂದು ದೊಡ್ಡ ಪ್ರಮಾಣದ ಮಾದಕ ವಸ್ತುವನ್ನು ವಶಪಡಿಸಿಕೊಂಡ ಈ ಐತಿಹಾಸಿಕ ಕಾರ್ಯಾಚರಣೆಗೆ ಸಹಕರಿಸಿ ರುವ ಸಿಸಿಬಿಯ ಎಲ್ಲ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಕಾರ್ಯ ಶ್ಲಾಘನೀಯ ಎಂದು ಹೇಳಿದ್ದಾರೆ.

ಸಂಸದನಾಗಿ ಆಯ್ಕೆಗೊಂಡ ಬಳಿಕ ನಡೆದ ಮೊದಲ ಸಂಸತ್ ಅಧಿವೇಶದಲ್ಲೇ ಕರಾವಳಿ ಸೇರಿದಂತೆ ದೇಶದೆಲ್ಲೆಡೆ ವ್ಯಾಪಕವಾಗುತ್ತಿರುವ ಡ್ರಗ್ಸ್ ಜಾಲವನ್ನು ತುರ್ತಾಗಿ ಮಟ್ಟ ಹಾಕಬೇಕೆಂದು ಒತ್ತಾಯಿಸಿದ್ದೆ. ಈ ಮಾದಕ ವಸ್ತುಗಳ ಜಾಲಕ್ಕೆ ಸಿಲುಕುತ್ತಿರುವ ಯುವಜನತೆಯನ್ನು ಅದರಿಂದ ಪಾರು ಮಾಡುವುದಕ್ಕೆ ನಾವೆಲ್ಲರೂ ಪೊಲೀಸರ ಜತೆಗೆ ಕೈಜೋಡಿಸ ಬೇಕೆಂದು ಹಲವು ವೇದಿಕೆಗಳಲ್ಲಿ ಪ್ರಸ್ತಾಪ ಕೂಡ ಮಾಡಿದ್ದೆ. ಹೀಗಿರುವಾಗ, ಡ್ರಗ್ಸ್ ಮುಕ್ತ ಕರಾವಳಿ ಮಾಡುವ ನಿಟ್ಟಿನಲ್ಲಿ ಸಾರ್ವಜನಿಕರ ಸಹಕಾರವೂ ಬಹಳ ಮುಖ್ಯ. ಪೊಲೀಸರ ಜತೆ ನಾವೆಲ್ಲರೂ ಕೈಜೋಡಿಸಿದರೆ ಆಳವಾಗಿ ಬೇರುಬಿಟ್ಟಿರುವ ಇಂಥಹ ಹಲವಾರು ಡ್ರಗ್ಸ್ ದಂಧೆಯನ್ನು ಮಟ್ಟ ಹಾಕುವ ಮೂಲಕ ಯಾವುದೋ ದೇಶದಿಂದ ಬಂದು ನಮ್ಮ ಯುವ ಸಮುದಾಯವನ್ನು ದಾರಿತಪ್ಪಿಸುವ ಜತೆಗೆ ಸಮಾಜದ ಸ್ವಾಸ್ಥ್ಯ ಕೆಡಿಸುತ್ತಿರುವ ನಟೋರಿಯಸ್ ಪೆಡ್ಲರ್‌ಗಳನ್ನು ಜೈಲಿಗಟ್ಟು ವುದಕ್ಕೆ ಸಾಧ್ಯವಾಗುತ್ತದೆ ಎಂದು ಚೌಟ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಎಂಆರ್‌ಪಿಎಲ್‌ ನಲ್ಲಿ ಭಾರೀ ಸ್ಫೋಟ : ಓರ್ವನ ಮೃತದೇಹ ಪತ್ತೆ -vishwanews24

ಎಂಆರ್‌ಪಿಎಲ್‌ ನಲ್ಲಿ ಭಾರೀ ಸ್ಫೋಟ : ಸುಟ್ಟು ಕರಕಲಾದ ಸ್ಥಿತಿಯಲ್ಲಿ ಓರ್ವನ ಮೃತದೇಹ ಪತ್ತೆ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ಬುಧವಾರ ಮಧ್ಯಾಹ್ನದ…

2 hours ago

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ: ಪೊಲೀಸ್ ಕಮಿಷನರ್ -vishwanews24

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ :…

8 hours ago

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  -vishwanews24

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು…

9 hours ago

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ; -vishwanews24

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…

9 hours ago

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ -vishwanews24

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…

11 hours ago

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು -vishwanews24

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…

11 hours ago