ಮಂಗಳೂರು :ಬೃಹತ್ ಸ್ವಚ್ಛತಾ ಕಾರ್ಯಕ್ರಮದೊಂದಿಗೆ ಗಾಂಧಿ ಜಯಂತಿಗೆ ಚಾಲನೆ : ಕೋಟ ಶ್ರೀನಿವಾಸ ಪೂಜಾರಿ -Vishwanews24

Featured, ದಕ್ಷಿಣ ಕನ್ನಡ

ಬೃಹತ್ ಸ್ವಚ್ಛತಾ ಕಾರ್ಯಕ್ರಮದೊಂದಿಗೆ ಗಾಂಧಿ ಜಯಂತಿಗೆ ಚಾಲನೆ : ಕೋಟ ಶ್ರೀನಿವಾಸ ಪೂಜಾರಿ -Vishwanews24

ಮಂಗಳೂರು,: ಗಾಂಧಿ ಜಯಂತಿಯ ಪ್ರಯುಕ್ತ ರಾಜ್ಯಾದ್ಯಂತ ಐದೂವರೆ ಸಾವಿರ ವಿದ್ಯಾರ್ಥಿ ನಿಲಯಗಳ ಮೂರು ಲಕ್ಷದ 50 ಸಾವಿರ ವಿದ್ಯಾರ್ಥಿಗಳು, ಇಲಾಖೆಯ ಸಿಬ್ಬಂದಿಯೊಂದಿಗೆ ಹಾಗೂ ಎಲ್ಲರ ಸಹಕಾರದೊಂದಿಗೆ ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ಜಾತಿ, ಪಂಗಡಗಳ ಕಲ್ಯಾಣ ಇಲಾಖೆಗಳ ಸಹಯೋಗದೊಂದಿಗೆ ಗಾಂಧಿ ಜಯಂತಿಯನ್ನು ಬೃಹತ್ ಸ್ವಚ್ಛತಾ ಕಾರ್ಯಕ್ರಮದೊಂದಿಗೆ ಚಾಲನೆ ನೀಡಲಾಗಿದೆ ಎಂದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಅವರು ಇಂದು ನಗರದ ಕದ್ರಿಯ ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯದಲ್ಲಿ ನಡೆದ ಸ್ವಚ್ಛತಾ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡುತ್ತಿದ್ದರು.

ರಾಜ್ಯದ ಪ್ರತಿ ಜಿಲ್ಲೆಗಳಲ್ಲೂ ಗಾಂಧಿ ಜಯಂತಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿಯವರ ಜನ್ಮದಿನದ ಸಂದರ್ಭದಲ್ಲಿ ಸ್ವಚ್ಛತಾ ಅಭಿಯಾನವನ್ನು ಹಮ್ಮಿಕೊಳ್ಳಲು ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ. ವಿದ್ಯಾರ್ಥಿಗಳು ಅಧಿಕಾರಿಗಳು ಹಾಗೂ ಸಾರ್ವಜನಿಕರ ಭಾಗವಹಿಸುವಿಕೆಯೊಂದಿಗೆ ಈ ಅಭಿಯಾನ ವಿಶೇಷವಾದ ಜಾಗೃತಿ ಕಾರ್ಯಕ್ರಮವಾಗಿದೆ ಎಂದು ಸಚಿವರು ಹೇಳಿದರು.

ಕೊರೋನಾದಿಂದ ಕುಟುಂಬ ನಾಶ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ -Vishwanews24

*ಗ್ರಾಮ ಪಂಚಾಯತ್ ಗಳಲ್ಲಿ ಸಮಾಜ ಕಲ್ಯಾಣ ಇಲಾಖೆಯ ಫಲಾನುಭವಿಗಳು ಅರ್ಜಿ ಸಲ್ಲಿಸಲು ಅನುಕೂಲವಾಗುವಂತೆ ಕ್ರಮ ಕೈಗೊಳ್ಳಲಾಗುತ್ತದೆ.ಈ ನಿಟ್ಟಿನಲ್ಲಿ ಬಂಟ್ವಾಳದಲ್ಲಿ ಅ.4ರಂದು ಹಿಂದುಳಿದ ವರ್ಗಗಳ ಇಲಾಖೆ,ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ಜಾತಿ ಪಂಗಡಗಳ ಇಲಾಖೆಯ ವತಿಯಿಂದ ಹಮ್ಮಿಕೊಂಡಿರುವ ಅಂತ್ಯೋದಯ ಕಾರ್ಯಕ್ರಮ ಮಹತ್ವದ ಹೆಜ್ಜೆಯಾಗಿದೆ ಎಂದು ಕೋಟ ಶ್ರೀ ನಿವಾಸ ಪೂಜಾರಿ ತಿಳಿಸಿದ್ದಾರೆ.

ಈ ಸಂದರ್ಭ ಸಂಸದ ನಳಿನ್ ಕುಮಾರ್ ಕಟೀಲು, ಶಾಸಕ ವೇದವ್ಯಾಸ ಕಾಮತ್, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಮೂಡುಬಿದಿರೆ, ಹಿಂದುಳಿದ ವರ್ಗಗಳ ಇಲಾಖೆಯ ಜಿಲ್ಲಾಧಿಕಾರಿ ಸಚಿನ್ ಕುಮಾರ್ ,ಬಿಜೆಪಿ ಹಿಂದುಳಿದ ಮೋರ್ಚಾದ ಜಿಲ್ಲಾಧ್ಯಕ್ಷ ನಾರಾಯಣ ಬೆಟ್ಟಂಪಾಡಿ, ಬಿಜೆಪಿ ಮುಖಂಡರಾದ ಸತೀಶ್ ಕುಂಪಲ, ವಿಜಯ ಕುಮಾರ್ ಮತ್ತು ಮನಪಾ ಸದಸ್ಯರು, ಬಿಜೆಪಿ ಹಿಂದುಳಿದ ಮೋರ್ಚಾದ ಸದಸ್ಯರು ಮೊದಲಾದವರು ಉಪಸ್ಥಿತರಿದ್ದು, ಸ್ವಚ್ಛತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು‌.