ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಪಂದ್ಯ ನಮ್ಮ ಕಡೆಯಿಂದ ಕ್ಲಿಯರೆನ್ಸ್ ಸಿಗಬೇಕಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಮಾಹಿತಿ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಜಸ್ಟೀಸ್ ಕುನ್ಹಾ ಅವರ ವರದಿಯ ಶಿಫಾರಸು ಪಾಲಿಸಬೇಕು ಅಂತ ಹೇಳಿದ್ದೀವಿ. ಸರ್ಕಾರದಿಂದ ಜಿಬಿಎ ಹಾಗೂ ನಗರ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಸಮಿತಿ ಕೂಡಾ ರಚಿಸಲಾಗಿತ್ತು. ಸಮಿತಿಯು ಕೂಡಾ ಒಂದಷ್ಟು ಶಿಫಾರಸು ಮಾಡಿದೆ. ಐಪಿಎಲ್ ಮ್ಯಾಚ್‌ಗಳು ಬರ್ತಿವೆ. ನಮ್ಮ ಕಡೆಯಿಂದ ಕ್ಲಿಯರೆನ್ಸ್ ಸಿಗಬೇಕಿದೆ. ಬುಧವಾರ ನಾನು ಸಭೆ ಕರೆದಿದ್ದೇನೆ. ಸರ್ಕಾರದ ಹಂತದಲ್ಲಿ ಏನು ಮಾಡಬೇಕೋ, ಅವರಿಗೆ ಏನು ಸೂಚನೆ ಕೊಡಬೇಕೋ ಅಂತ ನೋಡ್ತೇವೆ” ಎಂದರು.
“ಸಿಎಂ ಜತೆಗೂ ಚರ್ಚೆ ಮಾಡಬೇಕಾಗಿದೆ. ನಮ್ಮ ಶಿಫಾರಸನ್ನು ಅವರು ಎಷ್ಟರ ಮಟ್ಟಿಗೆ ಪೂರೈಸಿದ್ದಾರೆ ಅಂತ ನೋಡಿ ತೀರ್ಮಾನ ಮಾಡ್ತೇವೆ. ಬೆಂಗಳೂರಿನಲ್ಲಿ ಮ್ಯಾಚ್ ಆಗಬೇಕು ಅಂತ ಅಭಿಮಾನಿಗಳು ಬಯಸ್ತಿದ್ದಾರೆ. ಆದರೆ, ಸುರಕ್ಷತೆಯನ್ನೂ ನೋಡಬೇಕು, ಕಾಲ್ತುಳಿತದಂಥ ಘಟನೆಗಳು ಮರುಕಳಿಸಬಾರದಲ್ಲ. ಎಲ್ಲವನ್ನೂ ನೋಡಿ ತೀರ್ಮಾನಿಸುತ್ತೇವೆ” ಎಂದು ತಿಳಿಸಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…