Featured

ಬೆಂಗಳೂರಲ್ಲಿ ಮನೆ ಲೀಸ್​​ಗೆ ಪಡೆಯೋ ಮುನ್ನ ಎಚ್ಚರ; ಲಕ್ಷಾಂತರ ರೂ. ವಂಚನೆ ಆರೋಪ – vishwanews24

ಬೆಂಗಳೂರಲ್ಲಿ ಮನೆ ಲೀಸ್​​ಗೆ ಪಡೆಯೋ ಮುನ್ನ ಎಚ್ಚರ; ಕುಟುಂಬಗಳಿಂದ ಲಕ್ಷಾಂತರ ರೂ. ವಂಚನೆ ಆರೋಪ

ಬೆಂಗಳೂರು : ಬೆಂಗಳೂರು ನಗರದಲ್ಲಿ ಮನೆ ಲೀಸ್ ಹೆಸರಿನಲ್ಲಿ ಹತ್ತಾರು ಜನರಿಗೆ ಭಾರೀ ವಂಚನೆ ಎಸಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಕೆಟಿನಾ ಹೋಮ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಎಂಬ ಖಾಸಗಿ ಕಂಪನಿ ಹೆಸರಿನಲ್ಲಿ ವ್ಯಕ್ತಿಯೊಬ್ಬ ಅನೇಕ ಕುಟುಂಬಗಳಿಂದ ಲಕ್ಷಾಂತರ ರೂಪಾಯಿಗಳನ್ನು ಪಡೆದು ನಾಪತ್ತೆಯಾಗಿದ್ದಾನೆ. ಇದೀಗ ಆರೋಪಿ ವಿವೇಕ್ ಕೇಶವನ್ ಹಾಗೂ ಆತನ ಸಹಚರರ ವಿರುದ್ಧ ಪರಪ್ಪನ ಅಗ್ರಹಾರ, ಹೆಬ್ಬಗೋಡಿ ಮತ್ತು ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಗಳಲ್ಲಿ ವಿವಿಧ ಎಫ್​ಐಆರ್​​ಗಳು ದಾಖಲಾಗಿವೆ.

ಕೆಟಿನಾ ಹೋಮ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಮಾಲೀಕ ವಿವೇಕ್ ಕೇಶವನ್, ವೆಬ್‌ಸೈಟ್ ಮುಖಾಂತರ ಮನೆ ಬಾಡಿಗೆಗೆ ಪಡೆದು ನಂತರ ಅದೇ ಮನೆಗಳನ್ನು ಲೀಸ್‌ಗೆ ನೀಡುವ ಮೂಲಕ ಜನರಿಂದ ಭಾರೀ ಮೊತ್ತವನ್ನು ಪಡೆದುಕೊಂಡಿರುವ ಆರೋಪ ಕೇಳಿಬಂದಿದೆ. ಪ್ರಾರಂಭದಲ್ಲಿ ಮನೆಯ ಮಾಲೀಕರಿಗೆ ಒಂದೆರಡು ತಿಂಗಳು ಬಾಡಿಗೆ ಪಾವತಿಸಿದ್ದರೂ, ಕಳೆದ ಆರು ತಿಂಗಳಿಂದ ಯಾವುದೇ ಬಾಡಿಗೆ ಹಣ ಪಾವತಿಸಿರಲಿಲ್ಲ. ಅಲ್ಲದೆ, ಕಂಪನಿ ಕಚೇರಿಯನ್ನು ರಾತ್ರೋರಾತ್ರಿ ಖಾಲಿ ಮಾಡಿ ಪರಾರಿಯಾಗಿದ್ದಾನೆ ಎಂದು ವಂಚನೆಗೆ ಒಳಗಾದವರು ಆರೋಪಿಸಿದ್ದಾರೆ.

ಬೀದಿಗೆ ಬಿದ್ದ ಕುಟುಂಬಗಳು
ಮನೆ ಲೀಸ್‌ಗೆ ಪಡೆದ ನೂರಾರು ಕುಟುಂಬಗಳು ಇದೀಗ ಸಂಕಷ್ಟಕ್ಕೆ ಸಿಲುಕಿವೆ. ಮಾಲೀಕರು ಮನೆ ಖಾಲಿ ಮಾಡಬೇಕೆಂದು ಒತ್ತಡ ಹೇರುತ್ತಿದ್ದಾರೆ. ವಂಚನೆಗೆ ಒಳಗಾದವರು ತಮ್ಮ ಲಕ್ಷಾಂತರ ರೂಪಾಯಿಗಳನ್ನು ಕಳೆದುಕೊಂಡು ಮನೆ ಇಲ್ಲದೆ ಬೀದಿಗೆ ಬೀಳುವ ಸ್ಥಿತಿಗೆ ತಲುಪಿದ್ದಾರೆ.

60 ಕೋಟಿ ರೂಪಾಯಿಗೂ ಹೆಚ್ಚು ವಂಚನೆ ಶಂಕೆ
ಸುಮಾರು 60 ಕೋಟಿ ರೂಪಾಯಿಗೂ ಅಧಿಕ ವಂಚನೆ ನಡೆದಿದೆ ಎಂಬ ಶಂಕೆ ವ್ಯಕ್ತವಾಗಿದೆ. ಮಾರತ್ತಹಳ್ಳಿ, ಬಾಣಸವಾಡಿ, ಅಮೃತಹಳ್ಳಿ ಸೇರಿದಂತೆ ಬೆಂಗಳೂರಿನ ಅನೇಕ ಪ್ರದೇಶಗಳಲ್ಲಿ ಆರೋಪಿ ವಂಚನೆ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

1 day ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

1 day ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

1 day ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

1 day ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

1 day ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

1 day ago