Mumbai: Vehicles ply on a waterlogged street during rain, at King's circle in Mumbai, Friday, July 3, 2020. (PTI Photo/Shashank Parade)(PTI03-07-2020_000101A)
ಬೆಂಗಳೂರು: ಮುಂದಿನ 3 ಗಂಟೆಯಲ್ಲಿ ನಗರದ ಹಲವೆಡೆ ಬಿರುಗಾಳಿ, ಗುಡುಗು ಮಿಂಚು ಸಹಿತ ಭಾರೀ ಮಳೆಯಾಗಲಿದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಇಲಾಖೆ ಎಚ್ಚರಿಕೆ ನೀಡಿದೆ.
ಇಂದು ಸಂಜೆ ವೇಳೆಗೆ ಬೆಂಗಳೂರಿನ ಕೆಲವು ಕಡೆ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಗಾಳಿಯ ವೇಗವು 30-40 ಕಿಮೀ ರಷ್ಟು ಇರಲಿದ್ದು ವಾಹನ ಸವಾರರು, ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದೆ. ಮುಂದಿನ ಮೂರು ಗಂಟೆಗಳಲ್ಲಿ ಬೆಂಗಳೂರು ನಗರ , ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ಹಾಗೂ ಮಂಡ್ಯ ಜಿಲ್ಲೆ ಸೇರಿದಂತೆ ವಿವಿಧೆಡೆ ಭಾರೀ ಮಳೆಯಾಗಲಿದೆ ಎಂದೂ ಹೇಳಿದೆ.
ಮೇ. 30 ರಿಂದ ಜೂನ್ 1 ರವರೆಗೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು, ಮಂಡ್ಯ, ರಾಮನಗರ, ಚಾಮರಾಜನಗರ ಜಿಲ್ಲೆಗಳಿಗೆ ಮೇ 31 ಹಾಗೂ ಜೂನ್ 1 ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇನ್ನು ಕರಾವಳಿ ಜಿಲ್ಲೆಗಳಲ್ಲಿ ನಾಳೆಯಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ದಕ್ಚಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜೂನ್ ಮೊದಲ ವಾರದಲ್ಲಿ ಕರ್ನಾಟಕಕ್ಕೆ ಮುಂಗಾರು ಪ್ರವೇಶ ಮಾಡಲಿದೆ. ಅದಕ್ಕೂ ಮೊದಲು ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ರಾಜ್ಯಕ್ಕೆ ಜೂನ್ ಮೊದಲ ವಾರದಲ್ಲಿ ಮುಂಗಾರು ಪ್ರವೇಶವಾಗಲಿದೆ. ಹೀಗಾಗಿ ಮುಂಗಾರು ಆಗಮನಕ್ಕೂ ಮುನ್ನವೇ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…
ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…