ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ: ಸಿಎಂ ಡಿಕೆಶಿ ಸ್ವಾಗತ – vishwanews24

Featured, ರಾಜ್ಯ ನ್ಯೂಸ್

ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ: ಸಿಎಂ ಡಿಕೆಶಿ ಸ್ವಾಗತ

ಬೆಂಗಳೂರು: ಒಂದು ದಿನದ ಪ್ರವಾಸಕ್ಕಾಗಿ ರಾಜ್ಯಕ್ಕೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಬೆಳಗ್ಗೆ ಬೆಂಗಳೂರಿಗೆ ಆಗಮಿಸಿದ್ದು, ರಾಜ್ಯಪಾಲೆ ಡಾ. ಸುಧಾ ಯಾದವ್, ಸಿಎಂ ಡಿ.ಕೆ.ಶಿವಕುಮಾರ್ ಅವರು ಸ್ವಾಗತಿಸಿದ್ದಾರೆ.

ಬೆಳಗ್ಗೆ 10 ಗಂಟೆಗೆ ಬೆಂಗಳೂರಿನ ಎಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ಮೋದಿ ಅಲ್ಲಿಂದ ಹೆಲಿಕಾಪ್ಟಾರ್ ಮೂಲಕ ಜಿಗಣಿಗೆ ಬಂದಿಳಿದರು. ಪ್ರಧಾನಿ ನೇರವಾಗಿ ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿರುವ ಪ್ರಶಾಂತಿ ಕುಟೀರಂಗೆ ಭೇಟಿ ನೀಡಿದ್ದಾರೆ.

ಉಡುಪಿ ಶ್ರೀಕೃಷ್ಣ ಮಠಕ್ಕೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಭೇಟಿ – vishwanews24

 

ಎಚ್‌ಎಲ್ ನಿಂದ ನೇರವಾಗಿ ಜಿಗಣಿ ಬಳಿಯ ಸ್ವಾಮಿ ವಿವೇಕಾನಂದ ಯೋಗ ಅನುಸಂಧಾನ ಸಂಸ್ಥಾನ (ಎಸ್-ವ್ಯಾಸ)ದಲ್ಲಿನ ಪ್ರಶಾಂತಿ ಕುಟೀರಂನ ಸುವರ್ಣ ಮಹೋತ್ಸವದಲ್ಲಿ ಪಾಲ್ಗೊಂಡಿದ್ದಾರೆ. ಎಸ್ -ವ್ಯಾಸ ಸ್ಥಾಪನೆಯ ಹಿಂದಿನ ಶಕ್ತಿಯಾದ ಹೊ.ವೇ. ಶೇಷಾದ್ರಿ (ಹೊಂಗಸಂದ್ರ ವೆಂಕಟರಾಮಯ್ಯ ಶೇಷಾದ್ರಿ) ಅವರ ಜನ್ಮಶತಾಬ್ಲಿಯೂ ಇದ್ದು ಇದೇ ಸಂದರ್ಭದಲ್ಲಿ ನಡೆಯುತ್ತಿದ್ದು ಮೋದಿ ಭಾಗಿಯಾಗಿರುವುದು ವಿಶೇಷವಾಗಿದೆ.

ಪ್ರಧಾನಿ ಮೋದಿ 15600 ಕೋಟಿ ರೂ. ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳನ್ನು ದೇಶಕ್ಕೆ ಸಮರ್ಪಿಸಲಿದ್ದು,ಕೆಲ ಅಭಿವೃದ್ಧಿ ಯೋಜನೆಗಳಿಗೆ ಶಂಕು ಸ್ಥಾಪನೆ ನೆರವೇರಿ ಸಲಿದ್ದಾರೆ. ಮೈಸೂರಿಗೆ ಭೇಟಿ ನೀಡಲಿದ್ದಾರೆ. ಮೈಸೂರಿನಲ್ಲಿ ತಾರಾಲಯ ಉದ್ಘಾಟಿಸಿ ನವದೆಹಲಿಗೆ ಮರಳಲಿದ್ದಾರೆ.

ಉಡುಪಿ :  ನೇರ ಸಂದರ್ಶನ – vishwanews24

 

Leave a Reply