ಬೆಂಗಳೂರು: ರಾಜ್ಯಕ್ಕೆ ಮೊದಲ ಎಲೆಕ್ಟ್ರಿಕ್ ಬಸ್ ಬೆಂಗಳೂರಿಗೆ ಬಂದಿದೆ. ಸ್ಮಾರ್ಟ್ ಸಿಟಿ ಯೋಜನೆಯಡಿ 90 ಮಿನಿ ಬಸ್ ಗಳನ್ನು ರಸ್ತೆಗೆ ಇಳಿಸಲು ಬಿಎಂಟಿಸಿ ಮುಂದಾಗಿದೆ.
ಜೆಬಿಎಂ ಕಂಪನಿಯಿಂದ ಗುತ್ತಿಗೆ(ಜಿಸಿಸಿ) ಆಧಾರದಲ್ಲಿ ಬಸ್ ಪಡೆದುಕೊಳ್ಳಲಾಗುತ್ತಿದ್ದು, ಎನ್ ಟಿಪಿಸಿ ಸಹಯೋಗದಲ್ಲಿ ಸೇವೆ ಒದಗಿಸಲು ಒಪ್ಪಂದ ಮಾಡಿಕೊಳ್ಳಲಾಗಿದೆ.
ಬೆಂಗಳೂರಿಗೆ ಬಂದ ಮೊದಲ ಬಸ್ ಪರೀಕ್ಷಾರ್ಥ ಸಂಚಾರವನ್ನು ಬಿಎಂಟಿಸಿಯ ಕೆಂಗೇರಿ ಘಟಕದೊಳಗೇ ನಡೆಸಲಾಯಿತು. ಸಾರಿಗೆ ಸಚಿವ ಶ್ರೀರಾಮುಲು, ಬಿಎಂಟಿಸಿ ಅಧ್ಯಕ್ಷ ನಂದೀಶ್ ರೆಡ್ಡಿ,ಉಪಾಧ್ಯಕ್ಷ ಎಂ.ಆರ್. ವೆಂಕಟೇಶ್, ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕಟಾರಿಯಾ, ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್ ಬಸ್ ನಲ್ಲಿ ಕುಳಿತು ಒಂದು ಸುತ್ತು ಸಂಚರಿಸಿದರು.
ಕನ್ನಡ ಕಿರುತೆರೆ ನಟಿ ಸೌಜನ್ಯ ಆತ್ಮಹತ್ಯೆಗೆ ಶರಣು -Vishwanews24
34 ಆಸನಗಳ ಈ ಬಸ್ ನಲ್ಲಿ ಎರಡು ಸಿಸಿಟಿವಿ ಕ್ಯಾಮರಾ ಅಳವಡಿಸಲಾಗಿದೆ. ಆರು ಬ್ಯಾಟರಿಗಳ ಸಹಾಯದಲ್ಲಿ ಬಸ್ ಸಂಚರಿಸಲಿದೆ. ಒಮ್ಮೆ ಚಾರ್ಜ್ ಮಾಡಿದರೆ 120 ಕಿಲೋ ಮೀಟರ್ ಸಂಚರಿಸುವ ಸಾಮರ್ಥ್ಯ ಹೊಂದಿದೆ.
ನ.1ಕ್ಕೆ 10 ಬಸ್‌ಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಾರ್ವಜನಿಕ ಸೇವೆಗೆ ಸಮರ್ಪಿಸುವರು.
ಡಿಸೆಂಬರ್ ಅಂತ್ಯದ ವೇಳೆಗೆ ಎಲ್ಲಾ 90 ಬಸ್‌ಗಳು ರಸ್ತೆಗೆ ಇಳಿಯಲಿವೆ. ಎರಡನೇ ಹಂತದಲ್ಲಿ 300 ಬಸ್‌ಗಳು ಇನ್ನು ಆರು ತಿಂಗಳಲ್ಲಿ ರಸ್ತೆಗೆ ಇಳಿಯಲಿವೆ ಎಂದು ಶ್ರೀರಾಮುಲು ತಿಳಿಸಿದರು.
ಕುಂದಾಪುರ: ಹೋಂ ಸ್ಟೇ ಎನ್ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…
ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ :…
ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…
ಉಡುಪಿ: ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…