ಬೆಂಗಳೂರಿನಲ್ಲಿರುವ ಯೂಟ್ಯೂಬರ್ ಸಮೀರ್.ಎಂ.ಡಿ ಬಾಡಿಗೆ ಮನೆಗೆ ಬೆಳ್ತಂಗಡಿ ಪೊಲೀಸರಿಂದ ದಾಳಿ – vishwanews24

Featured, ದಕ್ಷಿಣ ಕನ್ನಡ, ರಾಜ್ಯ ನ್ಯೂಸ್

ಬೆಂಗಳೂರಿನಲ್ಲಿರುವ ಯೂಟ್ಯೂಬರ್ ಸಮೀರ್.ಎಂ.ಡಿ ಬಾಡಿಗೆ ಮನೆಗೆ ಬೆಳ್ತಂಗಡಿ ಪೊಲೀಸರಿಂದ ದಾಳಿ

ಬೆಳ್ತಂಗಡಿ : ಯೂಟ್ಯೂಬರ್ ಸಮೀರ್.ಎಂ.ಡಿ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಸರ್ಕಲ್‌ ಇನ್ಸ್ಪೆಕ್ಟರ್ ನಾಗೇಶ್ ಕದ್ರಿ ಮತ್ತು ತಂಡ ಎಫ್.ಎಸ್.ಎಲ್ ವಿಭಾಗದ ಸೋಕೊ ಸಿಬ್ಬಂದಿ ಜೊತೆಗೆ ಸೆ.4 ರಂದು ಮಧ್ಯಾಹ್ನ ಬೆಂಗಳೂರಿನ ಬನ್ನೇರುಘಟ್ಟದ ಹುಳ್ಳಹಲ್ಲಿಯಲ್ಲಿರುವ ಬಾಡಿಗೆ ಮನೆಗೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಬೆಳ್ತಂಗಡಿ ನ್ಯಾಯಾಲಯದಿಂದ ಸೆ.3 ರಂದು ಸರ್ಚ್ ವಾರಂಟ್ ಪಡೆದುಕೊಂಡು ಪೊಲೀಸರು ಬೆಂಗಳೂರಿಗೆ ತೆರಳಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆತನ ಮನೆಯಿಂದ ವಿಡಿಯೋ ಮಾಡಲು ಬಳಸಿದ ಕಂಪ್ಯೂಟರ್ ಮತ್ತು ಮೊಬೈಲ್ ಫೋನ್ ಜಪ್ತಿ ಮಾಡಿ ತನಿಖೆ ನಡೆಸಲಿರುವುದಾಗಿ ತಿಳಿದು ಬಂದಿದೆ.

ಉಡುಪಿ : ಹೂಡಿಕೆ ಹೆಸರಿನಲ್ಲಿ ವ್ಯಕ್ತಿಗೆ ಕೋಟ್ಯಂತರ ರೂ. ಆನ್‌ಲೈನ್ ವಂಚನೆ – vishwanews24

Leave a Reply