Featured

ಬೆಂಗಳೂರಿನಲ್ಲಿ ಅಣುಕು ಕೊರೊನಾ ಲಸಿಕೆ ವಿತರಣೆ ಆರಂಭ -Vishwanews24

ಬೆಂಗಳೂರಿನಲ್ಲಿ ಅಣುಕು ಕೊರೊನಾ ಲಸಿಕೆ ವಿತರಣೆ ಆರಂಭ -Vishwanews24

ಬೆಂಗಳೂರು : ಕೇಂದ್ರ ಸರ್ಕಾರವು ದೇಶದ 4 ರಾಜ್ಯಗಳಲ್ಲಿ ಕೊರೋನಾ ಲಸಿಕೆ ವಿತರಣೆ ತಾಲೀಮು ನಡೆಸಲು ಸೂಚನೆ ನೀಡಿದೆ. ಕೇಂದ್ರ ಸರ್ಕಾರದ ಸೂಚನೆಯ ಹಿನ್ನಲೆಯಲ್ಲಿ ರಾಜ್ಯದ ಐದು ಜಿಲ್ಲೆಗಳಲ್ಲಿ ಇಂದು ಕೊರೋನಾ ಲಸಿಕೆ ವಿತರಣೆಯ ತಾಲೀಮು ಶುರುವಾಗಿದೆ. ಇದಕ್ಕಾಗಿ ಕೋವಿನ್ ಅಪ್ಲಿಕೇಷನ್ ನಲ್ಲಿ ಲಸಿಕೆ ಪಡೆಯುತ್ತಿರುವವರ ಹೆಸರನ್ನು ನಮೂದಿಸಲಾಗಿದ್ದು, ರಾಜ್ಯದ ಬೆಂಗಳೂರು ನಗರ, ಶಿವಮೊಗ್ಗ, ಕಲಬುರ್ಗಿ, ಮೈಸೂರು ಹಾಗೂ ಬೆಳಗಾವಿಯಲ್ಲಿ ಇಂದು ಕೊರೋನಾ ಲಸಿಕೆ ವಿತರಣೆಯ ತಾಲೀಮು ನಡೆಯಲಿದೆ.

ಬೆಂಗಳೂರಿನಲ್ಲಿ ಅಣಕು ಲಸಿಕೆ ವಿತರಣೆ ಕಾರ್ಯಕ್ರಮ ಆರಂಭವಾಗಿದೆ. ಆರೋಗ್ಯ ಇಲಾಖೆಯ 25 ಮಂದಿ ಈಗಾಗಲೇ ಆಗಮಿಸಿದ್ದು ತಾಲೀಮಿನಲ್ಲಿ ಭಾಗವಹಿಸಿದ್ದಾರೆ.ಬೆಂಗಳೂರಿನಲ್ಲಿ ಎರಡು ಕಡೆ ಲಸಿಕೆಯ ಡ್ರೈ ರನ್‌ (ತಾಲೀಮು) ನಡೆಯುತ್ತಿದ್ದು, ಅವುಗಳೆಂದರೆ ನಗರದ ವಿದ್ಯಾಪೀಠ (ದಕ್ಷಿಣ ವಲಯ) ಮತ್ತು ಕಾಮಾಕ್ಷಿಪಾಳ್ಯ (ಪಶ್ಚಿಮ ವಲಯ)ದಲ್ಲಿ ಹಾಗೂ ಬೆಂಗಳೂರು ಗ್ರಾಮೀಣ ಪ್ರದೇಶದ ಬನ್ನೇರುಘಟ್ಟ-ಅನೆಕಲ್ ರಸ್ತೆಯ ಹರಗದ್ದೆಯಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಲಸಿಕೆ ವಿತರಣೆಯ ತಾಲೀಮು ನಡೆಯುತ್ತಿದೆ.ಡ್ರೈನ್‌ ರನ್‌ ( ತಾಲೀಮು) ಬಳಿಕ ಎಲ್ಲಾ ಅಂಕಿ-ಅಂಶಗಳ ವರದಿಯನ್ನು ರಾಜ್ಯ ಸರ್ಕಾರ ಕೇಂದ್ರ ಆರೋಗ್ಯ ಇಲಾಖೆಗೆ ನೀಡಲಿದೆ. ‘ಕೋವಿಶೀಲ್ಡ್‌’ ಲಸಿಕೆಯನ್ನು ತುರ್ತು ಸಂದರ್ಭಗಳಲ್ಲಿ ಸೋಂಕಿತರಿಗೆ ಬಳಸಲು ತಜ್ಞರ ಸಮಿತಿ ಶುಕ್ರವಾರ ಷರತ್ತುಬದ್ಧ ಅನುಮೋದನೆ ನೀಡಿದೆ, ಆದರೆ ದೇಶದ ಜನತೆ ಬಳಕೆಗೆ ಔಷಧ ನಿಯಂತ್ರಣ ಪ್ರಾಧಿಕಾರದ (ಡಿಸಿಜಿಐ) ಅನುಮೋದನೆ ಅಗತ್ಯವಾಗಿದೆ,. ಅಂತಿಮ ಆದೇಶ ಹೊರ ಬರಬೇಕಾಗಿದೆ.

ಮೀನಿನಲ್ಲಿ ಫಾರ್ಮಲಿನ್ ಬಳಕೆ ಇರುವುದು ಕಂಡುಬಂದಿಲ್ಲ: ಜಿಲ್ಲಾಧಿಕಾರಿ ಜಿ. ಜಗದೀಶ್ -Vishwanews24

ಬೆಂಗಳೂರಿನಲ್ಲಿ ಎರಡು ಕಡೆ ಲಸಿಕೆಯ ಡ್ರೈ ರನ್‌ ನಡೆಯತ್ತಿದೆ. ಒಂದು ನಗರದ ವಿದ್ಯಾಪೀಠ (ದಕ್ಷಿಣ ವಲಯ) ಮತ್ತು ಕಾಮಾಕ್ಷಿಪಾಳ್ಯ (ಪಶ್ಚಿಮ ವಲಯ)ದಲ್ಲಿ ನಡೆಸಲಾಗುತ್ತಿದೆ. ಇನ್ನೊಂದು ಬೆಂಗಳೂರು ಗ್ರಾಮೀಣ ಪ್ರದೇಶದ ಬನ್ನೇರುಘಟ್ಟ-ಅನೆಕಲ್ ರಸ್ತೆಯ ಹರಗದ್ದೆಯಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಲಸಿಕೆ ವಿತರಣೆ ನಡೆಯುತ್ತಿದೆ.

ಒಂದು ಪ್ರಾಥಮಿಕ ಕೇಂದ್ರದಲ್ಲಿ 25 ಮಂದಿ ಲಸಿಕೆ ಪಡೆಯಲಿದ್ದಾರೆ. ವಿತರಣೆ ಬಳಿಕ ಕೇಂದ್ರಕ್ಕೆ ರಾಜ್ಯ ವರದಿ ನೀಡುತ್ತದೆ. ಕೇಂದ್ರ ಸರಕಾರದ ಒಂದು ಬಾರಿ ಲಸಿಕೆ ನೀಡಲು ಅನುಮತಿ ನೀಡಿದರೆ ಬೆಂಗಳೂರಿನ ಸುಮಾರು 1,517 ಆರೋಗ್ಯ ಕೇಂದ್ರಗಳನ್ನು ಲಸಿಕೆ ವಿತರಣೆ ಬಳಸಿಕೊಳ್ಳಲಾಗುತ್ತದೆ ಎಂದು ಬಿಬಿಎಂಪಿ ತಿಳಿಸಿದೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago