ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬುಧವಾರ (ಇಂದು) ಮಧ್ಯಾಹ್ನ ಮಹಾ ದರೋಡೆ ನಡೆದಿದೆ. ಎಟಿಎಂಗೆ ಹಣ ಸಾಗಿಸುವ ವಾಹನವನ್ನು ರಸ್ತೆ ಮಧ್ಯೆದಲ್ಲೇ ಅಡ್ಡಗಟ್ಟಿದ ದರೋಡೆಕೋರರು ಕೋಟ್ಯಂತರ ರೂಪಾಯಿ ದರೋಡೆ ಮಾಡಿದೆ.
ಬೆಂಗಳೂರಿನ ಜಯದೇವ ಡೈರಿ ಸರ್ಕಲ್ ಫ್ಲೈ ಓವರ್ ಮೇಲೆ (ಅಶೋಕ ಪಿಲ್ಲರ್ ಬಳಿ) ಈ ಘಟನೆ ನಡೆದಿದೆ. ವಾಹನದಲ್ಲಿದ್ದ 7 ಕೋಟಿ 11 ಲಕ್ಷ ರೂಪಾಯಿ ಹಣವನ್ನ ದೋಚಿ ದರೋಡೆಕೋರರು ಪರಾರಿಯಾಗಿದ್ದಾರೆ. ಸದ್ಯ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ತನಿಖೆ ನಡೆಸುತ್ತಿದ್ದಾರೆ.
ಸೌತ್ ಎಂಡ್ ಸರ್ಕಲ್ ಬಳಿಯ ಎಟಿಎಂಗೆ ಹಣ ಹಾಕಲೆಂದು GJ 01 HT 9173 ಸಂಖ್ಯೆ ವಾಹನ ಹಣ ತುಂಬಿಕೊಂಡು ತೆರಳುತ್ತಿತ್ತು. ಈ ವೇಳೆ ಜಯದೇವ ಡೈರಿ ಸರ್ಕಲ್ನಲ್ಲಿ ಇನ್ನೋವಾದಲ್ಲಿ ಬಂದ 6-7 ಜನರ ಗ್ಯಾಂಗ್, ಎಟಿಎಂ ವಾಹನ ತಡೆದು ನಾವು ಆರ್ಬಿಐನವರು ಎಂದು ಹೇಳಿ ಹೆದರಿಸಿದ್ದಾರೆ. ಗನ್ಮ್ಯಾನ್ ಸೇರಿದಂತೆ ಉಳಿದವರನ್ನೆಲ್ಲ ಅಲ್ಲೇ ಇಳಿಸಿ ವಾಹನ ಸಮೇತ ಚಾಲಕನನ್ನ ಡೈರಿ ಸರ್ಕಲ್ಗೆ ಕರೆದೊಯ್ದಿದ್ದಾರೆ. ಬಳಿಕ ಡೇರಿ ಸರ್ಕಲ್ ಫ್ಲೈಓವರ್ ಮೇಲೆ ನಿಲ್ಲಿಸಿ ವಾಹನದಲ್ಲಿದ್ದ ಹಣವನ್ನು ಇನ್ನೋವಾ ಕಾರಿಗೆ ತುಂಬಿಕೊಂಡು ಪರಾರಿಯಾಗಿದ್ದಾರೆ. ಸದ್ಯ ಸ್ಥಳಕ್ಕೆ ಸುದ್ದಗುಂಟೆಪಾಳ್ಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಎಟಿಎಂ ವಾಹನದಲ್ಲಿ ಒಟ್ಟು 4 ಜನ ಸಿಎಂಎಸ್ ಸಿಬ್ಬಂದಿ ಇದ್ದರು. ಓರ್ವ ಡ್ರೈವರ್, ಇಬ್ಬರು ಗನ್ ಮ್ಯಾನ್ ಹಾಗೂ ಮತ್ತೊಬ್ಬ ಹಣ ಹಾಕುವ ಸಿಬ್ಬಂದಿ ಇದ್ದು, ಸದ್ಯ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಇವರ ವಿಚಾರಣೆ ನಡೆಯುತ್ತಿದೆ.
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…
ಕರಾವಳಿ-ಮುಂಬೈ ಪ್ರಯಾಣಿಕರಿಗೆ ಸಿಹಿ ಸುದ್ದಿ.. ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! ಮಂಗಳೂರು: ಮಂಗಳೂರಿನಿಂದ ವಸಾಯ್ ರೋಡ್…
ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್ ವಾಹನ ಡಿಕ್ಕಿ : ಐವರು ದುರ್ಮರಣ ಕೊಪ್ಪಳ: ಗೂಡ್ಸ್ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ…