ಬೆಂಗಳೂರು : ರಾಜ್ಯ ರಾಜಧಾನಿಯಲ್ಲಿ ಕೊರೋನಾ ವೈರಸ್ ಪತ್ತೆಯಾಗಿದೆ ಎಂದು ಕೆಲವು ಸುದ್ದಿ ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿ ಹರಡುತ್ತಿದ್ದು, ಇವು ಸತ್ಯಕ್ಕೆ ದೂರವಾದ ಮಾತು ಎಂದು ಆರೋಗ್ಯ ಸಚಿವ ಬಿ ಶ್ರೀರಾಮುಲು ಟ್ವಿಟ್ ಮೂಲಕ ಸ್ಪಷ್ಟಪಡಿಸಿದ್ದಾರೆ.
ವಿಶ್ವದೆಲ್ಲೆಡೆ ಭೀತಿ ಹುಟ್ಟಿಸಿರುವ ಮಾರಣಾಂತಿಕ ಕೊರೋನಾ ವೈರಸ್ ಭಾರತದಲ್ಲೂ ಅನೇಕ ಕಡೆಗಳಲ್ಲಿ ಭಯದ ವಾತಾವರಣ ಉಂಟು ಮಾಡಿದೆ. ಈ ನಡುವೆ ಬೆಂಗಳೂರಿನಲ್ಲಿ ಈ ವೈರಸ್ ಪತ್ತೆಯಾಗಿದೆ ಎಂಬಂತಹ ಸುದ್ದಿಗಳು ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿತ್ತು. ಪರಿಣಾಮ ಸಾರ್ವಜನಿಕರು ಆತಂಕಕ್ಕೆ ಒಳಗಾಗಿದ್ದರು. ಆದರೆ, ಈ ಕುರಿತು ಶ್ರೀರಾಮುಲು ಇಂದು ಟ್ವಟರ್ ಮೂಲಕ ಸ್ಪಷ್ಟನೆ ನೀಡಿದ್ದಾರೆ.
“ಬೆಂಗಳೂರಿನಲ್ಲಿ ಕೋವಿಡ್ 19 ಅಥವಾ ಕೊರೋನಾ ವೈರಸ್ ಪತ್ತೆಯಾಗಿದೆ ಎಂದು ಕೆಲವೊಂದು ಮಾಧ್ಯಮ ಹಾಗೂ ಸಾಮಾಜಿಕ ತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿ ಸತ್ಯಕ್ಕೆ ದೂರವಾದದ್ದು. ಕರ್ನಾಟಕ ಸರ್ಕಾರ ಹಾಗೂ ಆರೋಗ್ಯ ಇಲಾಖೆಯು ವೈರಸ್ ಹರಡದಂತೆ ಎಲ್ಲಾ ರೀತಿಯ ಸಮರ್ಪಕ ಕ್ರಮಗಳನ್ನು ಕೈಗೊಂಡಿದೆ. ನಾಗರೀಕರು ಯಾವುದೇ ಆತಂಕಕ್ಕೆ ಒಳಗಾಗಬಾರದು” ಎಂದು ತಿಳಿಸಿದ್ದಾರೆ.
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…
ಎಂಆರ್‌ಪಿಎಲ್ ಸ್ಫೋಟ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರ : ಭರತ್ ಶೆಟ್ಟಿ ಆಗ್ರಹ ಮಂಗಳೂರು: ಸ್ಫೋಟದ ನಿಖರ ಕಾರಣ…
ಮಡ್‌ಗಾಂವ್ - ಮಂಗಳೂರು 'ವಂದೇ ಭಾರತ್' ರೈಲು ಬೆಂಗಳೂರಿಗೆ ವಿಸ್ತರಣೆ ಮಂಗಳೂರು/ಉಡುಪಿ: ಈ ಹಿಂದೆ ಮಂಗಳೂರು ಸೆಂಟ್ರಲ್-ಮಡ್‌ಗಾಂವ್ ನಡುವೆ ಓಡುತ್ತಿದ್ದ…
ಅಕ್ಟೋಬರ್ 11ರಿಂದ 20ರ ವರೆಗೆ KSRTC ಯಿಂದ ವಿಶೇಷ ಪ್ಯಾಕೇಜ್ ಪ್ರವಾಸ ಉಡುಪಿ: ಕ.ರಾ.ರ.ಸಾ.ನಿಗಮ ಮಂಗಳೂರು ವಿಭಾಗವು ದಸರಾ ಪ್ರಯುಕ್ತ…
ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ 62 ರೂ. ಏರಿಕೆ ನವದೆಹಲಿ: ಹಬ್ಬದ ಹೊಸ್ತಿಲಲ್ಲೇ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಗಣನೀಯ…