Featured

ಬೆಂಗಳೂರಿನಲ್ಲಿ ಮನೆ ಬಾಡಿಗೆ, ಲೀಸ್‌ ಪಡೆಯುವ ಮುನ್ನ ಎಚ್ಚರ : ಬಾಡಿಗೆದಾರರ ಬಳಿಯೇ ಹಣ ಪಡೆದು ವಂಚನೆ – vishwanews24

ಬೆಂಗಳೂರಿನಲ್ಲಿ ಮನೆ ಬಾಡಿಗೆ, ಲೀಸ್‌ ಪಡೆಯುವ ಮುನ್ನ ಎಚ್ಚರ ..

50ಕ್ಕೂ ಹೆಚ್ಚು ಮಂದಿಗೆ ಕೋಟ್ಯಂತರ ರೂ. ವಂಚನೆ..

ಸಿಸಿಬಿಯಿಂದ ಓರ್ವ ಅರೆಸ್ಟ್‌, ಓರ್ವ ಪರಾರಿ..

ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ  ಮನೆ ಬಾಡಿಗೆ ಮತ್ತು ಲೀಸ್ ಪಡೆಯಲು ಹುಡುಕಾಡುತ್ತಿದ್ದೀರಾ? ಹಾಗಾದರೆ ಬಹಳಷ್ಟು ಎಚ್ಚರವಾಗಿರಿ. ಮನೆ ಮಾಲೀಕನ ಬಳಿ ಬಾಡಿಗೆ ಎಂದು ಹೇಳಿ ಬಾಡಿಗೆದಾರರ ಬಳಿ ಲೀಸ್‌ಗೆ ಹಣ ಪಡೆದು ವಂಚನೆ ಎಸಗಿದ ಪ್ರಕರಣಗಳು ಈಗ ಬೆಳಕಿಗೆ ಬಂದಿದೆ.

ಕೋಟ್ಯಂತರ ರೂ. ವಂಚನೆ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿಯಲ್ಲಿ (CCB) ಎಫ್‌ಐಆರ್ ದಾಖಲಾಗಿದೆ. ಪೊಲೀಸರು ಒಬ್ಬನನ್ನು ಬಂಧಿಸಿದ್ದು ಮತ್ತೊಬ್ಬ ಪರಾರಿಯಾಗಿದ್ದಾನೆ.

ಆರೋಪಿಯಾದ ಖಲೀಲ್ ಷರೀಫ್ ಬಂಧನವಾಗಿದ್ದರೆ ಸೈಯದ್ ಅಹಮದ್ ಪರಾರಿಯಾಗಿದ್ದಾನೆ. ಮಾಧ್ಯಮಗಳಲ್ಲಿ ಈ ಸುದ್ದಿ ಪ್ರಕಟವಾದ ಬೆನ್ನಲ್ಲೇ ಸುಮಾರು 50ಕ್ಕೂ ಹೆಚ್ಚು ಮಂದಿ ಈಗ ಸಿಸಿಬಿ ಆಗಮಿಸಿ ತಮಗೂ ವಂಚನೆಯಾಗಿದೆ ಎಂದು ದೂರು ನೀಡುತ್ತಿದ್ದಾರೆ.

ವಂಚನೆ ಹೇಗೆ?
ಬೆಂಗಳೂರಿಗೆ ಬೇರೆ ಬೇರೆ ಕಡೆಯಿಂದ ಬರುವವರು ಸೇರಿದಂತೆ ಜನ ಮನೆ ಬಾಡಿಗೆ ಮತ್ತು ಲೀಸ್‌ಗೆ ಮನೆ ಬೇಕಾಗಿದೆ ಎಂದು ಒಎಲ್‌ಎಕ್ಸ್ , ನೋ ಬ್ರೋಕರ್ ಸೇರಿದಂತೆ ಹಲವು ಆಪ್‌ಗಳಲ್ಲಿ ಹುಡುಕಾಟ ನಡೆಸುವುದು ಸಾಮಾನ್ಯ.

ಈ ರೀತಿ ಹುಡುಕಾಟ ನಡೆಸುವವರನ್ನೇ ಖಲೀಲ್ ಷರೀಫ್ ಮತ್ತು ಸೈಯದ್ ಅಹಮದ್ ಸಂಪರ್ಕಿಸುತ್ತಿದ್ದರು. ತಮ್ಮ ಅಕ್ರಮ ವ್ಯವಹಾರಕ್ಕೆ ಟ್ಯಾಂಜನೈಟ್ ರಿಯಾಲಿಟಿ ಇಂಡಿಯ ಪ್ರೈವೇಟ್‌ ಲಿಮಿಟೆಡ್ ಕಂಪನಿಯನ್ನು ಸಹ ಸ್ಥಾಪಿಸಿದ್ದರು. ಜನರನ್ನು ಸಂರ್ಪಕಿಸುತ್ತಿದ್ದ ಇವರು ಮನೆ ಬಾಡಿಗೆ ಬೇಕಾ? ಲೀಸ್‌ಗೆ ಬೇಕಾ? ನೀವು ಕೇಳಿದ ಜಾಗದಲ್ಲೇ ಕಡಿಮೆ ಬೆಲೆಗೆ ಮನೆ ಕೊಡಿಸುತ್ತೇವೆ ಎಂದು ಹೇಳಿ ನಂಬಿಸುತ್ತಿದ್ದರು.

ಮನೆಯನ್ನು ತೋರಿಸುತ್ತಿದ್ದ ಈ ವಂಚಕರು ಮೂಲ ಮನೆ ಮಾಲೀಕರ ಬಳಿ ಬಾಡಿಗೆಗೆ ಎಂದು ಮಾತಾಡುತ್ತಿದ್ದರು. ಆದರೆ ಬಾಡಿಗೆದಾರರ ಬಳಿ, ಈ ಮನೆ ನಮ್ಮದು ನಾವು ಲೀಸ್‌ಗೆ ಬಿಡುತ್ತಿದ್ದೇವೆ ಎಂದು ಹೇಳಿ 5 ಲಕ್ಷದಿಂದ 30 ಲಕ್ಷ ರೂ.ವರೆಗೆ ಹಣ ಪಡೆದು ನಕಲಿ ದಾಖಲೆ ನೀಡುತ್ತಿದ್ದರು.

ಒಂದು ತಿಂಗಳು, ಎರಡು ತಿಂಗಳು ಬಾಡಿಗೆ ಹಣ ಬಾರದೇ ಇದ್ದಾಗ ಮೂಲ ಮಾಲೀಕ ಬಾಡಿಗೆ ಹಣಕ್ಕಾಗಿ ಮನೆ ಹತ್ತಿರ ಬರುತ್ತಿದ್ದ. ಮಾಲೀಕ ಮನೆ ಹತ್ತಿರ ಬಂದಾಗಲೇ ಬಾಡಿಗೆಯಲ್ಲಿದ್ದ ಕುಟುಂಬಕ್ಕೆ ನಾವು ಮೋಸ ಹೋಗಿರುವ ವಿಚಾರ ಗೊತ್ತಾಗುತ್ತದೆ.

ಈ ವೇಳೆ ಮಧ್ಯವರ್ತಿಗಳಾದ ಖಲೀಲ್ ಷರೀಫ್ ಮತ್ತು ಸೈಯದ್ ಅಹಮದ್ ಅವರನ್ನು ಸಂಪರ್ಕಿಸಿದರೆ ಅವರಿಂದ ಯಾವುದೇ ಪ್ರತಿಕ್ರಿಯೆ ಬರುತ್ತಿರಲಿಲ್ಲ. ಇವರಿಬ್ಬರೂ ರಾಮಮೂರ್ತಿ ನಗರ, ರಾಜಾನುಗುಂಟೆ, ದೇವನಹಳ್ಳಿ, ಕೊತ್ತನೂರು, ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಐವತ್ತಕ್ಕೂ ಹೆಚ್ಚು ಜನರಿಗೆ ಕೋಟ್ಯಂತರ ರೂ. ವಂಚನೆ ಮಾಡಿರುವುದು ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಹಲವು ಕಡೆ ಪ್ರಕರಣ ದಾಖಲಾಗುತ್ತಿದ್ದಂತೆ ಈಗ ಈ ಎಲ್ಲಾ ದೂರುಗಳು ಸಿಸಿಬಿಗೆ ವರ್ಗಾವಣೆಯಾಗಿದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago