Featured

ಬೆಂಗಳೂರಿನ ಚರ್ಚ್ ಸ್ಟ್ರೀಟ್‌ನಲ್ಲಿ ಚಲನಚಿತ್ರ ಚಿತ್ರೀಕರಣಕ್ಕೆ ನಿರ್ಬಂಧ – Vishwanews24

ಬೆಂಗಳೂರಿನ ಚರ್ಚ್ ಸ್ಟ್ರೀಟ್‌ನಲ್ಲಿ ಚಲನಚಿತ್ರ ಚಿತ್ರೀಕರಣಕ್ಕೆ ನಿರ್ಬಂಧ

ಬೆಂಗಳೂರು,: ಸಂಚಾರ ದಟ್ಟಣೆ ಕಾರಣ ನೀಡಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ  ಜನನಿಬಿಡ ಚರ್ಚ್ ಸ್ಟ್ರೀಟ್‌ನಲ್ಲಿ  ಚಲನಚಿತ್ರ ಚಿತ್ರೀಕರಣಕ್ಕೆ ನಿರ್ಬಂಧ ಹೇರಿದೆ.

ವಿಶೇಷವಾಗಿ ವಾರಾಂತ್ಯದಲ್ಲಿ ಪಾರ್ಟಿಗೆ ಹೋಗುವವರಿಗೆ ಮತ್ತು ಖರೀದಿದಾರರಿಗೆ ಚರ್ಚ್ ಸ್ಟ್ರೀಟ್ ಬೆಂಗಳೂರಿನ  ಪ್ರಮುಖ ಆಕರ್ಷಣೆಯಾಗಿದೆ. ಕಳೆದ ಭಾನುವಾರ ಚರ್ಚ ಸ್ಟ್ರೀಟ್​​​ನಲ್ಲಿ ಸಿನಿಮಾ ಚಿತ್ರೀಕರಣ  ನಡೆಯುತ್ತಿದ್ದುದನ್ನು ಗಮನಿಸಿದ ಬಿಬಿಎಂಪಿ ಈ ಆದೇಶ ಹೊರಡಿಸಿದೆ. ಸೂಕ್ತ ಅನುಮತಿ ಪಡೆಯದೆ ಸಿನಿಮಾ ಚಿತ್ರೀಕರಣ ನಡೆಸಲಾಗುತ್ತಿದೆ ಎಂದು ಆರೋಪಿಸಲಾಗಿದೆ.

ಆದರೆ ನಾವು ಪೊಲೀಸರಿಂದ ಅನುಮತಿ ಪಡೆದಿದ್ದೇವೆ ಎಂದು ಮಲಯಾಳಂ ಚಿತ್ರದ ಸಿಬ್ಬಂದಿಯೊಬ್ಬರು ಹೇಳಿದರು. ಈ ಬಗ್ಗೆ ಕೇಂದ್ರೀಯ ಡಿಸಿಪಿ ಶೇಖರ್ ಎಚ್.ತೆಕ್ಕನವರ್ ಮಾತನಾಡಿ, ನಾವು ಸಿನಿಮಾ ಶೂಟಿಂಗ್‌ಗೆ ಅನುಮತಿ ನೀಡಿಲ್ಲ. ಬಹುತೇಕ ಅವರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಿಂದ ತೆಗೆದುಕೊಂಡಿರಬಹುದು ಎಂದು ಹೇಳಿದ್ದಾರೆ.

ಕೆಎಫ್‌ಸಿಸಿ ಅಧ್ಯಕ್ಷ ಎನ್.ಎಂ.ಸುರೇಶ್ ಮಾತನಾಡಿ ನಾವು ಯಾವುದೇ ಅನುಮತಿ ನೀಡಿಲ್ಲ ಮತ್ತು ಅನುಮತಿ ನೀಡಲು ನಮಗೆ ಯಾವುದೇ ಅಧಿಕಾರವಿಲ್ಲ ಎಂದು ಸ್ಪಷ್ಟಪಡಿಸಿದರು. ಸಿನಿಮಾ ಚಿತ್ರೀಕರಣದಿಂದ ಒಂದು ಗಂಟೆಗೂ ಹೆಚ್ಚು ಕಾಲ ಸಂಚಾರ ದಟ್ಟಣೆ ಉಂಟಾಗಿತ್ತು.ಪಾದಚಾರಿ ಮಾರ್ಗದಲ್ಲಿ ಶೂಟಿಂಗ್ ಮಾಡುತ್ತಿದ್ದರೂ, ನೂರಾರು ಜನರು ವೀಕ್ಷಿಸಲು ನಿಂತಿದ್ದರು. ನಾವು ಪ್ರಶ್ನಿಸಿದಾಗ ಅವರು ಅನುಮತಿಯನ್ನು ಪಡೆದಿದ್ದೇವೆ ಎಂದರು

ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಮಾತನಾಡಿ, ಚರ್ಚ್ ಸ್ಟ್ರೀಟ್‌ನಲ್ಲಿ ಚಲನಚಿತ್ರಗಳ ಚಿತ್ರೀಕರಣವನ್ನು ನಿರ್ಬಂಧಿಸಲಾಗಿದೆ. ಮತ್ತು ಚಿತ್ರೀಕರಣಕ್ಕೆ ಪೊಲೀಸರು ಅಥವಾ ಕೆಎಫ್‌ಸಿಸಿ ಅನುಮತಿ ನೀಡಲು ಸಾಧ್ಯವಿಲ್ಲ. ಅದೊಂದು ಜನನಿಬಿಡ ರಸ್ತೆ. ಸಿನಿಮಾ ಚಿತ್ರೀಕರಣ ಸಂಚಾರಕ್ಕೆ ಅಡ್ಡಿಯಾಗಲಿದೆ. ಹೀಗಾಗಿ ಚಿತ್ರೀಕರಣಕ್ಕೆ ಬಿಬಿಎಂಪಿ ನಿರ್ಬಂಧಿಸಿದೆ ಎಂದರು.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

3 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

3 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

4 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

4 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

4 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

5 hours ago