ಬೆಂಗಳೂರು: ನಂದಿನಿ ಬ್ರ್ಯಾಂಡ್ ಹೆಸರಲ್ಲಿ ನಕಲಿ ತುಪ್ಪ ಮಾರಾಟ ಬೃಹತ್ ಜಾಲವೊಂದು ನಗರದಲ್ಲಿ ಪತ್ತೆ ಆಗಿದೆ. ಸಿಸಿಬಿ ಪೊಲೀಸರು ಮತ್ತು ಕೆಎಂಎಫ್ ಜಾಗೃತ ದಳ ಜಂಟಿ ಕಾರ್ಯಾಚರಣೆ ನಡೆಸಿ ಬೃಹತ್ ಜಾಲ ಪತ್ತೆ ಮಾಡಿದ್ದು, ಕೆಎಂಎಫ್ ವಿತರಕ ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ. ಮಹೇಂದ್ರ, ದೀಪಕ್, ಮುನಿರಾಜು, ಅಭಿ ಅರಸು ಬಂಧಿತರು. ಒಟ್ಟು 1.26 ಕೋಟಿ ರೂ. ಮೌಲ್ಯದ ವಸ್ತುವನ್ನು ಬಂಧಿತರಿಂದ ಜಪ್ತಿ ಮಾಡಲಾಗಿದೆ.
ಬೆಂಗಳೂರಿನಿಂದ ತಮಿಳುನಾಡಿಗೆ ಶುದ್ಧ ನಂದಿನಿ ತುಪ್ಪ ಪೂರೈಕೆ ಮಾಡುತ್ತಿದ್ದರು. ಕೆಎಂಎಫ್ ಡಿಸ್ಟ್ರಿಬ್ಯೂಟರ್ ಮಹೇಂದ್ರ ಒರಿಜಿನಲ್ ತುಪ್ಪ ಖರೀದಿಸುತ್ತಿದ್ದರು. ಇಲ್ಲಿ ಖರೀದಿಸಿದ ಒರಿಜಿನಲ್ ತುಪ್ಪ ತಮಿಳುನಾಡಿಗೆ ಕಳುಹಿಸುತ್ತಿದ್ದರು. ಅದನ್ನ ತಮಿಳುನಾಡಿನಲ್ಲಿ ಕಲಬೆರಕೆ ಮಾಡುತ್ತಿದ್ದರು. ಒಂದು ಲೀಟರ್ ತುಪ್ಪಕ್ಕೆ 4 ಲೀಟರ್ ನಕಲಿ ತುಪ್ಪ ಬೆರೆಸುತ್ತಿದ್ದರು. ಫಾರ್ಮ್ ಆಯಿಲ್, ತೆಂಗಿನ ಎಣ್ಣೆ ಮತ್ತು ಡಾಲ್ಡಾ ಬೆರೆಸುತ್ತಿದ್ದರು. ಅದನ್ನ ಮತ್ತೆ ಕರ್ನಾಟಕಕ್ಕೆ ತಂದು ಮಾರಾಟ ಮಾಡುತ್ತಿದ್ದರು.
ನಿನ್ನೆ ಚಾಮರಾಜಪೇಟೆಯ ನಂಜಾಂಬ ಅಗ್ರಹಾರದಲ್ಲಿರುವ ಕೃಷ್ಣ ಎಂಟರ್ಪ್ರೈಸಸ್ ಮಾಲೀಕರಿಗೆ ಸೇರಿದ ಗೋಡೌನ್ ಹಾಗೂ ಅಂಗಡಿಗಳ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ದಾಳಿ ವೇಳೆ ಒಟ್ಟು 8,136 ಲೀಟರ್ ಕಲಬೆರಕೆ ತುಪ್ಪ, 4 ವಾಹನ, ತೆಂಗು ಹಾಗೂ ಫಾಮ್ ಆಯಿಲ್, ನಕಲಿ ತುಪ್ಪ ತಯಾರು ಮಾಡುವ ಯಂತ್ರಗಳು ಸೇರಿ 1 ಕೋಟಿ 26 ಲಕ್ಷದ 95 ಸಾವಿರ ರೂ. ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…