Featured

ಬೆಂಗಳೂರು: ಅಕ್ರಮ ಬಾಂಗ್ಲಾ ವಲಸಿಗರಿಗೆ ನಕಲಿ ಆಧಾರ್ ಕಾರ್ಡ್‌ ಮಾಡಿಕೊಡುತ್ತಿದ್ದ ಆರೋಪಿ ಬಂಧನ – vishwanews24

ಬೆಂಗಳೂರು: ಅಕ್ರಮ ಬಾಂಗ್ಲಾ ವಲಸಿಗರಿಗೆ ನಕಲಿ ಆಧಾರ್ ಕಾರ್ಡ್‌ ಮಾಡಿಕೊಡುತ್ತಿದ್ದ ಆರೋಪಿ ಬಂಧನ

ಬೆಂಗಳೂರು : ಬಾಂಗ್ಲಾದೇಶದಿಂದ  ಅಕ್ರಮವಾಗಿ ಭಾರತದೊಳಗೆ ನುಸುಳಿ ಬಂದಿದ್ದವರಿಗೆ ನಕಲಿ ಗರುತಿನ ಚೀಟಿ  ಮಾಡಿಕೊಡುತ್ತಿದ್ದ ಆರೋಪಿಯನ್ನು ಸೂರ್ಯಸಿಟಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅರ್ನಾಬ್ ಮಂಡಲ್ ಬಂಧಿತ ಆರೋಪಿ. ಆರೋಪಿ ಅರ್ನಾಬ್ ಮಂಡಲ್ ಮೂಲತಃ ಪಶ್ಚಿಮ ಬಂಗಾಳದವನು. ಈ ಬೆಂಗಳೂರು ಹೊರವಲಯದ ಸೂರ್ಯಸಿಟಿ ಬಳಿ ಸೈಬರ್​ ಸೆಂಟರ್ ತೆರೆದಿದ್ದನು.

ಕರ್ನಾಟಕ ಪೊಲೀಸರು ರಾಜ್ಯದಲ್ಲಿ ಅಕ್ರಮವಾಗಿ ನೆಲಸಿರುವ ಬಾಂಗ್ಲಾದೇಶ ಪ್ರಜೆಗಳ ಬೆನ್ನಬಿದ್ದಿದ್ದಾರೆ. ಈಗಾಗಲೆ ಅನೇಕರ ಹೆಡೆಮುರಿ ಕಟ್ಟುತ್ತಿದ್ದಾರೆ. ಈ ಎಲ್ಲ ಬಾಂಗ್ಲಾದೇಶ ಪ್ರಜೆಗಳ ಬಳಿ ಭಾರತದ ನಕಲಿ ಗುರುತಿನ ಚೀಟಿಗಳು ಪತ್ತೆಯಾಗಿದ್ದವು. ಮತ್ತು ಈ ಎಲ್ಲ ನಕಲಿ ಗುರುತಿನ ಚೀಟಿಗಳು ಪಶ್ಚಿಮ ಬಂಗಾಳ ವಿಳಾಸದ್ದಾಗಿವೆ.

ಈ ಬಗ್ಗೆ ಪೊಲೀಸರಿಗೆ ಅನುಮಾನ ವ್ಯಕ್ತವಾಗಿ, ತನಿಖೆ ಆರಂಭಿಸಿದಾಗ, ಆರೋಪಿ ಅರ್ನಾಬ್​ ಮಂಡಲ್​ ಸೈಬರ್​ ಸೆಂಟರ್​ನಲ್ಲಿ ನಡೆಯುತ್ತಿರುವ ಅಕ್ರಮ ದಂಧೆ ಬಗ್ಗೆ ತಿಳಿದಿದೆ. ಖಚಿತ ಮಾಹಿತಿ ಪಡೆದುಕೊಂಡ ಪೊಲೀಸರು ಗುರುವಾರ ಸೈಬರ್​ ಸೆಂಟರ್​ ಮೇಲೆ ದಾಳಿ ಮಾಡಿದ್ದಾರೆ. ದಾಳಿ ವೇಳೆ ಸಾಕಷ್ಟು ನಕಲಿ ಆಧಾರ್​ ಕಾರ್ಡ್​ ಪತ್ತೆಯಾಗಿವೆ. ಹಾಗೆಯೇ 18 ಮನೆಗಳ ಬಾಡಿಗೆ ಅಗ್ರಿಮೆಂಟ್​​ ಪತ್ತೆಯಾಗಿವೆ.

ಆರೋಪಿಯನ್ನು ವಿಚಾರಣೆಗೆ ಒಳಪಡಿಸಿದಾಗ ಅರ್ನಾಬ್ ಮಂಡಲ್​ 8 ಸಾವಿರ ರೂ.ಗೆ ನಕಲಿ ಗುರುತಿನ ಚೀಟಿಗಳನ್ನು ಮಾಡಿಕೊಡುತ್ತಿರುವುದಾಗಿ ಬಾಯಿಬಿಟ್ಟಿದ್ದಾನೆ.

ಈ ಬಗ್ಗೆ ಬೆಂಗಳೂರು ಗ್ರಾಮಾಂತರ ಎಸ್​ಪಿ ಸಿ.ಕೆ.ಬಾಬಾ ಮಾತನಾಡಿ, ಬಾಂಗ್ಲಾ ಪ್ರಜೆಗಳಿಗೆ ಭಾರತದ ನಕಲಿ ಆಧಾರ್​​​, ಐಡಿ ಕಾರ್ಡ್​ ಮಾಡಿಕೊಡ್ತಿದ್ದನು. ಕಳೆದ ಒಂದು ವರ್ಷದಿಂದ ಇದೇ ರೀತಿ ನಕಲಿ ದಾಖಲೆ ಸೃಷ್ಟಿಸಿ ಕೊಡುತ್ತಿದ್ದನು. ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿ ಆರೋಪಿಯನ್ನು ಬಂಧಿಸಲಾಗಿದೆ. ಪೊಲೀಸರ ದಾಳಿ ವೇಳೆ ನಕಲಿ ದಾಖಲಾತಿಗಳನ್ನು ಜಪ್ತಿ ಮಾಡಲಾಗಿದೆ ಎಂದು ತಿಳಿಸಿದರು.

18 ಮನೆಗೆ ಸಂಬಂಧಿಸಿದ ಲೀಸ್ ಅಗ್ರಿಮೆಂಟ್,​ 55 ಆಧಾರ್​ ಕಾರ್ಡ್, 40 ಬ್ಯಾಂಕ್ ದಾಖಲಾತಿ, 2 ಕಂಪ್ಯೂಟರ್, 2 ಮೊಬೈಲ್ ಜಪ್ತಿ ಮಾಡಲಾಗಿದೆ. ಒಂದು ಕಾರ್ಡ್​ ಮಾಡಿಕೊಡಲು 8 ಸಾವಿರದಿಂದ 10 ಸಾವಿರ ರೂ. ಪಡೆಯುತ್ತಿದ್ದನು. ನಕಲಿ ಐಡಿ ಕಾರ್ಡ್​ಗಳ ದಂಧೆಯಲ್ಲಿ ಇನ್ನೂ ಹಲವರು ಶಾಮೀಲಾಗಿದ್ದಾರೆ. ನಕಲಿ ಐಡಿ ಕಾರ್ಡ್​ಗಳ ದಂಧೆ ಬಗ್ಗೆ ತನಿಖೆ ನಡೆಯುತ್ತಿದೆ ಎಂದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago