ಬೆಂಗಳೂರು : ಬಾಂಗ್ಲಾದೇಶದಿಂದ ಅಕ್ರಮವಾಗಿ ಭಾರತದೊಳಗೆ ನುಸುಳಿ ಬಂದಿದ್ದವರಿಗೆ ನಕಲಿ ಗರುತಿನ ಚೀಟಿ ಮಾಡಿಕೊಡುತ್ತಿದ್ದ ಆರೋಪಿಯನ್ನು ಸೂರ್ಯಸಿಟಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅರ್ನಾಬ್ ಮಂಡಲ್ ಬಂಧಿತ ಆರೋಪಿ. ಆರೋಪಿ ಅರ್ನಾಬ್ ಮಂಡಲ್ ಮೂಲತಃ ಪಶ್ಚಿಮ ಬಂಗಾಳದವನು. ಈ ಬೆಂಗಳೂರು ಹೊರವಲಯದ ಸೂರ್ಯಸಿಟಿ ಬಳಿ ಸೈಬರ್ ಸೆಂಟರ್ ತೆರೆದಿದ್ದನು.
ಕರ್ನಾಟಕ ಪೊಲೀಸರು ರಾಜ್ಯದಲ್ಲಿ ಅಕ್ರಮವಾಗಿ ನೆಲಸಿರುವ ಬಾಂಗ್ಲಾದೇಶ ಪ್ರಜೆಗಳ ಬೆನ್ನಬಿದ್ದಿದ್ದಾರೆ. ಈಗಾಗಲೆ ಅನೇಕರ ಹೆಡೆಮುರಿ ಕಟ್ಟುತ್ತಿದ್ದಾರೆ. ಈ ಎಲ್ಲ ಬಾಂಗ್ಲಾದೇಶ ಪ್ರಜೆಗಳ ಬಳಿ ಭಾರತದ ನಕಲಿ ಗುರುತಿನ ಚೀಟಿಗಳು ಪತ್ತೆಯಾಗಿದ್ದವು. ಮತ್ತು ಈ ಎಲ್ಲ ನಕಲಿ ಗುರುತಿನ ಚೀಟಿಗಳು ಪಶ್ಚಿಮ ಬಂಗಾಳ ವಿಳಾಸದ್ದಾಗಿವೆ.
ಈ ಬಗ್ಗೆ ಪೊಲೀಸರಿಗೆ ಅನುಮಾನ ವ್ಯಕ್ತವಾಗಿ, ತನಿಖೆ ಆರಂಭಿಸಿದಾಗ, ಆರೋಪಿ ಅರ್ನಾಬ್ ಮಂಡಲ್ ಸೈಬರ್ ಸೆಂಟರ್ನಲ್ಲಿ ನಡೆಯುತ್ತಿರುವ ಅಕ್ರಮ ದಂಧೆ ಬಗ್ಗೆ ತಿಳಿದಿದೆ. ಖಚಿತ ಮಾಹಿತಿ ಪಡೆದುಕೊಂಡ ಪೊಲೀಸರು ಗುರುವಾರ ಸೈಬರ್ ಸೆಂಟರ್ ಮೇಲೆ ದಾಳಿ ಮಾಡಿದ್ದಾರೆ. ದಾಳಿ ವೇಳೆ ಸಾಕಷ್ಟು ನಕಲಿ ಆಧಾರ್ ಕಾರ್ಡ್ ಪತ್ತೆಯಾಗಿವೆ. ಹಾಗೆಯೇ 18 ಮನೆಗಳ ಬಾಡಿಗೆ ಅಗ್ರಿಮೆಂಟ್ ಪತ್ತೆಯಾಗಿವೆ.
ಆರೋಪಿಯನ್ನು ವಿಚಾರಣೆಗೆ ಒಳಪಡಿಸಿದಾಗ ಅರ್ನಾಬ್ ಮಂಡಲ್ 8 ಸಾವಿರ ರೂ.ಗೆ ನಕಲಿ ಗುರುತಿನ ಚೀಟಿಗಳನ್ನು ಮಾಡಿಕೊಡುತ್ತಿರುವುದಾಗಿ ಬಾಯಿಬಿಟ್ಟಿದ್ದಾನೆ.
ಈ ಬಗ್ಗೆ ಬೆಂಗಳೂರು ಗ್ರಾಮಾಂತರ ಎಸ್ಪಿ ಸಿ.ಕೆ.ಬಾಬಾ ಮಾತನಾಡಿ, ಬಾಂಗ್ಲಾ ಪ್ರಜೆಗಳಿಗೆ ಭಾರತದ ನಕಲಿ ಆಧಾರ್, ಐಡಿ ಕಾರ್ಡ್ ಮಾಡಿಕೊಡ್ತಿದ್ದನು. ಕಳೆದ ಒಂದು ವರ್ಷದಿಂದ ಇದೇ ರೀತಿ ನಕಲಿ ದಾಖಲೆ ಸೃಷ್ಟಿಸಿ ಕೊಡುತ್ತಿದ್ದನು. ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿ ಆರೋಪಿಯನ್ನು ಬಂಧಿಸಲಾಗಿದೆ. ಪೊಲೀಸರ ದಾಳಿ ವೇಳೆ ನಕಲಿ ದಾಖಲಾತಿಗಳನ್ನು ಜಪ್ತಿ ಮಾಡಲಾಗಿದೆ ಎಂದು ತಿಳಿಸಿದರು.
18 ಮನೆಗೆ ಸಂಬಂಧಿಸಿದ ಲೀಸ್ ಅಗ್ರಿಮೆಂಟ್, 55 ಆಧಾರ್ ಕಾರ್ಡ್, 40 ಬ್ಯಾಂಕ್ ದಾಖಲಾತಿ, 2 ಕಂಪ್ಯೂಟರ್, 2 ಮೊಬೈಲ್ ಜಪ್ತಿ ಮಾಡಲಾಗಿದೆ. ಒಂದು ಕಾರ್ಡ್ ಮಾಡಿಕೊಡಲು 8 ಸಾವಿರದಿಂದ 10 ಸಾವಿರ ರೂ. ಪಡೆಯುತ್ತಿದ್ದನು. ನಕಲಿ ಐಡಿ ಕಾರ್ಡ್ಗಳ ದಂಧೆಯಲ್ಲಿ ಇನ್ನೂ ಹಲವರು ಶಾಮೀಲಾಗಿದ್ದಾರೆ. ನಕಲಿ ಐಡಿ ಕಾರ್ಡ್ಗಳ ದಂಧೆ ಬಗ್ಗೆ ತನಿಖೆ ನಡೆಯುತ್ತಿದೆ ಎಂದರು.
ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ; ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್‌ನಿಂದ ಅಕಸ್ಮಾತ್ತಾಗಿ ಬೆಂಕಿ…
ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ…
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…