Featured

ಬೆಂಗಳೂರು: ಅಪಾರ್ಟ್ ಮೆಂಟ್ ನ 12ನೇ ಮಹಡಿಯಿಂದ ಬಿದ್ದು 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ..Vishwanews24

ಬೆಂಗಳೂರು: ಅಪಾರ್ಟ್ ಮೆಂಟ್ ನ 12ನೇ ಮಹಡಿಯಿಂದ ಬಿದ್ದು 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ..

ಬೆಂಗಳೂರು: ಹತ್ತನೇ ತರಗತಿ ವಿದ್ಯಾರ್ಥಿನಿಯೊಬ್ಬಳು 12ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ಸಂಭವಿಸಿದೆ. ಆತ್ಮಹತ್ಯೆ ಮಾಡಿಕೊಂಡ ಬಾಲಕಿಯನ್ನು ಜೆಸ್ಸಿಕಾ (14) ಎಂದು ಗುರುತಿಸಲಾಗಿದೆ.

ನಿನ್ನೆ ಬೆಳ್ಳಂದೂರಿನ ಕ್ಲಾಸಿಕ್ ಅಪಾರ್ಟ್‌ಮೆಂಟ್‌ನ 12ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.ಖಾಸಗಿ ಶಾಲೆಯಲ್ಲಿ 10ನೇ ತರಗತಿ ಓದುತ್ತಿದ್ದ ಜೆಸ್ಸಿಕಾ ಬೆಳಗ್ಗೆ ಶಾಲೆಗೆ ಹೋಗಿ ವಾಪಸ್ ಮನೆಗೆ ಬಂದಿದ್ದಾಳೆ. ಬೆಳಗ್ಗೆ 10.30ರ ಸುಮಾರಿಗೆ ಅಪಾರ್ಟ್‌ಮೆಂಟ್‌ಗೆ ಬಂದ ಜೆಸ್ಸಿಕಾ 12ನೇ ಮಹಡಿಯಿಂದ ಜಿಗಿದಿದ್ದಾಳೆ.

ಜೆಸ್ಸಿಕಾ ತಂದೆ ಸಾಫ್ಟ್‌ವೇರ್ ಎಂಜಿನಿಯರ್, ತಾಯಿ ಖಾಸಗಿ ಶಾಲೆಯಲ್ಲಿ ಟೀಚರ್ ಆಗಿದ್ದಾರೆ. ಈ ಕುಟುಂಬ ಕ್ಲಾಸಿಕ್‌ ಅಪಾರ್ಟ್‌ಮೆಂಟ್‌ನ 11ನೇ ಮಹಡಿಯಲ್ಲಿ ವಾಸವಾಗಿದೆ. ಬೆಳಗ್ಗೆ ಬಾಲಕಿ ಶಾಲೆಗೆ ಹೋಗಿ ವಾಪಸ್ ಬಂದಿರೋದು ಪೋಷಕರಿಗೆ ತಿಳಿದಿಲ್ಲ. ಆಕೆ ಆತ್ಮಹತ್ಯೆ ಮಾಡಿಕೊಂಡ ವೇಳೆ ಮನೆಯಲ್ಲಿ ಯಾರೂ ಇರಲಿಲ್ಲ. ಜೆಸ್ಸಿಕಾ ಕಳೆದ ಮೂರು ತಿಂಗಳಿಂದ ತರಗತಿಗಳಿಗೆ ಹಾಜರಾಗದೆ ಬೇಗ ಮನೆಗೆ ಮರಳುತ್ತಿದ್ದಳು.

ಈ ವಿಷಯವನ್ನು ಆಕೆಯ ಪೋಷಕರ ಗಮನಕ್ಕೆ ತರಲು ಪ್ರಯತ್ನಿಸಿದ್ದೇವೆ, ಆದರೆ ಅವರ ಫೋನ್ ರೀಚ್ ಆಗಿರಲಿಲ್ಲ. ಅಲ್ಲದೆ, ಆಕೆಯ ಶಾಲಾ ಶುಲ್ಕವನ್ನು ಪಾವತಿಸಿಲ್ಲ ಎಂದು ಶಾಲೆಯ ಅಧಿಕಾರಿಗಳು ತಿಳಿಸಿದ್ದಾರೆ. ಖಿನ್ನತೆಯಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದೆಂಬ ಶಂಕೆ ವ್ಯಕ್ತವಾಗಿದೆ.

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

6 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

7 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

7 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

8 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

8 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

9 hours ago