ಬೆಂಗಳೂರು : ಅಪ್ರಾಪ್ತ ವಯಸ್ಕರಿಗೆ ರಾಜ್ಯದ ಪಬ್, ಬಾರ್‌ಗಳಲ್ಲಿ ಪ್ರವೇಶ ನಿಷೇಧ : ಅಲೋಕ್ ಕುಮಾರ್ ಆದೇಶ – Vishwanews24
ಅಪ್ರಾಪ್ತ ವಯಸ್ಕರಿಗೆ ರಾಜ್ಯದ ಪಬ್, ಬಾರ್‌ಗಳಲ್ಲಿ ಪ್ರವೇಶ ನಿಷೇಧ : ಅಲೋಕ್ ಕುಮಾರ್ ಆದೇಶ
ಬೆಂಗಳೂರು: ರಾಜ್ಯದ ಪಬ್, ಬಾರ್‌ಗಳಲ್ಲಿ ಅಪ್ರಾಪ್ತ ವಯಸ್ಕರಿಗೆ ಪ್ರವೇಶ ನೀಡದಂತೆ ಕಟ್ಟುನಿಟ್ಟಿನ ಕ್ರಮ ಜರುಗಿಸಲು ರಾಜ್ಯ ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ಆದೇಶ ಹೊರಡಿಸಿದ್ದಾರೆ.
ಈ ಕುರಿತು ಜುಲೈ 26 ರಂದು ಬೆಂಗಳೂರು ನಗರ ಪೊಲೀಸ್ ಕಮಿಷನರೇಟ್ ಹೊರತುಪಡಿಸಿ ಎಲ್ಲಾ ಜಿಲ್ಲಾ ಎಸ್ಪಿಗಳಿಗೆ ಜ್ಞಾಪನಾ ಪತ್ರದ ಮೂಲಕ ಸೂಚನೆ ರವಾನಿಸಿದ್ದಾರೆ. ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಹಾಗೂ ಇತ್ತೀಚೆಗೆ ಅಪ್ರಾಪ್ತರು ಪಬ್, ಬಾರ್‌ಗಳಲ್ಲಿ ಮದ್ಯ ಸೇವನೆ ಕುರಿತ ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಈ ಆದೇಶ ಹೊರಡಿಸಲಾಗಿದೆ ಎಂದು ತಿಳಿದು ಬಂದಿದೆ.
ಈ ಕುರಿತು ಮಾತನಾಡಿದ ಎಡಿಜಿಪಿ ಅಲೋಕ್ ಕುಮಾರ್ ‘ರಾತ್ರಿ 10 ಗಂಟೆ ಬಳಿಕ ಪಬ್ ಸೇರಿದಂತೆ ನೈಟ್ ಪಾರ್ಟಿಗಳು, ಬರ್ತ್ ಡೇ ಪಾರ್ಟಿಗಳಲ್ಲಿ ಧ್ವನಿವರ್ಧಕ ಬಳಸಿ ಶಬ್ದಮಾಲಿನ್ಯ ಉಂಟು ಮಾಡುವಂತಿಲ್ಲ, ಒಂದು ವೇಳೆ ನಿಯಮ ಉಲ್ಲಂಘಿಸಿದರೆ ಕ್ರಮ ಕೈಗೊಳ್ಳಲಾಗುತ್ತದೆ. ಹೀಗಾಗಿ, ಈ ಕುರಿತು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ವರದಿ ಬಂದ ಬಳಿಕ ಮುಂದಿನ ಕ್ರಮಗಳ ಬಗ್ಗೆ ನಿರ್ಧರಿಸಲಾಗುವುದು’ ಎಂದು ತಿಳಿಸಿದರು.
