Featured

ಬೆಂಗಳೂರು : ಅಪ್ರಾಪ್ತ ವಯಸ್ಕರಿಗೆ ರಾಜ್ಯದ ಪಬ್‌, ಬಾರ್‌ಗಳಲ್ಲಿ ಪ್ರವೇಶ ನಿಷೇಧ : ಅಲೋಕ್‌ ಕುಮಾರ್‌ ಆದೇಶ – Vishwanews24

ಅಪ್ರಾಪ್ತ ವಯಸ್ಕರಿಗೆ ರಾಜ್ಯದ ಪಬ್‌, ಬಾರ್‌ಗಳಲ್ಲಿ ಪ್ರವೇಶ ನಿಷೇಧ : ಅಲೋಕ್‌ ಕುಮಾರ್‌ ಆದೇಶ

ಬೆಂಗಳೂರು: ರಾಜ್ಯದ ಪಬ್‌, ಬಾರ್‌ಗಳಲ್ಲಿ ಅಪ್ರಾಪ್ತ ವಯಸ್ಕರಿಗೆ ಪ್ರವೇಶ ನೀಡದಂತೆ ಕಟ್ಟುನಿಟ್ಟಿನ ಕ್ರಮ ಜರುಗಿಸಲು ರಾಜ್ಯ ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಅಲೋಕ್‌ ಕುಮಾರ್‌ ಆದೇಶ ಹೊರಡಿಸಿದ್ದಾರೆ.

ಈ ಕುರಿತು ಜುಲೈ 26 ರಂದು ಬೆಂಗಳೂರು ನಗರ ಪೊಲೀಸ್‌ ಕಮಿಷನರೇಟ್‌ ಹೊರತುಪಡಿಸಿ ಎಲ್ಲಾ ಜಿಲ್ಲಾ ಎಸ್ಪಿಗಳಿಗೆ ಜ್ಞಾಪನಾ ಪತ್ರದ ಮೂಲಕ ಸೂಚನೆ ರವಾನಿಸಿದ್ದಾರೆ. ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಹಾಗೂ ಇತ್ತೀಚೆಗೆ ಅಪ್ರಾಪ್ತರು ಪಬ್‌, ಬಾರ್‌ಗಳಲ್ಲಿ ಮದ್ಯ ಸೇವನೆ ಕುರಿತ ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಈ ಆದೇಶ ಹೊರಡಿಸಲಾಗಿದೆ ಎಂದು ತಿಳಿದು ಬಂದಿದೆ.

ಈ ಕುರಿತು ಮಾತನಾಡಿದ ಎಡಿಜಿಪಿ ಅಲೋಕ್‌ ಕುಮಾರ್‌ ‘ರಾತ್ರಿ 10 ಗಂಟೆ ಬಳಿಕ ಪಬ್‌ ಸೇರಿದಂತೆ ನೈಟ್‌ ಪಾರ್ಟಿಗಳು, ಬರ್ತ್‌ ಡೇ ಪಾರ್ಟಿಗಳಲ್ಲಿ ಧ್ವನಿವರ್ಧಕ ಬಳಸಿ ಶಬ್ದಮಾಲಿನ್ಯ ಉಂಟು ಮಾಡುವಂತಿಲ್ಲ, ಒಂದು ವೇಳೆ ನಿಯಮ ಉಲ್ಲಂಘಿಸಿದರೆ ಕ್ರಮ ಕೈಗೊಳ್ಳಲಾಗುತ್ತದೆ. ಹೀಗಾಗಿ, ಈ ಕುರಿತು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ವರದಿ ಬಂದ ಬಳಿಕ ಮುಂದಿನ ಕ್ರಮಗಳ ಬಗ್ಗೆ ನಿರ್ಧರಿಸಲಾಗುವುದು’ ಎಂದು ತಿಳಿಸಿದರು.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

8 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

8 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

9 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

9 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

9 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

1 day ago