ಬೆಂಗಳೂರು: ಪ್ರಮಾಣವಚನ ಸ್ವೀಕಾರ ಮಾಡಿ 10 ದಿನ ಕಳೆದರೂ ಸಚಿವ ಕೃಷ್ಣ ಬೈರೇಗೌಡ ಇನ್ನೂ ಬೆಂಗಳೂರು ಅಭಿವೃದ್ಧಿ ಖಾತೆ ಅಧಿಕಾರ ವಹಿಸಿಕೊಂಡಿಲ್ಲ. ಈ ಕುರಿತು ಪ್ರತಿಕ್ರಿಯಿಸಿದ ಅವರು, ಖಾತೆ ಜವಾಬ್ದಾರಿ ತೆಗೆದುಕೊಳ್ಳುವಾಗ ಕೆಲ ಸ್ಪಷ್ಟತೆ ಇರಬೇಕು ಎಂದಿದ್ದಾರೆ.
ಖಾತೆ ಅಧಿಕಾರ ವಹಿಸಿಕೊಳ್ಳದ ಬಗ್ಗೆ ‘ಪಬ್ಲಿಕ್ ಟಿವಿ’ ಜೊತೆ ಮಾತನಾಡಿದ ಅವರು, ಖಾತೆ ವಿಚಾರಕ್ಕೆ ಕೆಲವು ಸ್ಪಷ್ಟತೆ ಬೇಕಿದೆ. ಖಾತೆ ಜವಾಬ್ದಾರಿ ತೆಗೆದುಕೊಳ್ಳುವಾಗ ಕೆಲ ಸ್ಪಷ್ಟತೆ ಇರಬೇಕು. ಜವಾಬ್ದಾರಿಗೆ ಸರಿಯಾಗಿ ನಿರ್ವಹಣೆ ಮಾಡಿ ರಿಸಲ್ಟ್ ಕೊಡಬೇಕು. ಸಿಎಂ ಅವರಿಗೆ ಯಾವ ಸ್ಪಷ್ಟತೆ ಇರಬೇಕು ಎಂದು ಮನವರಿಕೆ ಮಾಡಿದ್ದೇನೆ. ಆದಷ್ಟು ಶೀಘ್ರವಾಗಿ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದು ಹೇಳಿದ್ದಾರೆ ಎಂದು ತಿಳಿಸಿದರು.
ಇದನ್ನೂ ಓದಿ:
ಕರ್ನಾಟಕದ ಕಠಿಣ ಜವಾಬ್ದಾರಿಗಳಲ್ಲಿ ಬೆಂಗಳೂರು ಖಾತೆ ಕೂಡ ಒಂದು. ಸಿಎಂ ಖಾತೆ ಬಗ್ಗೆ ಸ್ಪಷ್ಟತೆ ನೀಡಿದ ನಂತರ ನಾನು ಮುಂದುವರೆಯುತ್ತೇನೆ. ಅಧಿಕಾರ ಒಂದೇ ನೋಡೋದಲ್ಲ, ಮುಂದೆ ನಾನು ಉತ್ತರ ಕೊಡಬೇಕಾಗುತ್ತದೆ. ಸ್ಪಷ್ಟತೆ ಇಲ್ಲದೇ ಕೆಲಸ ಮಾಡಲು ಹೋದರೆ ತೊಂದರೆಯಾಗುತ್ತದೆ. ಸಿಎಂ ಒಂದೆರಡು ದಿನಗಳಲ್ಲಿ ನಿರ್ಧಾರ ತೆಗೆದುಕೊಳ್ಳುವ ಭರವಸೆ ನೀಡಿದ್ದಾರೆ. ಹೈಕಮಾಂಡ್ ನಾಯಕರ ಗಮನದಲ್ಲಿ ಈ ವಿಷಯ ಇದೆ. ಹೈಕಮಾಂಡ್ ಸಹ ಸಿಎಂ ಜೊತೆ ಸಮಾಲೋಚನೆ ಮಾಡಿದ್ದಾರೆ ಎಂದು ಹೇಳಿದರು.
ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…
ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…
ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…