Featured

ಬೆಂಗಳೂರು: ಇಡಿ ದಾಳಿಯಲ್ಲಿ ಬರೋಬ್ಬರಿ 11 ಕೋಟಿ ರೂ. ನಗದು, 120 ಕೋಟಿ ಮೌಲ್ಯದ ಚರ-ಸ್ಥಿರಾಸ್ತಿ ವಶ – Vishwanews24

ಬೆಂಗಳೂರು: ಇಡಿ ದಾಳಿಯಲ್ಲಿ ಬರೋಬ್ಬರಿ 11 ಕೋಟಿ ರೂ. ನಗದು, 120 ಕೋಟಿ ಮೌಲ್ಯದ ಚರ-ಸ್ಥಿರಾಸ್ತಿ ವಶ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪ ಸಂಬಂಧ ವಿಜಯ್ ತಾತ ಮತ್ತು ಸಹಚರರಿಗೆ ಸಂಬಂಧಿಸಿದ ಒಟ್ಟು ಎಂಟು ಸ್ಥಳಗಳಲ್ಲಿ ನಡೆದಿದ್ದ ದಾಳಿ  ಪ್ರಕರಣ ಸಂಬಂಧ ಎಕ್ಸ್​ ಖಾತೆಯಲ್ಲಿ ಮಾಹಿತಿ ಹಂಚಿಕೊಂಡ ಜಾರಿ ನಿರ್ದೇಶನಾಲಯ  ಆರೋಪಿಗಳ ಅಕೌಂಟ್‌ನಲ್ಲಿದ್ದ ಸುಮಾರು 11.25 ಕೋಟಿ ಹಣವನ್ನ ಫ್ರೀಜ್ ಮಾಡಲಾಗಿದ್ದು, 120 ಕೋಟಿ ಮೌಲ್ಯದ ಆಸ್ತಿ ಪತ್ರಗಳು, ಡಿಜಿಟಲ್ ಎವಿಡೆನ್ಸ್ ಜಪ್ತಿ ಮಾಡಲಾಗಿದೆ ಎಂದು ತಿಳಿಸಿದೆ.

ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡ ಜಾರಿ ನಿರ್ದೇಶನಾಲಯ, ಫೆಬ್ರವರಿ 29 ಮತ್ತು ಮಾರ್ಚ್ 1 ರಂದು ಬೆಂಗಳೂರಿನ 8 ಸ್ಥಳಗಳಲ್ಲಿ ಪಿಎಂಎಲ್‌ಎ 2002 ರ ಅಡಿಯಲ್ಲಿ ಆರೋಪಿಗಳಾದ ವಿಜಯಾ ಆರ್ ತಾತಾ ಮತ್ತು ಅವರ ಸಹಚರರ ವಸತಿ ಆವರಣದಲ್ಲಿ ಇಡಿ ಅಧಿಕಾರಿಗಳು ಶೋಧ ಕಾರ್ಯಾಚರಣೆ ನಡೆಸಿದ್ದರು ಎಂದು ತಿಳಿಸಿದೆ.

ಆರ್ ಎಸ್ ಚಂದ್ರಶೇಖರ್, ಮುನಿರಾಜು ಕೆ, ಡಿ ನಾಗೇಂದ್ರ ಬಾಬು, ಮಂಜುನಾಥ್ ಬಿ ಎಸ್ ಮತ್ತು ಸಂಬಂಧಿತ ಕಂಪನಿಗಳ ಕಚೇರಿಗಳ ಮೇಲೆ. ಸಂಚಯ ಲ್ಯಾಂಡ್ ಆ್ಯಂಡ್ ಎಸ್ಟೇಟ್ ಪ್ರೈ. ಲಿಮಿಟೆಡ್, ಬಿಸಿಸಿ ಕನ್ಸ್ಟ್ರಕ್ಷನ್ಸ್ ಪ್ರೈ. ಲಿಮಿಟೆಡ್, ಆಕಾಶ್ ಎಜುಕೇಶನ್ ಅಂಡ್ ಡೆವಲಪ್‌ಮೆಂಟ್ ಟ್ರಸ್ಟ್, ಎಸ್ ವಿ ಕಾಂಕ್ರೀಟ್ ಪ್ರಾಜೆಕ್ಟ್ಸ್ ಪ್ರೈವೇಟ್, M/s ಸಂಚಯ ಲ್ಯಾಂಡ್ & ಎಸ್ಟೇಟ್ ಪ್ರೈವೇಟ್ ಲಿಮಿಟೆಡ್ ಮತ್ತು ಇತರರಿಗೆ ಸಂಬಂಧಿಸಿದ ಪ್ರಕರಣಗಳು ಇದಾಗಿದೆ.

ಶೋಧ ಕಾರ್ಯಾಚರಣೆಯ ಸಂದರ್ಭದಲ್ಲಿ ಬ್ಯಾಂಕ್ ಖಾತೆಯಲ್ಲಿ 11.25 ಕೋಟಿ ರೂಪಾಯಿ ಪತ್ತೆಯಾಗಿದ್ದು, ಇದನ್ನು ಫ್ರೀಜ್ ಮಾಡಲಾಗಿದೆ. ಇದರೊಂದಿಗೆ 120 ಕೋಟಿ (ಅಂದಾಜು) ಮೌಲ್ಯದ ಸ್ಥಿರ/ಚರ ಆಸ್ತಿಗಳಿಗೆ ಸಂಬಂಧಿಸಿದ ವಿವಿಧ ದಾಖಲೆಗಳನ್ನು ಮತ್ತು ಡಿಜಿಟಲ್ ಸಾಧನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದೆ.

Vishwa News 24

Recent Posts

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

32 minutes ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

47 minutes ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

54 minutes ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

1 hour ago

ಉಡುಪಿ ನಗರಸಭೆ ವ್ಯಾಪ್ತಿಯ ಮೂಲ ಸೌಕರ್ಯ ಅಭಿವೃದ್ಧಿಗೆ ರೂ. 30 ಕೋಟಿ ಅನುದಾನ ಮಂಜೂರು ಮಾಡುವಂತೆ  ಶಾಸಕ ಯಶ್ ಪಾಲ್ ಮನವಿ – vishwanews24

ಉಡುಪಿ ನಗರಸಭೆ ಮೂಲ ಸೌಕರ್ಯ ಅಭಿವೃದ್ಧಿಗೆ ರೂ. 30 ಕೋಟಿ ವಿಶೇಷ ಅನುದಾನ ಮಂಜೂರು ಮಾಡುವಂತೆ ನಗರಾಭಿವೃದ್ಧಿ ಸಚಿವ ಯತೀಂದ್ರ…

3 hours ago

ಮಂಗಳೂರು: ಮುಂದಿನ ಏಷ್ಯನ್ ಗೇಮ್ಸ್‌ನಲ್ಲಿ ಉತ್ತಮ ಪ್ರದರ್ಶನ ನೀಡಿ ಚಿನ್ನ ಗೆಲ್ಲುವೆ : ಪೂವಮ್ಮ – vishwanews24

ಮಂಗಳೂರು: ಮುಂದಿನ ಏಷ್ಯನ್ ಗೇಮ್ಸ್‌ನಲ್ಲಿ ಉತ್ತಮ ಪ್ರದರ್ಶನ ನೀಡಿ ಚಿನ್ನ ಗೆಲ್ಲುವೆ : ಪೂವಮ್ಮ ಮಂಗಳೂರು: ಬದುಕಿನಲ್ಲಿ ಅನೇಕ ಏಳು…

4 hours ago