ಬೆಂಗಳೂರು: ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರು ಬುಧವಾರ ನಾಮಪತ್ರ ಸಲ್ಲಿಕೆ ಮಾಡಿದರು.
ನಾಮಪತ್ರ ಸಲ್ಲಿಕೆಗೂ ಮುನ್ನ ಶೋಭಾ ಕರಂದ್ಲಾಜೆ ಅವರು, ಮೈಸೂರು ಬ್ಯಾಂಕ್ ವೃತ್ತರದಲ್ಲಿರುವ ಶ್ರೀ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ, ಆಶೀರ್ವಾದ ಪಡೆದರು. ಜೊತೆಗೆ ರೋಡ್ ಶೋ ಕೂಡಾ ನಡೆಸಿದರು. ಈ ವೇಳೆ ಕೆ.ಗೋಪಾಲಯ್ಯ , ದಾಸರಹಳ್ಳಿ ಶಾಸಕರಾದ ಎಸ್. ಮುನಿರಾಜು , ಕೆ.ಆರ್.ಪುರಂ ಶಾಸಕರಾದ ಭೈರತಿ ಬಸವರಾಜು, ವಿಧಾನಪರಿಷತ್ ಸದಸ್ಯರಾದ ಗೋಪಿನಾಥ್ ರೆಡ್ಡಿ, ಭಾರತೀ ಶೆಟ್ಟಿ, ಚಲವಾದಿ ನಾರಾಯಣ ಸ್ವಾಮಿಯವರು, ಕಟ್ಟಾ ಜಗದೀಶ್ ಉಪಸ್ಥಿತರಿದ್ದರು.
ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಮಾತನಾಡಿದ ಶೋಭಾ ಕರಂದ್ಲಾಜೆ, ಕ್ಷೇತ್ರದ ಅಭಿವೃದ್ದಿಗೆ ನಿಮ್ಮ ಜೊತೆ ಇರುತ್ತೇನೆ. ಬರುವ ಐದು ವರ್ಷಗಳಲ್ಲಿ ಬೆಂಗಳೂರು ಉತ್ತರವನ್ನು ಮಾದರಿ ಕ್ಷೇತ್ರವಾಗಿ ಮಾಡುತ್ತೇನೆ ಎಂದರು. ಮೊದಲ ಬಾರಿ ನರೇಂದ್ರ ಮೋದಿ ನೇತೃತ್ವ ಒಪ್ಪಿ ಮಾಜಿ ಪ್ರಧಾನಿ ಎಚ್‌ಡಿ ದೇವೆಗೌಡರು ನಮ್ಮ ಜೊತೆಗೆ ಸೇರಿದ್ದಾರೆ. ನಮ್ಮಿಬ್ಬರ ಒಗ್ಗಟ್ಟು ಕಾಂಗ್ರೆಸ್‌ಗೆ ಪಾಠ ಕಳಿಸಲು ಶಕ್ತಿ ಬಂದಿದೆ ಎಂದರು.
ಕ್ಷೇತ್ರದಲ್ಲಿ ದೊಡ್ಡ ಅಂತರದಲ್ಲಿ ಬಿಜೆಪಿ ಗೆಲ್ಲಬೇಕು. ಕಾರ್ಯಕರ್ತರಲ್ಲಿ ಉತ್ಸಾಹದಲ್ಲಿದೆ. ಕರ್ನಾಟಕದಲ್ಲಿ 28 ಕ್ಕೆ 28 ಕ್ಷೇತ್ರಗಳನ್ನು ಬಿಜೆಪಿ ಹಾಗೂ ಜೆಡಿಎಸ್ ಗೆಲ್ಲಲಿದೆ. ಬಿಜೆಪಿ ಹಾಗೂ ಜೆಡಿಎಸ್ ಹಾಲು ಸಕ್ಕರೆಯಂತೆ ಬೆರೆತು ಕೆಲಸ ಮಾಡಿದರೆ 28 ಕ್ಷೇತ್ರದಲ್ಲಿ ಗೆಲುವು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…