Featured

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ನಾಮಪತ್ರ ಸಲ್ಲಿಕೆ – Vishwanews24

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ನಾಮಪತ್ರ ಸಲ್ಲಿಕೆ

ಬೆಂಗಳೂರು: ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರು ಬುಧವಾರ ನಾಮಪತ್ರ ಸಲ್ಲಿಕೆ ಮಾಡಿದರು.

ನಾಮಪತ್ರ ಸಲ್ಲಿಕೆಗೂ ಮುನ್ನ ಶೋಭಾ ಕರಂದ್ಲಾಜೆ ಅವರು, ಮೈಸೂರು ಬ್ಯಾಂಕ್ ವೃತ್ತರದಲ್ಲಿರುವ ಶ್ರೀ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ, ಆಶೀರ್ವಾದ ಪಡೆದರು. ಜೊತೆಗೆ ರೋಡ್ ಶೋ ಕೂಡಾ ನಡೆಸಿದರು. ಈ ವೇಳೆ ಕೆ.ಗೋಪಾಲಯ್ಯ , ದಾಸರಹಳ್ಳಿ ಶಾಸಕರಾದ ಎಸ್. ಮುನಿರಾಜು , ಕೆ.ಆರ್.ಪುರಂ ಶಾಸಕರಾದ ಭೈರತಿ ಬಸವರಾಜು, ವಿಧಾನಪರಿಷತ್‌ ಸದಸ್ಯರಾದ ಗೋಪಿನಾಥ್ ರೆಡ್ಡಿ, ಭಾರತೀ ಶೆಟ್ಟಿ, ಚಲವಾದಿ ನಾರಾಯಣ ಸ್ವಾಮಿಯವರು, ಕಟ್ಟಾ ಜಗದೀಶ್ ಉಪಸ್ಥಿತರಿದ್ದರು.

ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಮಾತನಾಡಿದ ಶೋಭಾ ಕರಂದ್ಲಾಜೆ, ಕ್ಷೇತ್ರದ ಅಭಿವೃದ್ದಿಗೆ ನಿಮ್ಮ ಜೊತೆ ಇರುತ್ತೇನೆ. ಬರುವ ಐದು ವರ್ಷಗಳಲ್ಲಿ ಬೆಂಗಳೂರು ಉತ್ತರವನ್ನು ಮಾದರಿ ಕ್ಷೇತ್ರವಾಗಿ ಮಾಡುತ್ತೇನೆ ಎಂದರು. ಮೊದಲ ಬಾರಿ ನರೇಂದ್ರ ಮೋದಿ ನೇತೃತ್ವ ಒಪ್ಪಿ ಮಾಜಿ ಪ್ರಧಾನಿ ಎಚ್‌ಡಿ ದೇವೆಗೌಡರು ನಮ್ಮ ಜೊತೆಗೆ ಸೇರಿದ್ದಾರೆ. ನಮ್ಮಿಬ್ಬರ ಒಗ್ಗಟ್ಟು ಕಾಂಗ್ರೆಸ್‌ಗೆ ಪಾಠ ಕಳಿಸಲು ಶಕ್ತಿ ಬಂದಿದೆ ಎಂದರು.

ಕ್ಷೇತ್ರದಲ್ಲಿ ದೊಡ್ಡ ಅಂತರದಲ್ಲಿ ಬಿಜೆಪಿ ಗೆಲ್ಲಬೇಕು. ಕಾರ್ಯಕರ್ತರಲ್ಲಿ ಉತ್ಸಾಹದಲ್ಲಿದೆ. ಕರ್ನಾಟಕದಲ್ಲಿ 28 ಕ್ಕೆ 28 ಕ್ಷೇತ್ರಗಳನ್ನು ಬಿಜೆಪಿ ಹಾಗೂ ಜೆಡಿಎಸ್ ಗೆಲ್ಲಲಿದೆ. ಬಿಜೆಪಿ ಹಾಗೂ ಜೆಡಿಎಸ್ ಹಾಲು ಸಕ್ಕರೆಯಂತೆ ಬೆರೆತು ಕೆಲಸ ಮಾಡಿದರೆ 28 ಕ್ಷೇತ್ರದಲ್ಲಿ ಗೆಲುವು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Vishwa News 24

Recent Posts

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ -vishwanews24

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…

21 hours ago

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ -vishwanews24

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…

2 days ago

ಕಾಪು : ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ -vishwanews24

ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…

2 days ago

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  -vishwanews24

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…

2 days ago

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ -vishwanews24

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…

2 days ago

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ -vishwanews24

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…

2 days ago