Featured

ಬೆಂಗಳೂರು-ಎರ್ನಾಕುಲಂ ಸೇರಿ ನಾಲ್ಕು ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ – vishwanews24

ಬೆಂಗಳೂರು-ಎರ್ನಾಕುಲಂ ಸೇರಿ ನಾಲ್ಕು ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ

ಲಕ್ನೋ: ಪ್ರಧಾನಿ ನರೇಂದ್ರ ಮೋದಿ  ಅವರಿಂದು ಬೆಂಗಳೂರು-ಎರ್ನಾಕುಲಂ ಸೇರಿ ನಾಲ್ಕು ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್‌  ರೈಲುಗಳಿಗೆ ಚಾಲನೆ ನೀಡಿದರು.

ತಮ್ಮ ಸಂಸದೀಯ ಕ್ಷೇತ್ರವಾದ ಉತ್ತರ ಪ್ರದೇಶದ  ವಾರಾಣಸಿಯಿಂದ ನಾಲ್ಕು ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲುಗಳಿಗೆ ಹಸಿರು ನಿಶಾನೆ ತೋರಿದರು. ಬನಾರಸ್-ಖಜುರಾಹೊ, ಲಕ್ನೋ-ಸಹಾರನ್‌ಪುರ, ಫಿರೋಜ್‌ಪುರ-ದೆಹಲಿ ಮತ್ತು ಎರ್ನಾಕುಲಂ-ಬೆಂಗಳೂರು ಮಾರ್ಗಗಳಲ್ಲಿ ಸಂಚರಿಸುವ ರೈಲುಗಳನ್ನು ಪ್ರಧಾನಿ ಮೋದಿ ಉದ್ಘಾಟಿಸಿದರು.

ದೇಶದಾದ್ಯಂತ ವಂದೇ ಭಾರತ್ ರೈಲಿಗೆ ಬೇಡಿಕೆ ಹೆಚ್ಚಿದೆ. ಇವುಗಳು ಚೆನ್ನೈನ ಇಂಟಿಗ್ರಲ್ ಕೋಚ್ ಫ್ಯಾಕ್ಟರಿ ಅಭಿವೃದ್ಧಿಪಡಿಸಿದ ಹೈ ಸ್ಪೀಡ್ ರೈಲುಗಳಾಗಿದ್ದು, ಶನಿವಾರ (ನ.8) ಬೆಳಗ್ಗೆ 8:15ರ ಸುಮಾರಿಗೆ ವಾರಣಾಸಿಯಲ್ಲಿ ನಾಲ್ಕು ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲುಗಳಿಗೆ ಹಸಿರು ನಿಶಾನೆ ತೋರಿದ್ದಾರೆ. ಈ ಮೂಲಕ ಒಟ್ಟು ವಂದೇ ಭಾರತ್ ರೈಲು ಸೇವೆಗಳ ಸಂಖ್ಯೆ 164ಕ್ಕೆ ಏರಿದೆ. ಈ ರೈಲುಗಳು ಪ್ರಮುಖ ನಗರಗಳ ನಡುವಿನ ಪ್ರಯಾಣದ ಸಮಯವನ್ನು ಗಣನೀಯವಾಗಿ ಕಡಿಮೆ ಮಾಡುವುದಲ್ಲದೆ, ಪ್ರಾದೇಶಿಕ ಸಂಚಾರವನ್ನು ಸುಧಾರಿಸಿ, ಪ್ರವಾಸೋದ್ಯಮವನ್ನು ಉತ್ತೇಜಿಸಿ, ದೇಶದಾದ್ಯಂತ ಆರ್ಥಿಕ ಚಟುವಟಿಕೆಗಳಿಗೆ ಬೆಂಬಲ ನೀಡಲಿವೆ.

ವಂದೇ ಭಾರತ್ ರೈಲು ಕೆಎಸ್‌ಆರ್ ಬೆಂಗಳೂರಿನಿಂದ ಬೆಳಗ್ಗೆ 5:10ಕ್ಕೆ ಹೊರಟು ಮಧ್ಯಾಹ್ನ 1:50ಕ್ಕೆ ಎರ್ನಾಕುಲಂ ತಲುಪಲಿದೆ. ಅಲ್ಲಿಂದ ಮಧ್ಯಾಹ್ನ 2:20ಕ್ಕೆ ಹೊರಟು ರಾತ್ರಿ 11ಕ್ಕೆ ಬೆಂಗಳೂರು ತಲುಪಲಿದೆ. ಕೇರಳದ ತ್ರಿಶ್ಯೂರ್, ಪಾಲಕ್ಕಾಡ್, ತಮಿಳುನಾಡಿನ ಕೊಯಮತ್ತೂರು, ಈರೋಡ್, ತಿರುಪ್ಪೂರು ಮತ್ತು ಸೇಲಂ ಹಾಗೂ ಕರ್ನಾಟಕದಲ್ಲಿ ಕೃಷ್ಣರಾಜಪುರದಲ್ಲಿ ನಿಲುಗಡೆಯಾಗಲಿದೆ. 8 ಗಂಟೆ 40 ನಿಮಿಷಗಳಲ್ಲಿ ತಲುಪುವ ವಂದೇ ಭಾರತ್ ಈ ಮಾರ್ಗದಲ್ಲಿ ಸಂಚರಿಸುವ ಅತ್ಯಂತ ವೇಗದ ರೈಲು ಇದಾಗಿದೆ. ಬುಧವಾರದಂದು ಯಾವುದೇ ಸೇವೆ ಇರುವುದಿಲ್ಲ.

Vishwa News 24

Recent Posts

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

1 hour ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

1 hour ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

1 hour ago

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ – vishwanews24

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…

2 hours ago

ಹಿಜಬ್‌ಗೆ ಅವಕಾಶ :ಪ್ರಣಾಳಿಕೆಯಲ್ಲಿ ಸಮಾನತೆಯ ಮಾತು ಕೊಟ್ಟಿದ್ವಿ , ಯಾವುದೇ ಕಾರಣಕ್ಕೂ ಆದೇಶ ವಾಪಸ್ ಪಡೆಯಲ್ಲ : ಮಧು ಬಂಗಾರಪ್ಪ – vishwanews24

ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು  ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…

2 hours ago

ಹಿಜಾಬ್‌ಗೆ ಅನುಮತಿ : ಸಾಮಾಜಿಕ ಸಾಮರಸ್ಯವನ್ನು ಕದಡುವುದೇ ಸಿದ್ದರಾಮಯ್ಯ ಸರ್ಕಾರದ ಕಸುಬಾಗಿ ಬಿಟ್ಟಿದೆ : ಸುನಿಲ್ ಕುಮಾರ್ ಆಕ್ರೋಶ – vishwanews24

ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸಲು ಅವಕಾಶ: ಕಾಂಗ್ರೆಸ್ ನ ಮುಸ್ಲಿಂ ಓಲೈಕೆ ನೀತಿ ಬಹಿರಂಗ : ಸುನಿಲ್ ಕುಮಾರ್ ಕಾರ್ಕಳ:…

2 hours ago