ಬೆಂಗಳೂರು: ಓವರ್ ಟೇಕ್ ಮಾಡುವ ಭರದಲ್ಲಿ ಬೈಕ್ ಚಾಲಕ ಬಿಎಂಟಿಸಿ ಬಸ್ ಟಯರ್‌ಗೆ ಸಿಲುಕಿ ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ದೀಪಕ್ (30) ಮೃತ ದುರ್ದೈವಿ. ನಿನ್ನೆ ರಾತ್ರಿ 7:45ರ ಸುಮಾರಿಗೆ ಪೀಣ್ಯದ 14ನೇ ಕ್ರಾಸ್‍ನಲ್ಲಿ ಘಟನೆ ನಡೆದಿದೆ. ಪೀಣ್ಯ ಪೊಲೀಸ್ ಠಾಣೆ ಮಾರ್ಗವಾಗಿ ಕಾಮಾಕ್ಷಿಪಾಳ್ಯದ ಕಡೆ ತೆರಳುತಿದ್ದ ದೀಪಕ್, ಬೈಕ್‍ನಲ್ಲಿ ಬಸ್‍ನ್ನು ಓವರ್ ಟೇಕ್ ಮಾಡಲು ಮುಂದಾಗಿದ್ದಾನೆ. ಮಾರ್ಗದ ಎಡಭಾಗದಲ್ಲಿ ಮುಂದೆ ಬರಲು ಯತ್ನಿಸಿದ ಆತ ಬಸ್‍ನ ಹಿಂಬದಿ ಟಯರ್‌ಗೆ ಸಿಲುಕಿ ಮೃತಪಟ್ಟಿದ್ದಾನೆ.
ದೀಪಕ್ ಹೆಲ್ಮೆಟ್ ಧರಿಸದೇ ಬೈಕ್ ಚಲಾಯಿಸಿದ್ದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ದೀಪಕ್ ಮೂಲತಃ ವಾರಣಾಸಿಯವಾನಾಗಿದ್ದು, ಕಳೆದ ಮೂರು ತಿಂಗಳ ಹಿಂದಷ್ಟೇ ಬೆಂಗಳೂರಿಗೆ ಬಂದಿದ್ದ. ಎಸ್‍ಎಸ್ ಫ್ಯಾಬ್ ಕಂಪನಿಯಲ್ಲಿ ಆಪರೇಟರ್ ಆಗಿ ಕೆಲಸ ಮಾಡುತಿದ್ದ. ಕೆಲಸ ಮುಗಿಸಿ ಮನೆಗೆ ತೆರಳುವಾಗ ದುರ್ಘಟನೆ ಸಂಭವಿಸಿದೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪೀಣ್ಯ ಸಂಚಾರಿ ಪೊಲೀಸರು ಬಸ್ ಚಾಲಕನನ್ನು ವಶಕ್ಕೆ ಪಡದು ವಿಚಾರಣೆ ನಡೆಸುತ್ತಿದ್ದಾರೆ.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…