ಬೆಂಗಳೂರು : ಬೆಂಗಳೂರಿನಲ್ಲಿ ಮೊದಲ ಬಾರಿಗೆ ಆಯೋಜನೆಗೊಂಡ ಕಂಬಳಕ್ಕೆ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ಆಗಮಿಸುವುದಿಲ್ಲ ಎಂದು ಪುತ್ತೂರು ಕಾಂಗ್ರೆಸ್ ಶಾಸಕ ಮತ್ತು ಬೆಂಗಳೂರು ಕಂಬಳ ಸಮಿತಿ ಅಧ್ಯಕ್ಷ ಅಶೋಕ್ ರೈ ಸ್ಪಷ್ಟನೆ ನೀಡಿದ್ದಾರೆ.
ಅಪ್ರಾಪ್ತ ವಯಸ್ಕರು ಸೇರಿದಂತೆ ಮಹಿಳಾ ಕುಸ್ತಿಪಟುಗಳ ಮೇಲೆ ಅತ್ಯಾಚಾರ ಮತ್ತು ಲೈಂಗಿಕ ಕಿರುಕುಳದ ಆರೋಪ ಹೊತ್ತಿರುವ ಬ್ರಿಜ್ ಭೂಷಣ್ ಅವರು ಆರಂಭದಲ್ಲಿ ನವೆಂಬರ್ 25 ಮತ್ತು 26 ರಂದು ನಿಗದಿಯಾಗಿದ್ದ ಬೆಂಗಳೂರು ಕಂಬಳ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಗಿತ್ತು. ಆದರೆ ಇದಕ್ಕೆ ಅನೇಕ ಮಂದಿ ವಿರೋಧ ವ್ಯಕ್ತಪಡಿಸಿದ್ದರು.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅಶೋಕ್ ರೈ, ಇದು ದೊಡ್ಡ ಕಾರ್ಯಕ್ರಮ ಆಗಿರುವ ಕಾರಣ ಬೇರೆ ಬೇರೆ ಸಂಘಟನೆಯವರು ಬಂದು ಅನೇಕ ಮನವಿ ಮಾಡುತ್ತಾರೆ. ಪುನೀತ್ ರಾಜ್ ಕುಮಾರ್ ಅಭಿಮಾನಿಗಳು ಬಂದು ವೇದಿಕೆಗೆ ಅವರ ಹೆಸರನ್ನು ಇಡಲು ಹೇಳುತ್ತಾರೆ. ಸಿದ್ದಿ ಜನಾಂಗದವರು ಬಂದು ಅವರನ್ನು ಆಹ್ವಾನಿಸುವಂತೆ ಕೇಳಿದ್ದರು. ಆದರೆ ಬ್ರಿಜ್ ಭೂಷಣ್ ಶರಣ್ ಸಿಂಗ್ ಮೊನ್ನೆಯೇ ನಾನು ಕಾರ್ಯಕ್ರಮಕ್ಕೆ ಬರುವುದಿಲ್ಲ ಎಂದು ತಿಳಿಸಿದ್ದಾರೆ ಎಂದರು.
ಇನ್ನು ಕಂಬಳ ಎಲ್ಲರಿಗೂ ಸೇರುವ ಕಾರ್ಯಕ್ರಮವಾಗಿದ್ದು, ಪಕ್ಷಾತೀತವಾಗಿ ಯಾವುದೇ ಪಕ್ಷ ಭೇದವಿಲ್ಲದೇ ಕಾಂಗ್ರೆಸ್, ಬಿಜೆಪಿ ಸದಸ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.
ಉಡುಪಿ : ಅಕ್ಕ ಕೆಫೆ ನಿರ್ವಹಣೆ ; ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…
ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…
ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…
ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…
ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…