ಬೆಂಗಳೂರು ಕಂಬಳ :  ದೀಪ ಬೆಳಗುವ ಮೂಲಕ ಕೋಣಗಳ ಓಟಕ್ಕೆ ಚಾಲನೆ ನೀಡಿದ ಅಶ್ವಿನಿ ಪುನಿತ್​ ರಾಜ್​​ಕುಮಾರ್ – vishwanews24

Featured, ರಾಜ್ಯ ನ್ಯೂಸ್

ಬೆಂಗಳೂರು ಕಂಬಳ :  ದೀಪ ಬೆಳಗುವ ಮೂಲಕ ಕೋಣಗಳ ಓಟಕ್ಕೆ ಚಾಲನೆ ನೀಡಿದ ಅಶ್ವಿನಿ ಪುನಿತ್​ ರಾಜ್​​ಕುಮಾರ್

ಬೆಂಗಳೂರು : ಇತಿಹಾಸದಲ್ಲೇ ಮೊದಲ ಬಾರಿಗೆ ರಾಜಧಾನಿ ಬೆಂಗಳೂರಿನಲ್ಲಿ ಕಂಬಳ ಪಂದ್ಯ ಆಯೋಜಿಸಲಾಗಿದೆ. ನಮ್ಮ ಕಂಬಳ, ಬೆಂಗಳೂರು ಕಂಬಳ ಎಂಬ ಹೆಸರಿನಲ್ಲಿ ಶನಿವಾರ ಮತ್ತು ಭಾನುವಾರ (ನ.25, 26) ಎರಡು ದಿನಗಳ ಕಾಲ ಪಂದ್ಯ ನಡೆಯಲಿದೆ. ಈ ಕಂಬಳ ಕೆರೆಗೆ ಯುವರತ್ನ ಡಾ. ಪುನಿತ್​​ ರಾಜ್​​ಕುಮಾರ್​ ಪತ್ನಿ ಅಶ್ವಿನಿ ಪುನಿತ್​ ರಾಜ್​​ಕುಮಾರ್  ಅವರು ಶನಿವಾರ (ನ.25) ದೀಪ ಬೆಳಗುವ ಮೂಲಕ ಕೋಣಗಳ ಓಟಕ್ಕೆ ಚಾಲನೆ ನೀಡಿದರು. ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ, ಸಂಸದ ಸದಾನಂದ ಗೌಡ, ಸಚಿವೆ ಶೋಭಾ ಕರಂದ್ಲಾಜೆ, ಶಾಸಕ ಎಸ್.ಆರ್.ವಿಶ್ವನಾಥ್ ಹಾಗೂ ಬೆಂಗಳೂರು ಕಂಬಳ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್​ ರೈ ಉದ್ಘಾಟನಾ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

ಇದಕ್ಕೂ ಮೊದಲು ರಾಜ ಮಹರಾಜ ಹೆಸರಿನ ಕಂಬಳ ಕೆರೆಗೆ ಅರ್ಚಕರು ಧಾರ್ಮಿಕ ವಿಧಿವಿಧಾನ ನೆರವೇರಿಸಿದರು. ದೈವ, ದೇವರ ಪ್ರಸಾದ ಕಂಬಳ ಕೆರೆಯ ನೀರಿಗೆ ಅರ್ಪಣೆ ಮಾಡಿ, ಯಾವುದೇ ಅಡ್ಡಿ-ಆತಂಕ ಎದುರಾಗದಂತೆ ಪ್ರಾರ್ಥನೆ ಸಲ್ಲಿಸಿ, ದೀಪ ಬೆಳಗಿಸಿ ಕಾಯಿ ಒಡೆದರು.

ಉಡುಪಿ : ಹಿರಿಯ ಪೊಲೀಸ್ ಅಧಿಕಾರಿಯೊಂದಿಗೆ ದುರ್ವರ್ತನೆ ತೋರಿದ ಶಾಸಕರಾದ ಸುನೀಲ್ ಕುಮಾರ್ ನಡೆ ನಾಚೀಕೆಗೇಡು : ರಮೇಶ್ ಕಾಂಚನ್ ಆಕ್ರೋಶ – vishwanews24

ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಕಂಬಳ ಪಂದ್ಯಾವಳಿಯನ್ನು ವೀಕ್ಷಿಸಲು ಲಕ್ಷಾಂತರ ಜನರು ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಬಿಗಿ ಬಂದೋಬಸ್ತ ಮಾಡಿದ್ದಾರೆ. ಅಲ್ಲದೆ ಸಂಚಾರಿ ಪೊಲೀಸರು ಸಾರ್ವಜನಿಕರು ಕಟ್ಟುನಿಟ್ಟಾಗಿ ಟ್ರಾಫಿಕ್​ ನಿಯಮ ಪಾಲಿಸುವಂತೆ ನೋಡಿಕೊಳ್ಳುತ್ತಿದ್ದಾರೆ. ಇನ್ನು ಕಂಬಳ ವೀಕ್ಷಣೆಗೆ ಬರುವ ಜನರು ಗೇಟ್ ನಂಬರ್ 1, 2, 3 ಹಾಗೂ 4ರ ಮೂಲಕ ಪ್ರವೇಶಿಸಲು ಅವಕಾಶ ನೀಡಲಾಗಿದೆ.

ಕಂಬಳ ವೀಕ್ಷಿಸಲು ಬರುವ ವಿವಿಐಪಿಗಳಿಗೆ ಪ್ರತ್ಯೇಕ ಎಂಟ್ರಿ ವ್ಯವಸ್ಥೆ ಮಾಡಲಾಗಿದೆ. ವಿವಿಐಪಿಗಳು ಫನ್ ವರ್ಲ್ಡ್‌ ಕಡೆಯಿಂದ ಪ್ರವೇಶಿಸಬೇಕು. ಯಾವುದೇ ಟಿಕೆಟ್‌ ಇಲ್ಲದೆ ಉಚಿತವಾಗಿ ಪ್ರವೇಶದ ವ್ಯವಸ್ಥೆ ಮಾಡಲಾಗಿದೆ. ಸಂಜೆ 6:30 ಮುಖ್ಯಮಂತ್ರಿ ಸಿದ್ದರಾಮಯ್ಯ ಕಂಬಳ ಮೈದಾನಕ್ಕೆ ಆಗಮಿಸಲಿದ್ದಾರೆ.

ಉಡುಪಿ : ಡಿಕೆಶಿ ವಿರುದ್ಧದ ಪ್ರಕರಣ ರಾಜಕೀಯ ಪ್ರೇರಿತ, ಅಂದಿನ ಸರ್ಕಾರ ಮಾಡಿದ ಸೇಡಿನ ರಾಜಕಾರಣ : ಲಕ್ಷ್ಮೀ ಹೆಬ್ಬಾಳ್ಕರ್ – vishwanews24

Leave a Reply