ಬೆಂಗಳೂರು : ಇತಿಹಾಸದಲ್ಲೇ ಮೊದಲ ಬಾರಿಗೆ ರಾಜಧಾನಿ ಬೆಂಗಳೂರಿನಲ್ಲಿ ಕಂಬಳ ಪಂದ್ಯ ಆಯೋಜಿಸಲಾಗಿದೆ. ನಮ್ಮ ಕಂಬಳ, ಬೆಂಗಳೂರು ಕಂಬಳ ಎಂಬ ಹೆಸರಿನಲ್ಲಿ ಶನಿವಾರ ಮತ್ತು ಭಾನುವಾರ (ನ.25, 26) ಎರಡು ದಿನಗಳ ಕಾಲ ಪಂದ್ಯ ನಡೆಯಲಿದೆ. ಈ ಕಂಬಳ ಕೆರೆಗೆ ಯುವರತ್ನ ಡಾ. ಪುನಿತ್ ರಾಜ್ಕುಮಾರ್ ಪತ್ನಿ ಅಶ್ವಿನಿ ಪುನಿತ್ ರಾಜ್ಕುಮಾರ್ ಅವರು ಶನಿವಾರ (ನ.25) ದೀಪ ಬೆಳಗುವ ಮೂಲಕ ಕೋಣಗಳ ಓಟಕ್ಕೆ ಚಾಲನೆ ನೀಡಿದರು. ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಸಂಸದ ಸದಾನಂದ ಗೌಡ, ಸಚಿವೆ ಶೋಭಾ ಕರಂದ್ಲಾಜೆ, ಶಾಸಕ ಎಸ್.ಆರ್.ವಿಶ್ವನಾಥ್ ಹಾಗೂ ಬೆಂಗಳೂರು ಕಂಬಳ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ರೈ ಉದ್ಘಾಟನಾ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.
ಇದಕ್ಕೂ ಮೊದಲು ರಾಜ ಮಹರಾಜ ಹೆಸರಿನ ಕಂಬಳ ಕೆರೆಗೆ ಅರ್ಚಕರು ಧಾರ್ಮಿಕ ವಿಧಿವಿಧಾನ ನೆರವೇರಿಸಿದರು. ದೈವ, ದೇವರ ಪ್ರಸಾದ ಕಂಬಳ ಕೆರೆಯ ನೀರಿಗೆ ಅರ್ಪಣೆ ಮಾಡಿ, ಯಾವುದೇ ಅಡ್ಡಿ-ಆತಂಕ ಎದುರಾಗದಂತೆ ಪ್ರಾರ್ಥನೆ ಸಲ್ಲಿಸಿ, ದೀಪ ಬೆಳಗಿಸಿ ಕಾಯಿ ಒಡೆದರು.
ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಕಂಬಳ ಪಂದ್ಯಾವಳಿಯನ್ನು ವೀಕ್ಷಿಸಲು ಲಕ್ಷಾಂತರ ಜನರು ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಬಿಗಿ ಬಂದೋಬಸ್ತ ಮಾಡಿದ್ದಾರೆ. ಅಲ್ಲದೆ ಸಂಚಾರಿ ಪೊಲೀಸರು ಸಾರ್ವಜನಿಕರು ಕಟ್ಟುನಿಟ್ಟಾಗಿ ಟ್ರಾಫಿಕ್ ನಿಯಮ ಪಾಲಿಸುವಂತೆ ನೋಡಿಕೊಳ್ಳುತ್ತಿದ್ದಾರೆ. ಇನ್ನು ಕಂಬಳ ವೀಕ್ಷಣೆಗೆ ಬರುವ ಜನರು ಗೇಟ್ ನಂಬರ್ 1, 2, 3 ಹಾಗೂ 4ರ ಮೂಲಕ ಪ್ರವೇಶಿಸಲು ಅವಕಾಶ ನೀಡಲಾಗಿದೆ.
ಕಂಬಳ ವೀಕ್ಷಿಸಲು ಬರುವ ವಿವಿಐಪಿಗಳಿಗೆ ಪ್ರತ್ಯೇಕ ಎಂಟ್ರಿ ವ್ಯವಸ್ಥೆ ಮಾಡಲಾಗಿದೆ. ವಿವಿಐಪಿಗಳು ಫನ್ ವರ್ಲ್ಡ್ ಕಡೆಯಿಂದ ಪ್ರವೇಶಿಸಬೇಕು. ಯಾವುದೇ ಟಿಕೆಟ್ ಇಲ್ಲದೆ ಉಚಿತವಾಗಿ ಪ್ರವೇಶದ ವ್ಯವಸ್ಥೆ ಮಾಡಲಾಗಿದೆ. ಸಂಜೆ 6:30 ಮುಖ್ಯಮಂತ್ರಿ ಸಿದ್ದರಾಮಯ್ಯ ಕಂಬಳ ಮೈದಾನಕ್ಕೆ ಆಗಮಿಸಲಿದ್ದಾರೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…