ಬೆಂಗಳೂರು : ಕಚೇರಿಯಲ್ಲಿಯೇ ಆತ್ಮಹತ್ಯೆಗೆ ಶರಣಾದ BMTC ಸಿಬ್ಬಂದಿ – vishwanews24

Featured, ರಾಜ್ಯ ನ್ಯೂಸ್

ಬೆಂಗಳೂರು : ಕಚೇರಿಯಲ್ಲಿಯೇ ಆತ್ಮಹತ್ಯೆಗೆ ಶರಣಾದ ಬಿಎಂಟಿಸಿ ಸಿಬ್ಬಂದಿ

ಬೆಂಗಳೂರು: ಬಿಎಂಟಿಸಿ ಸಿಬ್ಬಂದಿಯೊಬ್ಬರು ಕಚೇರಿಯಲ್ಲಿಯೇ ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಶಾಂತಿನಗರ ಬಸ್ ನಿಲ್ದಾಣದ ಕಚೇರಿಯಲ್ಲಿ ನಡೆದಿದೆ.

ಬೆಳಗಾವಿ ಜಿಲ್ಲೆಯ ಅಥಣಿ ಮೂಲದ ಮಹೇಶ್ (45) ಆತ್ಮಹತ್ಯೆಗೆ ಶರಣಾದ ಬಿಎಂಟಿಸಿ ಸಿಬ್ಬಂದಿ. ನಿನ್ನೆ ಬೆಳಿಗ್ಗೆ ಸೆಕ್ಯೂರಿಟಿ ಗಾರ್ಡ್ ಬಳಿ ರೆಕಾರ್ಡ್ ರೂಮ್ ಬೀಗ ಕೇಳಿ ಪಡೆದಿದ್ದ ಮಹೇಶ್, ನಿನ್ನೆ ಬೆಳಿಗ್ಗೆಯಿಂದಲೂ ರೆಕಾರ್ಡ್ ರೂಮ್ ನಲ್ಲಿಯೇ ಓಡಾಡುತ್ತಿದ್ದರು.

ಉಡುಪಿ : ಅಗ್ನಿ ಅವಘಡದಲ್ಲಿ ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ಅಶ್ವಿನಿ ನಿಧನಕ್ಕೆ ಬಿ.ವೈ.ವಿಜಯೇಂದ್ರ ಸಂತಾಪ – vishwanews24

ನಿನ್ನೆ ಸಂಜೆ ಯಾರೂ ಇಲ್ಲದ ವೇಳೆ ಕಚೇರಿಯಲ್ಲಿ ನೇಣಿಗೆ ಕೊರಳೊಡ್ಡಿರುವ ಶಂಕೆ ವ್ಯಕ್ತವಾಗಿದೆ.

ಘಟನಾ ಸ್ಥಳಕ್ಕೆ ವಿಲ್ಸನ್ ಗಾರ್ಡನ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಿಬ್ಬಂದಿ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಸುರತ್ಕಲ್ : ಬೃಹತ್ ಮಾರುಕಟ್ಟೆ ಕಾಮಗಾರಿ ಪುನರಾರಂಭ  : ಶಾಸಕ ಡಾ. ಭರತ್ ಶೆಟ್ಟಿ – vishwanews24

Leave a Reply