ಬೆಂಗಳೂರು: ಬಾಬುಸಾಬ್ ಪಾಳ್ಯ ಕಟ್ಟಡ ಕುಸಿತ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿ ಪರಿಶೀಲನೆ ನಡೆಸಿದರು. ಇದೇ ವೇಳೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಈ ತರ ಅಕ್ರಮ ಕಟ್ಟಡಗಳನ್ನು ಕಟ್ಟಿ ಅನಾಹುತ ಸಂಭವಿಸಿದರೆ ಸತ್ತವರಿಗೆ ಹೊಣೆ ಯಾರು? ಅವ್ನು ಎಲ್ಲಿ ಕಮಿಷನರ್ ಎಂದು ತರಾಟೆಗೆ ತೆಗೆದುಕೊಂಡ ಸಿಎಂ ಸಿದ್ದರಾಮಯ್ಯ, ಇನ್ಮುಂದೆ ಯಾವುದೇ ಅಕ್ರಮ ಕಟ್ಟಡ ಕಟ್ಟುವಂತಿಲ್ಲ ಎಂದು ತಾಕೀತು ಮಾಡಿದರು.
ಘಟನೆಯಲ್ಲಿ 8 ಮಂದಿ ಮೃತಪಟ್ಟಿದ್ದಾರೆ. 6 ಮಂದಿ ಗಾಯಗೊಂಡಿದ್ದಾರೆ. ಮೃತರ ಕುಟುಂಬದವರಿಗೆ ಕಾರ್ಮಿಕ ಇಲಾಖೆಯಿಂದ 2 ಲಕ್ಷ ರೂಪಾಯಿ, ಬಿಬಿಎಂಪಿಯಿಂದ 3 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು. 6 ಮಂದಿ ಗಾಯಗೊಂಡಿದ್ದು, ಅವರ ಆಸ್ಪತ್ರೆ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಸಿದ್ದರಾಮಯ್ಯ ಹೇಳಿದರು.
ಪರಿಹಾರ ನೀಡಿರುವುದು ಅವರ ಜೀವಕ್ಕೆ ಸಮವಲ್ಲ. ಜೀವಕ್ಕೆ ಬೆಲೆ ಕಟ್ಟಲಾಗದು. ಆದರೂ ಮೃತರೆಲ್ಲ ಕೂಲಿ ಕಾರ್ಮಿಕರು. ಅವರನ್ನು ನಂಬಿಕೊಂಡವರಿಗೆ ನೆರವು ನೀಡಬೇಕಿದೆ. ಮೃತದೇಹವನ್ನು ಅವರ ಊರಿಗೆ ಕೊಂಡೊಯ್ಯಲೂ ವ್ಯವಸ್ಥೆ ಮಾಡಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…