Featured

ಬೆಂಗಳೂರು ಕಟ್ಟಡ ಕುಸಿತ ಪ್ರಕರಣ : ಮಾಲೀಕ ಹಾಗೂ ಆತನ ಮಗನ ವಿರುದ್ಧ ಎಫ್‌ಐಆರ್ ದಾಖಲು – vishwanews24

ಬೆಂಗಳೂರು ಕಟ್ಟಡ ಕುಸಿತ ಪ್ರಕರಣ – ಮಾಲೀಕ ಹಾಗೂ ಆತನ ಮಗನ ವಿರುದ್ಧ ಎಫ್‌ಐಆರ್ ದಾಖಲು

ಬೆಂಗಳೂರು: ಬಾಬುಸಾಬ್ ಪಾಳ್ಯದಲ್ಲಿ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಣ್ಣೂರು ಠಾಣೆಯಲ್ಲಿ ಕಟ್ಟಡ ಮಾಲೀಕ ಮುನಿರಾಜು ರೆಡ್ಡಿ ಹಾಗೂ ಆತನ ಮಗನ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಮುನಿರಾಜು ರೆಡ್ಡಿ ಆತನ ಮಗ, ಕಾಂಟ್ರ‍್ಯಾಕ್ಟರ್ ಸೇರಿ ಇತರರು ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖವಾಗಿದೆ. ಪ್ರಕರಣದಲ್ಲಿ ಒಟ್ಟು ಮೂರು ಜನರ ಹೆಸರನ್ನು ಪೊಲೀಸರು ಉಲ್ಲೇಖ ಮಾಡಿದ್ದು, ನಿರ್ಲಕ್ಷ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಘಟನೆಗೆ ಕಳಪೆ ಕಾಮಗಾರಿಯೇ ಕಾರಣ ಎಂದು ಮೇಲ್ನೋಟಕ್ಕೆ ತಿಳಿದು ಬಂದಿದೆ. ಈ ಕಟ್ಟಡ ನಿರ್ಮಾಣದಲ್ಲಿ ಪಿಲ್ಲರ್ ರಾಡ್ 28-30 ಎಂಎಂ ರಾಡ್ ಹಾಕಬೇಕಿತ್ತು ಆದರೆ 18-20 ಎಂಎಂ ರಾಡ್ ಬಳಸಿದ್ದಾರೆ. 14-16 ರಾಡ್ ಹಾಕಿ ಮೋಲ್ಡಿಂಗ್ ಮಾಡಬೇಕಿತ್ತು, ಆದರೆ 8-10 ಎಂಎಂ ರಾಡ್ ಬಳಸಿದ್ದಾರೆ. ಎಂ ಸ್ಯಾಂಡ್ ಹೆಚ್ಚು ಬಳಸಿ, ಸಿಮೆಂಟ್ ಕಡಿಮೆ ಬಳಸಿರುವ ಶಂಕೆ ವ್ಯಕ್ತವಾಗಿದೆ.

ಮಳೆಯಿಂದ ಈ ಘಟನೆ ಸಂಭವಿಸಿಲ್ಲ ಇದಕ್ಕೆ ಕಳಪೆ ಕಾಮಗಾರಿಯೇ ಕಾರಣ ಎನ್ನುವುದು ಮೇಲ್ನೋಟಕ್ಕೆ ಕಾಣುತ್ತಿದೆ. ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ತಂಡಗಳಿಂದ ಕಾರ್ಯಾಚರಣೆ ನಡೆಯುತ್ತಿದ್ದು, ಅವಶೇಷಗಳಡಿ ನಿಲುಕಿರುವ ಇನ್ನೂ ಎರಡರಿಂದ ಮೂರು ಜನರಿಗಾಗಿ ಹುಡುಕಾಟ ಮುಂದುವರೆದಿದೆ.

21 ಜನರಲ್ಲಿ 18 ಜನರ ಬಗ್ಗೆ ಮಾಹಿತಿ ಲಭ್ಯವಾಗಿದೆ. ಈವರೆಗೆ 13 ಜನರನ್ನು ರಕ್ಷಣೆ ಮಾಡಲಾಗಿದೆ. ಐದು ಜನರ ಸಾವಾಗಿದ್ದು, ಒಟ್ಟು 18 ಕಾರ್ಮಿಕರು ಸಿಕ್ಕಿರುವ ಬಗ್ಗೆ ಮಾಹಿತಿ ಇದೆ. ಇನ್ನೂ ಮೂರು ಜನರಿಗಾಗಿ ಶೋಧಕಾರ್ಯ ಮುಂದುರೆದಿದೆ. ಜೆಸಿಬಿ ಮೂಲಕ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

Vishwa News 24

Recent Posts

ಎಂಆರ್‌ಪಿಎಲ್‌ ನಲ್ಲಿ ಭಾರೀ ಸ್ಫೋಟ : ಓರ್ವನ ಮೃತದೇಹ ಪತ್ತೆ -vishwanews24

ಎಂಆರ್‌ಪಿಎಲ್‌ ನಲ್ಲಿ ಭಾರೀ ಸ್ಫೋಟ : ಸುಟ್ಟು ಕರಕಲಾದ ಸ್ಥಿತಿಯಲ್ಲಿ ಓರ್ವನ ಮೃತದೇಹ ಪತ್ತೆ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ಬುಧವಾರ ಮಧ್ಯಾಹ್ನದ…

2 hours ago

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ: ಪೊಲೀಸ್ ಕಮಿಷನರ್ -vishwanews24

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ :…

8 hours ago

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  -vishwanews24

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು…

9 hours ago

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ; -vishwanews24

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…

9 hours ago

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ -vishwanews24

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…

11 hours ago

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು -vishwanews24

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…

11 hours ago