Featured

ಬೆಂಗಳೂರು : ಕಬ್ಬನ್ ಪಾರ್ಕ್‌ನಲ್ಲಿ ಯುವಕ–ಯುವತಿಯರ ಅಸಭ್ಯ ವರ್ತನೆ ತಡೆಯಲು ಧ್ವನಿವರ್ಧಕ  – Vishwanews24

ಬೆಂಗಳೂರು : ಕಬ್ಬನ್ ಪಾರ್ಕ್‌ನಲ್ಲಿ ಯುವಕ–ಯುವತಿಯರ ಅಸಭ್ಯ ವರ್ತನೆ ತಡೆಯಲು ಧ್ವನಿವರ್ಧಕ

ಬೆಂಗಳೂರು: ಕಬ್ಬನ್ ಉದ್ಯಾನದಲ್ಲಿ ವಯಸ್ಕರ ಅಸಭ್ಯ ವರ್ತನೆಯನ್ನು ನಿಯಂತ್ರಿಸಲು ಭದ್ರತಾ ಸಿಬ್ಬಂದಿಗೆ ತೋಟಗಾರಿಕೆ ಇಲಾಖೆ ಧ್ವನಿವರ್ಧಕ ಗಳನ್ನು ನೀಡಿದೆ.

‘ಉದ್ಯಾನಕ್ಕೆ ಬರುವ ಕೆಲವರ ವರ್ತನೆ ಮಿತಿ ಮೀರಿತ್ತು. ಕೆಲವು ಯುವಕ–ಯುವತಿಯರು ಮನ ಬಂದಂತೆ ಅಸಭ್ಯವಾಗಿ ವರ್ತಿಸುತ್ತಿದ್ದಾರೆ. ಕುಟುಂಬ ಸಮೇತ ಉದ್ಯಾನಕ್ಕೆ ಬರುವ ಹಿರಿಯರಿಗೆ, ಮಕ್ಕಳಿಗೆ, ಮಹಿಳೆಯರಿಗೆ ಇದು ಕಿರಿಕಿರಿಯಾಗುತ್ತಿತ್ತು. ಇದನ್ನು ತಡೆಯಲು ಭದ್ರತಾ ಸಿಬ್ಬಂದಿ ಧ್ವನಿವರ್ಧಕ ಬಳಸಿ ಎಚ್ಚರಿಕೆ ನೀಡುತ್ತಿದ್ದಾರೆ.

ಉದ್ಯಾನದಲ್ಲಿ ಇಂತಹ ಅಸಭ್ಯ ವರ್ತನೆಗಳಿಗೆ ಕಡಿವಾಣ ಬಿದ್ದಂತಾಗಿದೆ. ತೋಟಗಾರಿಕೆ ಇಲಾಖೆಯ ಈ ನೂತನ ಕ್ರಮ ಶ್ಲಾಘನೀಯ’ ಎಂದು ಕಬ್ಬನ್ ಉದ್ಯಾನದ ನಡಿಗೆದಾರು ತಿಳಿಸಿದ್ದಾರೆ.

‘ಉದ್ಯಾನದ ನಾಲ್ಕು ಪ್ರವೇಶ ದ್ವಾರಗಳಲ್ಲಿ ಕಾರ್ಯನಿರ್ವಹಿಸುವ ಭದ್ರತಾ ಸಿಬ್ಬಂದಿಗೆ ಧ್ವನಿವರ್ಧಕ ನೀಡಲಾಗಿದೆ. ಉದ್ಯಾನದಲ್ಲಿ ಸ್ವಚ್ಛತೆ ಕಾಪಾಡುವುದು, ಗಿಡ–ಮರಗಳಿಗೆ ಹಾನಿ ಮಾಡಬಾರದು ಎಂಬ ಎಚ್ಚರಿಕೆಯನ್ನು ಧ್ವನಿವರ್ಧಕದ ಮೂಲಕ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತದೆ’.

Vishwa News 24

Recent Posts

ಕಸದ ಚೀಲ – ವಿಭಿನ್ನ ಕಥೆಯ ಮೂಲಕ ಗಮನ ಸೆಳೆದ ಉಡುಪಿಯ ಯುವ ಬರಹಗಾರ ಸುಮಂತ್ ಗಾಣಿಗ – vishwanews24

‘ಕಸದ ಚೀಲ’ದ ಮೂಲಕ ವಿಭಿನ್ನ ಕಥನ – ಉಡುಪಿಯ ಸುಮಂತ್ ಗಾಣಿಗ ಅವರ ಬರವಣಿಗೆಗೆ ಮೆಚ್ಚುಗೆ ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ…

39 minutes ago

ಎಲ್ಲಾ ಮಾದರಿಯ ನಾಯಕತ್ವಕ್ಕೆ ರಾಜೀನಾಮೆ ನೀಡಿದ ಹರ್ಮನ್‌ಪ್ರೀತ್ ಕೌರ್ – vishwanews24

ಎಲ್ಲಾ ಮಾದರಿಯ ನಾಯಕತ್ವಕ್ಕೆ ರಾಜೀನಾಮೆ ನೀಡಿದ ಹರ್ಮನ್‌ಪ್ರೀತ್ ಕೌರ್ "ರಕ್ತ, ಬೆವರು ಹರಿಸಿ ಸೇವೆ ಸಲ್ಲಿಸಿದ್ದೇನೆ" : ಸಾಮಾಜಿಕ ಜಾಲತಾಣದಲ್ಲಿ…

1 hour ago

ಉಡುಪಿ: ಅ.8 ರಂದು ನೇರ ಸಂದರ್ಶನ – vishwanews24

ಉಡುಪಿ: ಅ.8 ರಂದು ನೇರ ಸಂದರ್ಶನ      ಉಡುಪಿ: ನಗರದ ಶಾಂತ ಎಲೆಕ್ಟಿçಕಲ್ಸ್ ಪ್ರೆöÊ.ಲಿ., ಆಭರಣ ಜುವೆರ‍್ಸ್ ಹತ್ತಿರ, ಕಾರ್ಪೋರೇಶನ್ ಬ್ಯಾಂಕ್…

2 hours ago

ಹಳೆಕೋಟ–ಕಡವಾಡ ಕ್ರಾಸ್ ರಸ್ತೆ ದುರಸ್ತಿ ಆಗ್ರಹಿಸಿ ಜಿಲ್ಲಾಧಿಕಾರಿಗೆ ಕರವೇ ಮನವಿ – vishwanews24

ಹಳೆಕೋಟ–ಕಡವಾಡ ಕ್ರಾಸ್ ರಸ್ತೆ ದುರಸ್ತಿ ಆಗ್ರಹಿಸಿ ಜಿಲ್ಲಾಧಿಕಾರಿಗೆ ಕರವೇ ಮನವಿ ಕಾರವಾರ  ಇಳಕಲ್ ಕೈಗಾ ರಾಜ್ಯ ರಸ್ತೆಯ ಹಳೆಕೋಟದಿಂದ  ಕಡವಾಡ…

2 hours ago

ಪುತ್ತೂರು: ಹಿಂಸಾತ್ಮಕ ರೀತಿಯಲ್ಲಿ ಕೇರಳಕ್ಕೆ ಅಕ್ರಮವಾಗಿ ಜಾನುವಾರುಗಳ ಸಾಗಾಟ ; ಓರ್ವ ಅರೆಸ್ಟ್‌, ಇಬ್ಬರು ಪರಾರಿ – vishwanews24

ಪುತ್ತೂರು: ಹಿಂಸಾತ್ಮಕ ರೀತಿಯಲ್ಲಿ ಕೇರಳಕ್ಕೆ ಅಕ್ರಮವಾಗಿ ಜಾನುವಾರುಗಳ ಸಾಗಾಟ ; ಓರ್ವ ಅರೆಸ್ಟ್‌, ಇಬ್ಬರು ಪರಾರಿ ಪುತ್ತೂರು: ಯಾವುದೇ ಪರವಾನಿಗೆಯಿಲ್ಲದೆ…

2 hours ago

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ -vishwanews24

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…

15 hours ago