ಬೆಂಗಳೂರು: ಕಾರಾಗೃಹ ಇಲಾಖೆ ಡಿಜಿಪಿಯಾಗಿ ಅಲೋಕ್​​ ಕುಮಾರ್​​ ಅಧಿಕಾರ ಸ್ವೀಕಾರ – vishwanews24

Featured, ರಾಜ್ಯ ನ್ಯೂಸ್

ಕಾರಾಗೃಹ, ಸುಧಾರಣಾ ಇಲಾಖೆ ಡಿಜಿಪಿಯಾಗಿ‌ ಅಲೋಕ್ ಕುಮಾರ್ ಅಧಿಕಾರ ಸ್ವೀಕಾರ

ಬೆಂಗಳೂರು : ಕಾರಾಗೃಹ ಇಲಾಖೆಯ ನೂತನ ಡಿಜಿಪಿಯಾಗಿ ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಅಧಿಕಾರ ಸ್ವೀಕರಿಸಿದ್ದಾರೆ.

ಫ್ರೀಡಂ ಪಾರ್ಕ್ ಮುಂಭಾಗದ ಕಾರಾಗೃಹ ಇಲಾಖೆಯ ಕೇಂದ್ರ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿ ಮಾತನಾಡಿದ ಅವರು, ಕಾರಾಗೃಹಗಳ ಸುಧಾರಣೆ ಮುಖ್ಯ. ಈ ಬಗ್ಗೆ ನಮ್ಮ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಬೇಕಿದೆ. ಬೈಲಹೊಂಗಲ ಕಾರಾಗೃಹ ಸೇರಿದಂತೆ ರಾಜ್ಯದ ಮೂಲೆ ಮೂಲೆಯಲ್ಲೂ ನಾನು ಕೆಲಸ ಮಾಡಿದ್ದು, ಇರುವ ಸಮಸ್ಯೆ ಅರಿತು ಅದನ್ನು ಪರಿಹರಿಸುವ ಕೆಲಸ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಕಾರಾಗೃಹ ಇಲಾಖೆಯ ಮುಖ್ಯಸ್ಥರಾಗಿದ್ದ ಬಿ. ದಯಾನಂದ್​ ಅವರನ್ನ ಪೊಲೀಸ್​​ ತರಬೇತಿ ಇಲಾಖೆಯ ಎಡಿಜಿಪಿಯಾಗಿ ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ.

8 ತಿಂಗಳಿನಿಂದ ಸ್ಥಗಿತಗೊಂಡಿದ್ದ ಕುಂದಾಪುರ- ತ್ರಾಸಿ – ಬಡಾಕೆರೆ  ಬಸ್ ಸಂಚಾರ ಮತ್ತೆ ಆರಂಭ – vishwanews24

ಇತ್ತೀಚೆಗೆ, ಪರಪ್ಪನ ಅಗ್ರಹಾರ ಕಾರಾಗೃಹದೊಳಗೆ ಮಾದಕ ವಸ್ತು ಹಾಗೂ ಸಿಗರೇಟ್‌ ಪ್ಯಾಕ್‌ಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಜೈಲಿನ ವಾರ್ಡನ್‌ನನ್ನು ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆ (ಕೆಎಸ್‌ಇಎಸ್‌ಎಫ್) ಅಧಿಕಾರಿಗಳು ವಶಕ್ಕೆ ಪಡೆದು ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಗೆ ಒಪ್ಪಿಸಿದ್ದರು.

Leave a Reply